ಐಪಿಎಲ್ 2022 ರ 48 ನೇ ಲೀಗ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ಆಲ್ ರೌಂಡರ್ ರಾಶೀದ್ ಖಾನ್ ಅವರು ತಮ್ಮ ಇನ್ನಿಂಗ್ಸ್‌ನ ಮೊದಲ ಎಸೆತದಲ್ಲಿ ಖಾತೆ ತೆರೆಯದೆ ಗೋಲ್ಡನ್ ಡಕ್‌ಗೆ ಔಟಾದರು. ಈ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗುವುದರೊಂದಿಗೆ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಔಟಾದ ದಾಖಲೆಯನ್ನೂ ಹೊಂದಿದ್ದಾರೆ.

ಗುಜರಾತ್ ಟೈಟಾನ್ಸ್ ಆಲ್ ರೌಂಡರ್ ರಶೀದ್ ಖಾನ್ ಪಂಜಾಬ್ ಕಿಂಗ್ಸ್ ವಿರುದ್ಧ ಶೂನ್ಯಕ್ಕೆ ತಮ್ಮ ವಿಕೆಟ್ ಒಪ್ಪಿಸಿದರು. ರಾಶೀದ್ ಶೂನ್ಯಕ್ಕೆ ಔಟಾದ ಲೆಕ್ಕಾಚಾರದಲ್ಲಿ T20 ಕ್ರಿಕೆಟ್‌ನಲ್ಲಿ ಅಗ್ರ ಸ್ಥಾನಕ್ಕೆ ತಲುಪಿದರು. ರಶೀದ್ ಖಾನ್ ಶೂನ್ಯಕ್ಕೆ ಟಿ20 ಕ್ರಿಕೆಟ್‌ನಲ್ಲಿ 33 ನೇ ಬಾರಿ ಔಟ್ ಆದರು. ಚುಟುಕು ಕ್ರಿಕೆಟ್ ನಲ್ಲಿ ಅತಿ ಹೆಚ್ಚು ಬಾರಿ ಶೂನ್ಯಕ್ಕೆ ಔಟ್ ಆದ ಎರಡನೇ ಸ್ಥಾನದಲ್ಲಿ ಸುನಿಲ್ ನರೈನ್ ಕಾಣಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಕ್ರಿಸ್ ಗೇಲ್ ಮೂರನೇ ಸ್ಥಾನದಲ್ಲಿದ್ದಾರೆ.

ರಶೀದ್ ಖಾನ್ ಐಪಿಎಲ್‌ನಲ್ಲಿ ಅತಿ ಹೆಚ್ಚು ಬಾರಿ ಔಟ್ ಆದ ವಿದೇಶಿ ಆಟಗಾರ ಎನಿಸಿಕೊಂಡರು ಐಪಿಎಲ್‌ನಲ್ಲಿ ಅತಿ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ವಿದೇಶಿ ಆಟಗಾರರ ಪಟ್ಟಿಯಲ್ಲಿ ರಾಶೀದ್ ಖಾನ್ ಹಾಗೂ ಗ್ಲೇನ್ ಮ್ಯಾಕ್ಸ್‍ವೆಲ್ ಅಗ್ರ ಸ್ಥಾನದಲ್ಲಿದ್ದಾರೆ. ಗ್ಲೆನ್ ಮ್ಯಾಕ್ಸ್‌ವೆಲ್ 12 ಬಾರಿ ಸೊನ್ನೆಗೆ ಔಟಾದಿದ್ದಾರೆ. ಇದೀಗ ರಶೀದ್ ಖಾನ್ ಈ ಸಾಧನೆಯನ್ನು ಸರಿಗಟ್ಟಿದರು. ವಿದೇಶಿ ಆಟಗಾರರ ಪಟ್ಟಿಯಲ್ಲಿ ಅತಿ ಹೆಚ್ಚು ಬಾರಿ ಶೂನ್ಯಕ್ಕೆ ಔಟ್ ಆದ ಆಟಗಾರರ ಪಟ್ಟಿಯಲ್ಲಿ ಸುನಿಲ್ ನರೈನ್ ಮೂರನೇ ಸ್ಥಾನದಲ್ಲಿದ್ದಾರೆ.