ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಂದರೆ ವಿರಾಟ್ ಕೊಹ್ಲಿ ಮತ್ತು ಎಬಿಡಿ ವಿಲಿಯರ್ಸ್ ಅನ್ನುವ ಮಾತಿತ್ತು. ಆದರೆ ಕ್ರಿಕೆಟ್ಗೆ ದಿಢೀರ್ ಗುಡ್ ಬೈ ಹೇಳಿದ್ದ ಎಬಿಡಿ ವಿಲಿಯರ್ಸ್ ಐಪಿಎಲ್ಗೂ ಗುಡ್ ಬೈ ಹೇಳಿದ್ದರು.ಇದು ಆರ್ಸಿಬಿ ಅಭಿಮಾನಿಗಳಿಗೆ ಶಾಕ್ ನೀಡಿತ್ತು. ಈಗ ಎಬಿಡಿ ಮತ್ತೆ ತಂಡ ಸೆರಿಕೊಳ್ಳುತ್ತಿದ್ದಾರೆ.
ಈ ಬಾರಿ ಎಬಿಡಿ ಆಟಗಾರನಾಗಿ ತಂಡದಲ್ಲಿ ಇರುವುದಿಲ್ಲ. ಬದಲಾಗಿ ಮೆಂಟರ್ ಆಗಿ ಆರ್ಸಿಬಿ ಜೊತೆಗಿರಲಿದೆ. ಇದು ತಂಡದ ಆಟಗಾರರ ಉತ್ಸಾಹ ಇಮ್ಮಡಿಗೊಳಿಸಲಿದೆ.
ಎಬಿಡಿ ಆರ್ಸಿಬಿ ಪರ 156 ಐಪಿಎಲ್ ಪಂದ್ಯಗಳಾಡಿದ್ದರು. 4,491 ರನ್ಗಳನ್ನು ಕಲೆಹಾಕಿದ್ದರು. ಆರ್ಸಿಬಿ ಪರ ಅತೀ ಹೆಚ್ಚು ರನ್ ಬಾರಿಸಿದ ವಿದೇಶಿ ಬ್ಯಾಟರ್ ಎಂಬ ದಾಖಲೆಯನ್ನೂ ಕೂಡ ಹೊಂದಿದ್ದಾರೆ.
ಆರ್ಸಿಬಿ ತಂಡ ಕೋಚ್ ಸಂಜಯ್ ಬಂಗಾರ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಪ್ರತಿ ತಂಡಕ್ಕೂ ಬ್ಯಾಟಿಂಗ್ ಕೋಚ್ ಇರಬೇಕಾಗಿರುವುದು ಅನಿವಾರ್ಯ. ಅದರಲ್ಲೂ ಎಬಿಡಿ ಅವರಂತಹ ಆಟಗಾರನಿಗೆ ಅಂತಹ ಸ್ಥಾನ ನೀಡುವುದು ಅದು ತಂಡಕ್ಕೆ ಮತ್ತು ಆಟಗಾರರಿಗೆ ಒಳ್ಳೆಯದು ಎಂದಿದ್ದಾರೆ.