IND vs BAN ನಾಳೆ ಭಾರತ-ಬಾಂಗ್ಲಾ ನಡುವೆ ನಿರ್ಣಾಯಕ ಪಂದ್ಯ ನಡೆಯಲಿದೆ. ಈ ಪಂದ್ಯ ಉಭಯ ತಂಡಗಳಿಗೂ ಅತ್ಯಂತ ಮಹತ್ವದ್ದಾಗಿದೆ. ಉಭಯ ತಂಡಗಳು ಗೆಲ್ಲಲ್ಲೆಬೇಕಾದ ಒತ್ತಡಕ್ಕೆ ಸಿಲುಕಿವೆ. ಆದರೆ, ಈ ಪಂದ್ಯ ನಡೆಯುವುದೇ ಅನುಮಾನ ಎಂದು ಹೇಳಲಾಗುತ್ತಿದೆ.
ಪಂದ್ಯದ ಮೇಲೆ ವರುಣನ ಕಾರ್ಮೋಡ ಕವಿದಿದೆ. ಇದಕ್ಕೆ ಪೂರಕವೆಂಬಂತೆ ಅಡಿಲೇಡ್ನಲ್ಲಿಂದು ಮಳೆ ಸುರಿಯುತ್ತಿದ್ದು, ನಾಳೆ ಕೂಡ ಶೇ.60-70ರಷ್ಟು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಷ್ಟೇ ಅಲ್ಲದೆ ದಿನವಿಡೀ ಮೋಡ ಕವಿದ ವಾತಾವರಣವಿರಲಿದೆ ಎಂದು ವರದಿಯಾಗಿದೆ. ವರುಣದ ಅಡ್ಡಿಯಿಂದಾಗಿ ಇಂದು ಟೀಂ ಇಂಡಿಯಾ ಒಳಾಂಗಣ ಕ್ರೀಡಾಂಗಣದಲ್ಲಿ ಅಭ್ಯಾಸ ನಡೆಸಬೇಕಾಯಿತು. ಹೀಗಾಗಿ, ನಾಳೆ ಪಂದ್ಯ ಬಗ್ಗೆ ಅಭಿಮಾನಿಗಳನ್ನು ಚಿಂತೆಗೀಡುಮಾಡಿದೆ.
ನಿರೀಕ್ಷೆಯಂತೆ ನಾಳೆಯ ಭಾರತ ಮತ್ತು ಬಾಂಗ್ಲಾದೇಶ ಪಂದ್ಯ ಮಳೆಯಿಂದಾಗಿ ರದ್ದಾದರೆ, ಎರಡು ತಂಡಗಳಿಗೆ ತಲಾ ಒಂದು ಅಂಕ ಸಿಗಲಿದೆ. ಆದರೆ, ಎರಡು ತಂಡಗಳ ಸೆಮೀಸ್ ಹಾದಿ ಕಷ್ಟವಾಗಲಿದೆ. ಅಂಕಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾ ಮೊದಲ ಸ್ಥಾನದಲ್ಲಿದ್ದರೆ, ಟೀಂ ಇಂಡಿಯಾ ಮೂರು ಪಂದ್ಯಗಳಲ್ಲಿ ಎರಡು ಗೆಲುವು ಮತ್ತು ಒಂದು ಸೋಲಿನೊಂದಿಗೆ ನಾಲ್ಕು ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಬಾಂಗ್ಲಾದೇಶ ಕೂಡ ನಾಲ್ಕು ಅಂಕಗಳನ್ನು ಹೊಂದಿದೆ. ಒಂದು ವೇಳೆ ನಾಳೆಯ ಪಂದ್ಯ ನಡೆಯದೆ ಹೋದರೆ, ತಮ್ಮ ಮುಂದಿನ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಲಿವೆ.
ಭಾರತ ಸಂಭಾವ್ಯ ಪ್ಲೇಯಿಂಗ್ 11: ರೋಹಿತ್ ಶರ್ಮಾ(ನಾಯಕ), ಕೆ.ಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ / ರಿಷಭ್ ಪಂತ್(ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಯುಜವೇಂದ್ರ ಚಹಾಲ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಷ್ದೀಪ್ ಸಿಂಗ್
ಬಾಂಗ್ಲಾದೇಶ ಸಂಭಾವ್ಯ ಪ್ಲೇಯಿಂಗ್ 11: ಬಾಂಗ್ಲಾದೇಶ ಸಂಭಾವ್ಯ 11: ನಜ್ಮುಲ್ ಹೊಸೈನ್ ಶಾಂಟೊ, ಸೌಮ್ಯ ಸರ್ಕಾರ್, ಲಿಟ್ಟನ್ ದಾಸ್, ಶಕೀಬ್ ಅಲ್ ಹಸನ್ (ನಾಯಕ), ಅಫೀಫ್ ಹೊಸೈನ್, ಯಾಸಿರ್ ಅಲಿ, ಮೊಸದ್ದೆಕ್ ಹೊಸೈನ್, ನೂರುಲ್ ಹಸನ್ (ವಿಕೆಟ್ ಕೀಪರ್), ಮುಸ್ತಾಫಿಜುರ್ ರೆಹಮಾನ್, ಹಸನ್ ಮಹಮೂದ್, ತಸ್ಕಿನ್ ಅಹ್ಮದ್.
India vs Bangladesh Adelaide Weather Update: Check Latest Rain Update, Pitch Report & Probable XIs
ಇದನ್ನೂ ಓದಿ https://sportskarnataka.com/ind-v-ban-india-…ainst-bangladesh/