Australia T20 ವಿಶ್ವಕಪ್ ಟೂರ್ನಿಯ ಬಳಿಕ ನಡೆಯಲಿರುವ ಇಂಗ್ಲೆಂಡ್(England) ವಿರುದ್ಧದ ಏಕದಿನ ಸರಣಿ(ODI Series) ಹಾಗೂ ವೆಸ್ಟ್ ಇಂಡೀಸ್(West Indies) ವಿರುದ್ಧದ ಟೆಸ್ಟ್ ಸರಣಿಗಾಗಿ(Test Series) ಆಸ್ಟ್ರೇಲಿಯಾ ತಂಡವನ್ನ ಪ್ರಕಟಿಸಲಾಗಿದ್ದು, ಎಡಗೈ ಬ್ಯಾಟ್ಸ್ಮನ್ ಟ್ರಾವಿಸ್ ಹೆಡ್(Travis Head) ODI ತಂಡಕ್ಕೆ ಮರಳಿದ್ದರೆ. ಆರಂಭಿಕ ಬ್ಯಾಟ್ಸ್ಮನ್ ಮಾರ್ಕಸ್ ಹ್ಯಾರಿಸ್(Marcus Harris) ಟೆಸ್ಟ್ ತಂಡಕ್ಕೆ ಮರಳಿದ್ದಾರೆ.
ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಡುವಿನ ಏಕದಿನ ಸರಣಿ ನವೆಂಬರ್ 17ರಿಂದ ಆರಂಭವಾಗಲಿದ್ದು, ಅಡಿಲೇಡ್ನಲ್ಲಿ(ನ.17), ಸಿಡ್ನಿ(ನ.19) ಮತ್ತು ಮೆಲ್ಬೋರ್ನ್(ನ.21)ನಲ್ಲಿ ಮೂರು ಏಕದಿನ ಪಂದ್ಯಗಳು ನಡೆಯಲಿದೆ. ಪ್ರಸಕ್ತ ವರ್ಷದಲ್ಲಿ ಅತ್ಯುತ್ತಮ ಫಾರ್ಮ್ನಲ್ಲಿರುವ ಟ್ರಾವಿಸ್ ಹೆಡ್, ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ಪ್ರಸಕ್ತ ವರ್ಷದಲ್ಲಿ ಆಡಿರುವ 6 ಪಂದ್ಯಗಳಿಂದ 112.7ರ ಸ್ಟ್ರೈಕ್ ರೇಟ್ನಲ್ಲಿ 310 ರನ್ಗಳಿಸಿದ್ದಾರೆ.
ಆಲ್ರೌಂಡರ್ ಕೆಮರೂನ್ ಗ್ರೀನ್ ಸಹ ODI ತಂಡಗದಲ್ಲಿ ಸ್ಥಾನ ಪಡೆದಿದ್ದಾರೆ. ಈ ಹಿಂದೆ ಆರಂಭಿಕ ಆಟಗಾರನಾಗಿ ಕಣಕ್ಕಿಳಿಯುತ್ತಿದ್ದ ಆರನ್ ಫಿಂಚ್ ODI ಕ್ರಿಕೆಟ್ನಿಂದ ನಿವೃತ್ತಿ ಹೊಂದಿದ್ದಾರೆ. ಹೀಗಾಗಿ ಬಹುತೇಕ ಡೇವಿಡ್ ವಾರ್ನರ್ ಜೊತೆಗೆ ಟ್ರಾವಿಸ್ ಹೆಡ್ ಆರಂಭಿಕನಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ. ಪ್ಯಾಟ್ ಕಮ್ಮಿನ್ಸ್ ನಾಯಕತ್ವದಲ್ಲಿ ಆಸ್ಟ್ರೇಲಿಯ ತಂಡ ಆಡುತ್ತಿರುವ ಮೊದಲ ಸರಣಿ ಇದಾಗಿದೆ. ಮುಂದಿನ ವರ್ಷ ನಡೆಯಲಿರುವ ಏಕದಿನ ವಿಶ್ವಕಪ್ ಟೂರ್ನಿ ಹಿನ್ನೆಲೆಯಲ್ಲಿ ತಂಡವನ್ನ ಸಜ್ಜುಗೊಳಿಸಲಾಗುತ್ತಿದೆ ಎಂದು ಆಸ್ಟ್ರೇಲಿಯಾ ಕ್ರಿಕೆಟ್ನ ಚೀಫ್ ಸೆಲೆಕ್ಟರ್ ಜಾರ್ಜ್ ಬೈಲಿ ತಿಳಿಸಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಬಳಿಕ ಆಸ್ಟ್ರೇಲಿಯಾ ತಂಡ ವೆಸ್ಟ್ ಇಂಡೀಸ್ ವಿರುದ್ಧ ಎರಡು ಟೆಸ್ಟ್ ಪಂದ್ಯಗಳನ್ನಾಡಲಿದೆ. ನವೆಂಬರ್ 30ರಿಂದ ಡಿಸೆಂಬರ್ 4ರವರೆಗೆ ಮೊದಲ ಟೆಸ್ಟ್ ಪಂದ್ಯ ಪರ್ತ್ನಲ್ಲಿ ನಡೆಯಲಿದ್ದು, ಅಡಿಲೇಡ್ನಲ್ಲಿ ಡಿ.8ರಿಂದ 12ರವರೆಗೆ 2ನೇ ಟೆಸ್ಟ್ ಪಂದ್ಯ ನಡೆಯಲಿದೆ.
ಆಸ್ಟ್ರೇಲಿಯ ODI ತಂಡ vs ಇಂಗ್ಲೆಂಡ್:
ಪ್ಯಾಟ್ ಕಮ್ಮಿನ್ಸ್(ನಾಯಕ), ಆಸ್ಟರ್ ಅಗರ್, ಅಲೆಕ್ಸ್ ಕ್ಯಾರಿ, ಕೆಮರೂನ್ ಗ್ರೀನ್, ಜೋಶ್ ಹೇಜಲ್ವುಡ್, ಟ್ರಾವಿಸ್ ಹೆಡ್, ಮಾರ್ನಸ್ ಲಬುಸ್ಚೆಗ್ನೆ, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್ವೆಲ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟಾಯ್ನಿಸ್, ಡೇವಿಡ್ ವಾರ್ನರ್, ಆಡಂ ಜ್ಹಂಪ.
ಆಸ್ಟ್ರೇಲಿಯಾ ಟೆಸ್ಟ್ ತಂಡ vs ವೆಸ್ಟ್ ಇಂಡೀಸ್:
ಪ್ಯಾಟ್ ಕಮ್ಮಿನ್ಸ್(ನಾಯಕ), ಸ್ಕಾಟ್ ಬೊಲ್ಯಾಂಡ್, ಅಲೆಕ್ಸ್ ಕ್ಯಾರಿ, ಕೆಮರೂನ್ ಗ್ರೀನ್, ಮಾರ್ಕಸ್ ಹ್ಯಾರಿಸ್, ಜೋಶ್ ಹೇಜಲ್ವುಡ್, ಟ್ರಾವಿಸ್ ಹೆಡ್, ಉಸ್ಮಾನ್ ಖವಾಜ, ಮಾರ್ನಸ್ ಲಬುಸ್ಚೆಗ್ನೆ, ನಾಥನ್ ಲಯಾನ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಡೇವಿಡ್ ವಾರ್ನರ್.