ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗಾಗಿ ಟೀಮ್ ಇಂಡಿಯಾ ಏಕದಿನ ತಂಡದ ನಾಯಕನಾಗಿ ರೋಹಿತ್ ಶರ್ಮಾ ಅವರನ್ನು ಆಯ್ಕೆ ಮಾಡಲಾಗಿದೆ. ಈ ಮೂಲಕ ಏಕದಿನ ಹಾಗೂ ಟಿ20 ತಂಡಕ್ಕೆ ಹಿಟ್ಮ್ಯಾನ್ ಗೆ ನಾಯಕನ ಸ್ಥಾನ ನೀಡಲಾಗಿದೆ. ಟಿ20 ವಿಶ್ವಕಪ್ ಬಳಿಕ ವಿರಾಟ್ ಕೊಹ್ಲಿ ನಾಯಕನ ಸ್ಥಾನದಿಂದ ಕೆಳಗಿಳಿದಿದ್ದರು. ಕೊಹ್ಲಿ ಏಕದಿನ ಹಾಗೂ ಟೆಸ್ಟ್ ತಂಡದ ನಾಯಕನಾಗಿ ಮುಂದುವರೆಯುವುದಾಗಿ ತಿಳಿಸಿದ್ದರು. ಆದರೀಗ ವಿರಾಟ್ ಕೊಹ್ಲಿಯನ್ನು ಏಕದಿನ ತಂಡದ ನಾಯಕ ಸ್ಥಾನದಿಂದ ಕೂಡ ಕೆಳಗಿಳಿಸಲಾಗಿದೆ. ಬದಲಿಗೆ ರೋಹಿತ್ ಶರ್ಮಾ ಅವರನ್ನು ನಾಯಕನಾಗಿ ಆಯ್ಕೆ ಮಾಡಲಾಗಿದೆ. ಕೊಹ್ಲಿ ಟೆಸ್ಟ್ ತಂಡದ ಕ್ಯಾಪ್ಟನ್ ಆಗಿ ಮಾತ್ರ ಮುಂದುವರೆಯಲಿದ್ದಾರೆ.
ಸೀಮಿತ ಓವರ್ಗಳ ತಂಡದ ಸಂಪೂರ್ಣ ಜವಾಬ್ದಾರಿ ರೋಹಿತ್ ಶರ್ಮಾ ಹೆಗಲೇರಿದೆ. ವಿರಾಟ್ ಕೊಹ್ಲಿ ಟೀಮ್ ಇಂಡಿಯಾ ಟೆಸ್ಟ್ ತಂಡದ ನಾಯಕನಾಗಿ ಮುಂದುವರೆಯಲಿದ್ದು, ಅದರಂತೆ ದಕ್ಷಿಣ ಆಫ್ರಿಕಾ ಸರಣಿಯಲ್ಲೂ ಅವರು ನಾಯಕರಾಗಿ ತಂಡವನ್ನು ಮುನ್ನಡೆಸಲಿದ್ದಾರೆ.