Asia cup -2022- ಪಾಕ್ ವಿರುದ್ಧದ ಪಂದ್ಯಕ್ಕೆ ಕಿಂಗ್ ಕೊಹ್ಲಿ ಸಮರಭ್ಯಾಸ..!
ಪ್ರತಿಷ್ಠಿತ ಏಷ್ಯಾಕಪ್ ಟೂರ್ನಿಗೆ ಕ್ಷಣಗಣನೆ ಶುರುವಾಗಿದೆ. ಆಗಸ್ಟ್ 27ರಿಂದ ಯುಎಇನಲ್ಲಿ ನಡೆಯಲಿರುವ ಟೂರ್ನಿಗೆ ಆರು ತಂಡಗಳು ಕೂಡ ಭರದಿಂದ ತಯಾರಿ ನಡೆಸುತ್ತಿವೆ
ಈಗಾಗಲೇ ಯುಎಇನಲ್ಲಿ ಬೀಡು ಬಿಟ್ಟಿರುವ ಆರು ತಂಡಗಳ ಆಟಗಾರರು ಅಭ್ಯಾಸದಲ್ಲಿ ನಿರತರಾಗಿದ್ದಾರೆ.
ಭಾರತ, ಪಾಕಿಸ್ತಾನ ಮತ್ತು ಹಾಂಕಾಂಗ್ ತಂಡಗಳು ಎ ಬಣದಲ್ಲಿದ್ರೆ, ಶ್ರೀಲಂಕಾ, ಅಫಘಾನಿಸ್ತಾನ ಹಾಗೂ ಬಾಂಗ್ಲಾದೇಶ ತಂಡಗಳು ಬಿ ಬಣದಲ್ಲಿವೆ. ಆಗಸ್ಟ್ 28ರಂದು ಭಾರತ ಮತ್ತು ಪಾಕಿಸ್ತಾನ ನಡುವಿನ ಹೈ ವೋಲ್ಟೇಜ್ ಪಂದ್ಯ ನಡೆಯಲಿದೆ.
ಇನ್ನು ಟೂರ್ನಿಯ ಮುನ್ನವೇ ಟೀಮ್ ಇಂಡಿಯಾಗೆ ಆಘಾತವಾಗಿದೆ. ಹೆಡ್ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಹೀಗಾಗಿ ಇಂದು ಮತ್ತೆ ಅವರಿಗೆ ಟೆಸ್ಟ್ ನಡೆಸಲಿದೆ. ಟೀಮ್ ಇಂಡಿಯಾದ ಹಂಗಾಮಿ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ಅವರು ರೋಹಿತ್ ಪಡೆಗೆ ಮಾರ್ಗದರ್ಶನ ನೀಡುತ್ತಿದ್ದಾರೆ.
ಇನ್ನೊಂದೆಡೆ ಟೀಮ್ ಇಂಡಿಯಾ ಆಟಗಾರರು ದುಬೈನಲ್ಲಿ ಅಭ್ಯಾಸ ಕೂಡ ಶುರು ಮಾಡಿದ್ದಾರೆ. ಇಂಗ್ಲೆಂಡ್ ಸರಣಿಯ ನಂತರ ಇದೇ ಮೊದಲ ಬಾರಿ ಟೀಮ್ ಇಂಡಿಯಾ ಪರ ಆಡುತ್ತಿರುವ ವಿರಾಟ್ ಕೊಹ್ಲಿ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.
ಕಳೆದ ಮೂರು ವರ್ಷದಿಂದ ಶತಕದ ಬರ ಹಾಗೂ ರನ್ ಬರವನ್ನು ಎದುರಿಸುತ್ತಿರುವ ಕಿಂಗ್
Hello DUBAI 🇦🇪
Hugs, smiles and warm-ups as we begin prep for #AsiaCup2022 #AsiaCup | #TeamIndia 🇮🇳 pic.twitter.com/bVo2TWa1sz
— BCCI (@BCCI) August 24, 2022
ಕೊಹ್ಲಿ ಮತ್ತೆ ಬ್ಯಾಟಿಂಗ್ ಫಾರ್ಮ್ ಕಂಡುಕೊಂಡು ಕಮ್ ಬ್ಯಾಕ್ ಮಾಡುವ ಇರಾದೆಯಲ್ಲಿದ್ದಾರೆ. ನೆಟ್ಸ್ ನಲ್ಲಿ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ಕೂಡ ನೀಡಿದ್ದಾರೆ. ರವೀಂದ್ರ ಜಡೇಜಾ ಎಸೆತಗಳಿಗೆ ಕೊಹ್ಲಿ ದೊಡ್ಡ ಹೊಡೆತಗಳನ್ನು ಹೊಡೆಯವ ಮೂಲಕ ಗಮನ ಕೂಡ ಸೆಳೆದಿದ್ದರು.
ಇನ್ನೊಂದೆಡೆ, ವಿರಾಟ್ ಕೊಹ್ಲಿ ಮತ್ತು ಪಾಕಿಸ್ತಾನದ ನಾಯಕ ಬಾಬರ್ ಅಝಮ್ ಭೇಟಿಯಾಗಿ ಪರಸ್ಪರ ಮಾತುಕತೆ ಕೂಡ ನಡೆಸಿದ್ದಾರೆ. ಬಾಬರ್ ಅಝಮ್ ಅವರು ಇತ್ತೀಚೆಗೆ ಟ್ವಿಟರ್ ಮೂಲಕ ಕೊಹ್ಲಿ ಫಾರ್ಮ್ ಕಂಡುಕೊಳ್ಳಲಿ ಎಂದು ಹಾರೈಸಿದ್ದರು. ಇದಕ್ಕೆ ಕೊಹ್ಲಿ ಕೂಡ ಪ್ರತಿಕ್ರಿಯೆ ನೀಡಿದ್ದರು.
ಅಷ್ಟೇ ಅಲ್ಲ, ಏಷ್ಯಾಕಪ್ ಟೂರ್ನಿಯ ಮೊದಲ ಪಂದ್ಯದಲ್ಲೇ ಇಂಡೋ ಪಾಕ್ ನಡುವೆ ಹಣಾಹಣಿ ಕೂಡ ನಡೆಯಲಿದೆ. ಈ ಪಂದ್ಯದಲ್ಲಿ ವಿರಾಟ್ ಮತ್ತು ಬಾಬರ್ ನಡುವೆ ಯಾರು ದೊಡ್ಡ ಮೊತ್ತದ ರನ್ ಗಳಿಸುತ್ತಾರೆ ಅನ್ನೋ ಕುತೂಹಲವೂ ಇದೆ.
ಒಟ್ಟಿನಲ್ಲಿ ಟೀಮ್ ಇಂಡಿಯಾ ಪಾಕ್ ವಿರುದ್ಧ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ. 2021ರ ಟಿ-20 ವಿಶ್ವಕಪ್ ಸೋಲಿಗೆ ಪ್ರತಿಕಾರ ತೀರಿಸಿಕೊಳ್ಳಲು ರೋಹಿತ್ ಪಡೆ ಎಲ್ಲಾ ರೀತಿಯ ತಯಾರಿಗಳನ್ನು ಮಾಡಿಕೊಳ್ಳುತ್ತಿದೆ.