ಆಸ್ಟ್ರೇಲಿಯಾ ವಿರುದ್ಧದ 3ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯಲು ಸಜ್ಜಾಗಿರುವ ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ, ರಾಜ್ಕೋಟ್ ಮೈದಾನದಲ್ಲಿ ತಮ್ಮ ಮೊದಲ ಶತಕ ಬಾರಿಸುವ ನಿರೀಕ್ಷೆಯಲ್ಲಿದ್ದಾರೆ.
ಟೀಂ ಇಂಡಿಯಾದ ʼರನ್ ಮಷಿನ್ʼ ವಿರಾಟ್ ಕೊಹ್ಲಿ, ಭಾರತ ಸೇರಿದಂತೆ ವಿಶ್ವದೆಲ್ಲೆಡೆ ತಮ್ಮ ಶ್ರೇಷ್ಠ ಬ್ಯಾಟಿಂಗ್ನಿಂದ ಅಬ್ಬರಿಸಿದ್ದಾರೆ. ಆದರೆ ರಾಜ್ಕೋಟ್ನಲ್ಲಿ ಈವರೆಗೂ ಕೊಹ್ಲಿ ಏಕೈಕ ಶತಕವನ್ನ ಸಹ ಬಾರಿಸಿಲ್ಲ. ಹೀಗಾಗಿ ಏಕದಿನ ಸರಣಿಯ ಆರಂಭಿಕ ಎರಡು ಪಂದ್ಯಗಳ ವಿಶ್ರಾಂತಿ ಬಳಿಕ ತಂಡಕ್ಕೆ ಮರಳಿರುವ ಕೊಹ್ಲಿ, ಕೊನೆಯ ಪಂದ್ಯದಲ್ಲಿ ಶತಕ ಬಾರಿಸುವ ನಿರೀಕ್ಷೆಯೊಂದಿಗೆ 3ನೇ ಏಕದಿನ ಪಂದ್ಯಕ್ಕೆ ತಯಾರಿ ಮಾಡಿಕೊಂಡಿದ್ದಾರೆ.
ರಾಜ್ಕೋಟ್ನಲ್ಲಿ ಈವರೆಗೂ ಆಡಿರುವ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಉತ್ತಮ ದಾಖಲೆಯನ್ನೇ ಹೊಂದಿದ್ದಾರೆ. ಈವರೆಗೂ ರಾಜ್ಕೋಟ್ನಲ್ಲಿ ಮೂರು ಪಂದ್ಯಗಳನ್ನ ಆಡಿರುವ ಕೊಹ್ಲಿ, ಎರಡು ಅರ್ಧಶತಕಗಳನ್ನ ಬಾರಿಸಿದ್ದು, 56.67ರ ಸರಾಸರಿಯಲ್ಲಿ 170 ರನ್ ಕಲೆಹಾಕಿದ್ದಾರೆ. ಆದರೆ ರಾಜ್ಕೋಟ್ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಈವರೆಗೂ ಕೊಹ್ಲಿ ಅವರ ಬ್ಯಾಟ್ನಿಂದ ಒಂದು ಶತಕ ದಾಖಲಾಗಿಲ್ಲ.
ಹೀಗಾಗಿ 3ನೇ ಪಂದ್ಯದಲ್ಲಿ ಶತಕ ಬಾರಿಸುವತ್ತ ಕಿಂಗ್ ಕೊಹ್ಲಿ ಹೆಚ್ಚಿನ ನಿಗಾವಹಿಸಿದ್ದಾರೆ. ಅಲ್ಲದೇ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ಈಗಾಗಲೇ 2-0 ಅಂತರದಲ್ಲಿ ಸರಣಿ ತನ್ನದಾಗಿಸಿಕೊಂಡಿದೆ. ಹೀಗಾಗಿ ಅಂತಿಮ ಪಂದ್ಯದಲ್ಲಿ ಯಾವುದೇ ಒತ್ತಡವಿಲ್ಲದೆ ಆಡುವ ಅವಕಾಶ ಕೊಹ್ಲಿಗೆ ಲಭಿಸಿದ್ದು, ಈ ನಿಟ್ಟಿನಲ್ಲಿ ವಿರಾಟ್ ಅವರಿಂದ ದೊಡ್ಡ ಇನ್ನಿಂಗ್ಸ್ ಬರುವ ಬಗ್ಗೆ ನಿರೀಕ್ಷೆ ಹೆಚ್ಚಾಗಿದೆ.
IND v AUS, Virat Kohli, Team India, Australia, Sports Karnataka