ಕಪಿಲ್ ದೇವ್ ದಾಖಲೆ ಮೇಲೆ ಅಶ್ವಿನ್ ಕಣ್ಣು Kapil Dev’s sportskarnataka
ಟೀಂ ಇಂಡಿಯಾದ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಟೆಸ್ಟ್ ಕ್ರಿಕೆಟ್ ನಲ್ಲಿ ಭಾರತದ ಪರ ಮತ್ತೊಂದು ದಾಖಲೆ ಮಾಡುವ ಸನಿಹದಲ್ಲಿದ್ದಾರೆ.
ಅಶ್ವಿನ್ ದಕ್ಷಿಣ ಆಫ್ರಿಕಾ ವಿರುದ್ಧ 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 7 ವಿಕೆಟ್ ಪಡೆದರೆ ಭಾರತದ ಪರ ಹೆಚ್ಚು ಟೆಸ್ಟ್ ವಿಕೆಟ್ ಪಡೆದ 2ನೇ ಬೌಲರ್ ಎಂಬ ದಾಖಲೆಗೆ ಪಾತ್ರರಾಗಲಿದ್ದಾರೆ.
ಸದ್ಯ 81 ಪಂದ್ಯಗಳನ್ನಾಡಿರುವ ಅಶ್ವಿನ್, 427 ವಿಕೆಟ್ ಪಡೆದಿದ್ದಾರೆ.
ಭಾರತ ತಂಡದ ಮಾಜಿ ನಾಯಕ ಕಪಿಲ್ ದೇವ್ 131 ಟೆಸ್ಟ್ ಪಂದ್ಯಗಳಿಂದ 434 ವಿಕೆಟ್ ಪಡೆದು, ಭಾರತದ ಪರ ಅತಿ ಹೆಚ್ಚು ಟೆಸ್ಟ್ ವಿಕೆಟ್ ಪಡೆದ ಬೌಲರ್ ಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.
ಆದ್ರೆ ದಕ್ಷಿಣಾ ಆಫ್ರಿಕಾ ನೆಲದಲ್ಲಿ ಅಶ್ವಿನ್ 7 ವಿಕೆಟ್ ಪಡೆದರೇ ಕಪಿಲ್ ದಾಖಲೆ ಮುರಿಯಲಿದೆ.
ಇನ್ನು ಭಾರತದ ಪರ ಅತಿ ಹೆಚ್ಚು ಟೆಸ್ಟ್ ವಿಕೆಟ್ ಪಡೆದ ಬೌಲರ್ ಗಳಲ್ಲಿ 619 ವಿಕೆಟ್ ಗಳ ಮೂಲಕ ಕನ್ನಡಿಗ ಅನಿಲ್ ಕುಂಬ್ಳೆ ಮೊದಲ ಸ್ಥಾನದಲ್ಲಿದ್ದಾರೆ.