T20 ಮಹಾಸಂಗ್ರಾಮ ಆರಂಭಕ್ಕೂ ಮುನ್ನ ಟೀಂ ಇಂಡಿಯಾ(TEAM INDIA) ಸಾಲು ಸಾಲು ಸರಣಿಗಳನ್ನು ಗೆಲ್ಲುತ್ತಿರುವುದು, ತಂಡದ ಜೋಶ್ ಹೆಚ್ಚಿಸಿದೆ. ಆಸ್ಟ್ರೇಲಿಯಾ ನಂತರ ದಕ್ಷಿಣ ಆಫ್ರಿಕಾ(SOUTH AFRICA) ವಿರುದ್ಧವೂ ಭಾರತ 2-0ಅಂತರದಿಂದ ಸರಣಿಯನ್ನು ವಶಪಡಿಸಿಕೊಂಡಿದೆ.
ಹೀಗಾಗಿ, ಮಂಗಳವಾರ ಇಂದೋರಿನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಮೂರನೇ T20 ಪಂದ್ಯದಲ್ಲಿ ಕೋಚ್ ರಾಹುಲ್ ದ್ರಾವಿಡ್(RAHUL DRAVID) ಹಲವು ಪ್ರಯೋಗಗಳಿಗೆ ಕೈಹಾಕುವ ಸಾಧ್ಯತೆ ಇದೆ.
ಟೀಂ ಇಂಡಿಯಾಕ್ಕೆ ದೊಡ್ಡ ತಲೆನೋವು ಇದ್ದಿದ್ದೇ ಮಾಜಿ ನಾಯಕ ವಿರಾಟ್ ಕೊಹ್ಲಿ(VIRAT KOHLI) ಕಳಪೆ ಬ್ಯಾಟಿಂಗ್. ಆದರೆ, ಕಿಂಗ್ ಕೊಹ್ಲಿ ಏಷ್ಯಾ ಕಪ್ ಟೂರ್ನಿಯಲ್ಲಿ ಶತಕ ಸಿಡಿಸುವ ಮೂಲಕ ಗ್ರೇಟ್ ಕಮ್ ಬ್ಯಾಕ್ ಮಾಡಿದ್ದಾರೆ. ಅಲ್ಲದೆ, ಆಸೀಸ್ ಹಾಗೂ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡುತ್ತಿದ್ದಾರೆ. ಹೀಗಾಗಿ, ನಾಳೆ ನಡೆಯಲಿರುವ ಪಂದ್ಯಕ್ಕೆ ವಿರಾಟ್ ಕೊಹ್ಲಿ ಜೊತೆಗೆ ಆರಂಭಿಕ, ಕನ್ನಡಿಗ ಕೆ.ಎಲ್.ರಾಹುಲ್(KL RAHUL) ಸೇರಿದಂತೆ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಹೆಚ್ಚಿದೆ. ಈ ಕುರಿತು ಬಿಸಿಸಿಐ ಹಿರಿಯ ಅಧಿಕಾರಿಗಳು ಕೂಡ ಮಾಹಿತಿ ನೀಡಿದ್ದಾರೆ.
ಮೂರನೇ T20ಯಲ್ಲಿ ಕೊಹ್ಲಿ, ರಾಹುಲ್ ಬದಲಿಗೆ ಶ್ರೇಯಸ್ ಅಯ್ಯರ್ ಮತ್ತು ಮೊಹಮ್ಮದ್ ಸಿರಾಜ್ ಅವರು ಕಣಕ್ಕಿಳಿಯುವ ಟೀಂ ಮ್ಯಾನೇಜ್ಮೆಂಟ್ ಚಿಂತನೆ ನಡೆಸಿದೆ. ಹಾಗೆಯೇ, ಎರಡನೇ ಪಂದ್ಯದಲ್ಲಿ ವಿಕೆಟ್ ಕೀಪರ್ ರಿಷಬ್ ಪಂತ್‌ಗೆ ಬ್ಯಾಟಿಂಗ್ ಮಾಡುವ ಅವಕಾಶ ಸಿಕ್ಕಿರಲಿಲ್ಲ. ಆದ್ದರಿಂದ, ಪ್ಯಾಂತ್ ಬ್ಯಾಟಿಂಗ್ ಕ್ರಮಾಂಕದಲ್ಲಿ ಭಡ್ತಿ ಪಡೆಯಲಿದ್ದಾರೆ ಎಂದು ವರದಿಯಾಗಿದೆ. ಟಿ20 ವಿಶ್ವಕಪ್ನಲ್ಲಿ ಸ್ಟ್ಯಾಂಡ್‌ಬೈ ಆಟಗಾರ ಮೊಹಮ್ಮದ್ ಶಮಿಗೂ ನಾಳೆ ಸ್ಥಾನ ಸಿಗಲಿದೆ ಎನ್ನಲಾಗಿದೆ.
೩ನೇ ಟಿ20ಗೆ ಭಾರತ ತಂಡ : ರೋಹಿತ್ ಶರ್ಮಾ (ನಾಯಕ), ರಿಷಬ್ ಪಂತ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ದೀಪಕ್ ಚಾಹರ್, ಮೊಹಮ್ಮದ್ ಸಿರಾಜ್.