ಆಸ್ಟ್ರೇಲಿಯಾ ಕ್ರಿಕೆಟ್ ತನ್ನ ಐತಿಹಾಸಿಕ ಭಾರತ ಪ್ರವಾಸವನ್ನು ಪ್ರಕಟಿಸಿದೆ. ಮುಂದಿನ ತಿಂಗಳು ಶ್ರೀಲಂಕಾದಲ್ಲಿ ಪ್ರಾರಂಭವಾಗುವ ಪ್ರವಾಸವು 2023 ರವರೆಗೆ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮುಂದಿನ ವರ್ಷ ಫೆಬ್ರವರಿ-ಮಾರ್ಚ್‌ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯು ಸಹ ಈ ವೇಳಾಪಟ್ಟಿಯ ಭಾಗವಾಗಿದೆ.
ಈ ಸರಣಿಯಡಿ ಭಾರತ ಪ್ರವಾಸದಲ್ಲಿ ಆಸ್ಟ್ರೇಲಿಯಾ ತಂಡ ನಾಲ್ಕು ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಭಾರತ ಉತ್ತಮ ಪ್ರದರ್ಶನ ನೀಡುತ್ತಿದೆ. ಕಳೆದ ಮೂರು ಪ್ರಶಸ್ತಿಗಳನ್ನು ಟೀಮ್ ಇಂಡಿಯಾ ಪಡೆದು ಬೀಗಿದೆ. ಕಳೆದ ಬಾರಿ ಆಸ್ಟ್ರೇಲಿಯಾದಲ್ಲಿ ನಡೆದಿದ್ದ ಬಾರ್ಡರ್-ಗವಾಸ್ಕರ್ ಸರಣಿಯನ್ನು ಟೀಮ್ ಇಂಡಿಯಾ 2-1 ರಿಂದ ಗೆದ್ದು ಬೀಗಿತ್ತು.

ಬಾರ್ಡರ್-ಗವಾಸ್ಕರ್ ಟ್ರೋಫಿ
ಈ ಸರಣಿಯ ಮೊದಲ ಆವೃತ್ತಿ 1996-97ರಲ್ಲಿ ಆಡಲಾಯಿತು. ಕಳೆದ ಬಾರಿ 2020-21ರಲ್ಲಿ ಆಸ್ಟ್ರೇಲಿಯಾದಲ್ಲಿ ಈ ಸರಣಿಯನ್ನು ಆಡಲಾಯಿತು. 2016-17ರಲ್ಲಿ ಭಾರತದಲ್ಲಿ ಕೊನೆಯ ಬಾರಿಗೆ ಈ ಸರಣಿ ನಡೆದಿತ್ತು. ಮತ್ತು ಸರಣಿಯಲ್ಲಿ, ಭಾರತವು ಆಸ್ಟ್ರೇಲಿಯಾವನ್ನು 2-1 ಅಂತರದಿಂದ ಸೋಲಿಸಿತ್ತು. ಈ ಸರಣಿಯಲ್ಲಿ ಭಾರತದ ಆಲ್‌ರೌಂಡರ್ ರವೀಂದ್ರ ಜಡೇಜಾ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು.

ಫೆಬ್ರವರಿ-ಮಾರ್ಚ್ ತಿಂಗಳಲ್ಲಿ ಆಸ್ಟ್ರೇಲಿಯಾ ತಂಡ ಭಾರತ ಪ್ರವಾಸ ಬೆಳೆಸಲಿದ್ದು, ಹಿಂದಿನ ಸೋಲಿಗೆ ಸೇಡು ತೀರಿಸಿಕೊಳ್ಳಲು ಪ್ಲಾನ್ ಮಾಡಿಕೊಂಡಿದೆ. ಪಾಕಿಸ್ತಾನ ವಿರುದ್ಧದ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡದ ಇತ್ತೀಚಿನ ಪ್ರದರ್ಶನವು ಖಂಡಿತವಾಗಿಯೂ ಭಾರತದ ವಿರುದ್ಧದ ಸರಣಿಗೆ ಆಸ್ಟ್ರೇಲಿಯಾಕ್ಕೆ ಬೂಸ್ಟರ್ ನೀಡಿದಂತಿದೆ.