ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಅಧ್ಯಕ್ಷ ರಮೀಜ್ ರಾಜಾ ಅವರು ಭಾರತ, ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ತಂಡಗಳೊಂದಿಗೆ ಪ್ರತಿ ವರ್ಷ ನಾಲ್ಕು ರಾಷ್ಟ್ರಗಳ ಪಂದ್ಯಾವಳಿಯನ್ನು ಪ್ರಸ್ತಾಪಿಸಲು ನಿರ್ಧರಿಸಿದ್ದಾರೆ.
ಭಾರತ ಕ್ರಿಕೆಟ್ ಮಂಡಳಿ (ಬಿಸಿಸಿಐ) ತುಟಿ ಬಿಚ್ಚದೇ ಇದ್ದರೂ. ಪಿಸಿಬಿಯ ವಿಶ್ವಾಸಾರ್ಹ ಮೂಲವೊಂದು ರಮೀಜ್ ಅವರು ಇನ್ನೂ ತಮ್ಮ ಪ್ರಸ್ತಾವನೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಮತ್ತು ಇತರ ಕೆಲವು ಪ್ರಮುಖ ಮಂಡಳಿಯ ಅಧಿಕಾರಿಗಳೊಂದಿಗೆ ಮಾತನಾಡಿದ್ದಾರೆ ಎಂದು ಹೇಳಿದರು.
ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ರಮೀಜ್ ಅವರ ಪ್ರಸ್ತಾಪವನ್ನು ತಿರಸ್ಕರಿಸಿದರು. ಆದರೆ ಕ್ರಿಕೆಟ್ ಆಸ್ಟ್ರೇಲಿಯಾದ ಮುಖ್ಯ ಕಾರ್ಯನಿರ್ವಾಹಕ ನಿಕ್ ಹಾಕ್ಲಿ ಅವರು ಭಾರತ ಮತ್ತು ಪಾಕಿಸ್ತಾನದೊಂದಿಗೆ ತ್ರಿಕೋನ ಸರಣಿಯನ್ನು ಆಯೋಜಿಸಲು ನಾವು ಸಿದ್ಧರಿದ್ದೇವೆ ಎಂದು ಹೇಳಿದರು.
ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯಕ್ಕಾಗಿ ನಿಕ್ ಹಾಕ್ಲಿ ರಾವಲ್ಪಿಂಡಿಗೆ ಬಂದಿದ್ದರು. “ನೀವು ನನ್ನನ್ನು ಕೇಳಿದರೆ, ಕ್ರಿಕೆಟ್ ಆಸ್ಟ್ರೇಲಿಯಾ ಖಂಡಿತವಾಗಿಯೂ ಈ ಪ್ರಸ್ತಾಪವನ್ನು ಪರಿಗಣಿಸುತ್ತೇವೆ” ಎಂದು ಹಾಕ್ಲಿ ಸುದ್ದಿಗಾರರಿಗೆ ತಿಳಿಸಿದರು.
ಆಸ್ಟ್ರೇಲಿಯ ತಂಡ 24 ವರ್ಷಗಳ ನಂತರ ಪಾಕಿಸ್ತಾನ ಪ್ರವಾಸಕ್ಕೆ (ಪಾಕಿಸ್ತಾನ Vs ಆಸ್ಟ್ರೇಲಿಯಾ) ಬಂದಿದೆ. ಇಲ್ಲಿ ಮೂರು ಟೆಸ್ಟ್, ಮೂರು ಏಕದಿನ ಹಾಗೂ ಒಂದು ಟಿ20 ಪಂದ್ಯವನ್ನು ಆಡಬೇಕಿದೆ. ಸರಣಿಯ ಮೊದಲ ಟೆಸ್ಟ್ ಡ್ರಾ ಆಗಿತ್ತು.
ಭಾರತ ಮತ್ತು ಪಾಕಿಸ್ತಾನ (ಭಾರತ ವಿರುದ್ಧ ಪಾಕಿಸ್ತಾನ) ನಡುವಿನ ದ್ವಿಪಕ್ಷೀಯ ಸರಣಿಗಳು ದೀರ್ಘಕಾಲದವರೆಗೂ ನಡೆದಿಲ್ಲ.
triangular series, India, Pak, Australia