ಪಿಂಕ್ ಬಾಲ್ ನಲ್ಲಿ ಸ್ಟಾರ್ಕ್ ಸ್ಟೈಕ್.. ಆ ಸಾಧನೆ ಮಾಡಿದ ಫಸ್ಟ್ ಬೌಲರ್.. starc saaksha tv
ಪಿಂಕ್ ಬಾಲ್ ನಲ್ಲಿ ನಡೆಯುವ ಡೇ ಅಂಡ್ ನೈಟ್ ಟೆಸ್ಟ್ ಮ್ಯಾಚ್ ನಲ್ಲಿ ಆಸ್ಟ್ರೇಲಿಯಾ ಬೌಲರ್ ಮಿಚಲ್ ಸ್ಟಾರ್ಕ್ ಮ್ಯಾಜಿಕ್ ಮಾಡಿದ್ದಾರೆ. ಪಿಂಕ್ ಬಾಲ್ ನಲ್ಲಿ ವಿಶ್ವದ ಯಾವುದೇ ಬೌಲರ್ ಮಾಡದ ಸಾಧನೆಯನ್ನ ಮಿಚಲ್ ಸ್ಟಾರ್ಕ್ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.
ಆಶಸ್ ಸರಣಿಯ ಭಾಗವಾಗಿ ಅಡಿಲೇಡ್ ನಲ್ಲಿ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ನಡುವೆ ಎರಡನೇ ಟೆಸ್ಟ್ ಪಂದ್ಯ ನಡೆಯುತ್ತಿದೆ. ಮೊದಲ ಇನ್ನೀಂಗ್ಸ್ ನಲ್ಲಿ ಆಸ್ಟ್ರೇಲಿಯಾ ಬೃಹತ್ ಮೊತ್ತ ಕಲೆಹಾಕಿ ಡಿಕ್ಲೇರ್ ಮಾಡಿಕೊಂಡಿದೆ.
ಇನ್ನ ಮೊದಲ ಇನ್ನಿಂಗ್ಸ್ ಆರಂಭಿಸಿರುವ ಇಂಗ್ಲೆಂಡ್, ನಾಯಕ ಜೋ ರೂಟ್ ಅಬ್ಬರದ ನಡುವೆಯೂ ಮಂಕಾಗಿದೆ. ಇದಕ್ಕೆ ಕಾರಣ ಆಸ್ಟ್ರೇಲಿಯಾದ ಸ್ಟಾರ್ ಬೌಲರ್ ಮಿಚಲ್ ಸ್ಟಾರ್ಕ್.
ಹೌದು..! ಮಿಚಲ್ ಸ್ಟಾರ್ಕ್ ಮಿಂಚಿನ ಬೌಲಿಂಗ್ ನಡೆಸಿ ಇಂಗ್ಲೆಂಡ್ ನ ಪ್ರಮುಖ ನಾಲ್ಕು ವಿಕೆಟ್ ಗಳನ್ನು ಪಡೆದಿದ್ದಾರೆ. ಇದರೊಂದಿಗೆ ಪಿಂಕ್ ಬಾಲ್ ನಲ್ಲಿ 50 ವಿಕೆಟ್ ಕಬಳಿಸಿದ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅಂದಹಾಗೆ ಅಂತರಾಷ್ಟ್ರೀಯ ಕ್ರಿಕೆಟ್ ನ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ 50 ವಿಕೆಟ್ ಪಡೆದ ವಿಶ್ವದ ಮೊದಲ ಬೌಲರ್ ಎಂಬ ದಾಖಲೆ ನಿರ್ಮಿಸಿದ್ದಾರೆ. ಇಂಗ್ಲೆಂಡ್ ನ ಮೊದಲ ಇನ್ಸಿಂಗ್ಸ್ ನಲ್ಲಿ ಸ್ಟುವರ್ಟ್ ಬ್ರಾಡ್ ವಿಕೆಟ್ ಪಡೆಯುವ ಮೂಲಕ ಈ ಸಾಧನೆ ಮಾಡಿದ್ದಾರೆ.
ಇಲ್ಲಿಯವರೆಗೂ 9 ಡೇ ಅಂಡ್ ನೈಟ್ ಪಂದ್ಯಗಳನ್ನು ಆಡಿರುವ ಸ್ಟಾರ್ಕ್ 18.10 ಸರಾಸರಿಯಲ್ಲಿ 50 ವಿಕೆಟ್ ಗಳಿಸಿದ್ದಾರೆ. ಇದರಲ್ಲಿ ಒಂದು ಇನ್ನಿಂಗ್ಸ್ ನಲ್ಲಿ ಮೂರು ಬಾರಿ ಐದು ವಿಕೆಟ್ ಪಡೆದಿದ್ದಾರೆ. ಪಾಕಿಸ್ತಾನದ ಮೇಲೆ 66 ರನ್ ಗಳಿಗೆ ಆರು ವಿಕೆಟ್ ಕಬಳಿಸಿರೋದು ಸ್ಟಾರ್ಕ್ ರ ಅತ್ಯುತ್ತಮ ಸಾಧನೆಯಾಗಿದೆ.
ಇನ್ನು ಡೇ ಅಂಡ್ ನೈಟ್ ಟೆಸ್ಟ್ ಮ್ಯಾಚ್ ಗಳಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಗಳ ಪಟ್ಟಿಯಲ್ಲಿ ಸ್ಟಾರ್ಕ್ ಮೊದಲ ಸ್ಥಾನದಲ್ಲಿದ್ದರೇ ಆಸ್ಟ್ರೇಲಿಯಾದ ಇನ್ನೊಬ್ಬ ವೇಗದ ಬೌಲರ್ ಹೆಂಜಲ್ ವುಡ್ 32 ವಿಕೆಟ್ ಗಳೊಂದಿಗೆ ನಂತರದ ಸ್ಥಾನದಲ್ಲಿದ್ದಾರೆ.
ಇದು ಹೀಗಿದ್ದರೇ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಆಶಸ್ ಸರಣಿಯ ಎರಡನೇ ಪಂದ್ಯದ ಮೇಲೆ ಆಸೀಸ್ ಬಿಗಿ ಹಿಡಿತ ಸಾಧಿಸಿದೆ. ಮೂರನೇ ದಿನದಾಟ ಮುಗಿಯುವ ವೇಳೆಗೆ ಎರಡನೇ ಇನ್ನಿಂಗ್ಸ್ ನಲ್ಲಿ ಆಸ್ಟ್ರೇಲಿಯಾ ಒಂದು ವಿಕೆಟ್ ನಷ್ಟಕ್ಕೆ 45 ರನ್ ಗಳಿಸಿದ್ದು, 282 ರನ್ ಗಳ ಮುನ್ನಡೆ ಸಾಧಿಸಿದೆ. ಇದಕ್ಕೂ ಮುನ್ನಾ ಇಂಗ್ಲೆಂಡ್ ತನ್ನ ಮೊದಲ ಇನ್ನಿಂಗ್ಸ್ ನಲ್ಲಿ 236 ರನ್ ಗಳಿಗೆ ಆಲೌಟ್ ಆಗಿದೆ.
ಇನ್ನು ಐದು ಮ್ಯಾಚ್ ಗಳ ಆಶಸ್ ಸರಣಿಯಲ್ಲಿ ಆಸ್ಟ್ರೆಲಿಯಾ ಮೊದಲ ಮ್ಯಾಚ್ ಗೆಲ್ಲುವುದರ ಮೂಲಕ 1-0 ಅಂತರದೊಂದಿಗೆ ಮುನ್ನಡೆ ಸಾಧಿಸಿದೆ.