ಏಷ್ಯಾಕಪ್-2023ರ ಪಂದ್ಯಾವಳಿಗೆ ಭಾರತ ತಂಡ ಪ್ರಕಟಿಸಲಾಗಿದ್ದು, ಮಹತ್ವದ ಟೂರ್ನಿಗೆ ತಂಡದಲ್ಲಿ ಸ್ಥಾನ ಪಡೆದಿರುವ ಏಳು ಆಟಗಾರರು ಏಕದಿನ ಕ್ರಿಕೆಟ್ನಲ್ಲಿ ಮೊದಲ ಬಾರಿಗೆ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಆಡುವ ನಿರೀಕ್ಷೆಯಲ್ಲಿದ್ದಾರೆ.
ಏಷ್ಯಾಕಪ್ ಟೂರ್ನಿಗೆ ಆಯ್ಕೆ ಮಾಡಲಾಗಿರುವ 17 ಆಟಗಾರರಲ್ಲಿ ಬಹುತೇಕ ಯುವ ಆಟಗಾರರು ಏಕದಿನ ಕ್ರಿಕೆಟ್ನಲ್ಲಿ ಪಾಕಿಸ್ತಾನದ ವಿರುದ್ಧ ಆಡಿಲ್ಲ. ಹೀಗಾಗಿ ಏಷ್ಯಾಕಪ್ ಟೂರ್ನಿಯಂತಹ ಮಹತ್ವದ ವೇದಿಕೆಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಪಾಕಿಸ್ತಾನದ ಸವಾಲು ಎದುರಿಸಲು ಭಾರತದ ಏಳು ಮಂದಿ ಯುವ ಆಟಗಾರರು ಅತ್ಯಂತ ಉತ್ಸುಕರಾಗಿದ್ದಾರೆ.
ಶುಭ್ಮನ್ ಗಿಲ್: ಟೀಂ ಇಂಡಿಯಾದ ಯುವ ಆರಂಭಿಕ ಬ್ಯಾಟರ್ ಆಗಿರುವ ಶುಭ್ಮನ್ ಗಿಲ್, ಏಕದಿನ ಕ್ರಿಕೆಟ್ನಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. 2019ರ ಜನವರಿಯಲ್ಲಿ ಭಾರತ ತಂಡಕ್ಕೆ ಎಂಟ್ರಿಕೊಟ್ಟ ಗಿಲ್, ಈವರೆಗೂ 27 ಏಕದಿನ ಪಂದ್ಯವನ್ನಾಡಿದ್ದು, 1437 ರನ್ಗಳಿಸಿದ್ದಾರೆ. ಆದರೆ ಇದೇ ಮೊದಲ ಬಾರಿಗೆ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಆಡಲು ಶುಭ್ಮನ್ ಗಿಲ್ ತಯಾರಾಗಿದ್ದಾರೆ.
ಶ್ರೇಯಸ್ ಅಯ್ಯರ್: ಭಾರತ ತಂಡದ 4ನೇ ಕ್ರಮಾಂಕದ ಬ್ಯಾಟರ್ ಆಗಿರುವ ಶ್ರೇಯಸ್ ಅಯ್ಯರ್, ಏಕದಿನ ಕ್ರಿಕೆಟ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. 2017ರಲ್ಲಿ ಭಾರತ ತಂಡಕ್ಕೆ ಸೇರ್ಪಡೆಯಾದ ಶ್ರೇಯಸ್, ಈವರೆಗೂ 42 ಪಂದ್ಯಗಳಲ್ಲಿ 1631 ರನ್ಗಳಿಸಿದ್ದರು, ಏಕದಿನ ಕ್ರಿಕೆಟ್ನಲ್ಲಿ ಒಮ್ಮೆಯೂ ಪಾಕಿಸ್ತಾನದ ವಿರುದ್ಧ ಆಡಲಿಲ್ಲ.
ಸೂರ್ಯಕುಮಾರ್ ಯಾದವ್: ಟಿ20 ಕ್ರಿಕೆಟ್ನಲ್ಲಿ ಟೀಂ ಇಂಡಿಯಾದ ಬ್ಯಾಟಿಂಗ್ ಶಕ್ತಿಯಾಗಿರುವ ಸೂರ್ಯಕುಮಾರ್, ಏಕದಿನ ಕ್ರಿಕೆಟ್ನಲ್ಲಿ 26 ಪಂದ್ಯಗಳನ್ನಾಡಿ, 511 ರನ್ಗಳಿಸಿದ್ದಾರೆ. 2021ರಲ್ಲಿ ಭಾರತದ ಏಕದಿನ ತಂಡಕ್ಕೆ ಆಯ್ಕೆಯಾದ ಸೂರ್ಯಕುಮಾರ್, ಈ ಬಾರಿಯ ಏಷ್ಯಾಕಪ್ ಪಂದ್ಯಾವಳಿಯಲ್ಲಿ ಪಾಕ್ ತಂಡವನ್ನ ಎದುರು ಆಡಲಿ ಸಜ್ಜಾಗಿದ್ದಾರೆ.
ತಿಲಕ್ ವರ್ಮ: ಇತ್ತೀಚೆಗಷ್ಟೇ ಟೀಂ ಇಂಡಿಯಾದ ಟಿ20 ತಂಡದಲ್ಲಿ ಸ್ಥಾನ ಪಡೆದು ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಎಂಟ್ರಿಕೊಟ್ಟಿರುವ ಯುವ ಆಟಗಾರ ತಿಲಕ್ ವರ್ಮ, ಏಷ್ಯಾಕಪ್ ಮೂಲಕ ಏಕದಿನ ಕ್ರಿಕೆಟ್ನಲ್ಲಿ ಜರ್ನಿ ಆರಂಭಿಸಲು ಮುಂದಾಗಿದ್ದು, ಸಾಂಪ್ರಾದಾಯಿಕ ಎದುರಾಳಿ ಪಾಕ್ ತಂಡದ ವಿರುದ್ಧ ಕಣಕ್ಕಿಳಿಯುವ ನಿರೀಕ್ಷೆಯಲ್ಲಿದ್ದಾರೆ.
ಉಳಿದಂತೆ ಏಕದಿನ ಕ್ರಿಕೆಟ್ನಲ್ಲಿ ತಮ್ಮ ಅದ್ಭುತ ಪ್ರದರ್ಶನದಿಂದ ಮಿಂಚಿರುವ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಇಶಾನ್ ಕಿಶನ್, ವೇಗದ ಬೌಲರ್ಗಳಾದ ಮೊಹಮ್ಮದ್ ಸಿರಾಜ್ ಹಾಗೂ ಪ್ರಸಿದ್ಧ ಕೃಷ್ಣ ಅವರು ಮೊದಲ ಬಾರಿಗೆ ಪಾಕಿಸ್ತಾನ ವಿರುದ್ಧ ಏಕದಿನ ಪಂದ್ಯವನ್ನಾಡಲು ಕಾಯುತ್ತಿದ್ದಾರೆ.
Asia Cup, Team India, ODI Cricket, Sports Karnataka