Australia – ಆಸೀಸ್ ತಂಡ ಸೇರಿಕೊಂಡ ಮಾರ್ಕಸ್ ಸ್ಟೋನಿಸ್
ಇಂಗ್ಲೆಂಡ್ ವಿರುದ್ಧದ ಟಿ-20 ಸರಣಿಗೆ ಆಸ್ಟ್ರೇಲಿಯಾ ತಂಡದೊಳಗೆ ಆಲ್ ರೌಂಡರ್ ಮಾರ್ಕಸ್ ಸ್ಟೋನಿಸ್ , ವೇಗಿ ಕೇನ್ ರಿಚಡ್ರ್ಸನ್, ಸ್ಪಿನ್ನರ್ ಆಶ್ಟನ್ ಆಗಾರ್ ಸೇರಿಕೊಂಡಿದ್ದಾರೆ.
ಆಲ್ ರೌಂಡರ್ ಮಾರ್ಕಸ್ ಸ್ಟೋನಿಸ್ ಅವರು ಗಾಯದಿಂದ ಚೇತರಿಸಿಕೊಂಡು ತಂಡದೊಳಗೆ ಎಂಟ್ರಿ ಪಡೆದುಕೊಂಡ್ರೆ, ರಿಚಡ್ರ್ಸನ್ ಮತ್ತು ಆಶ್ವನ್ ಆಗಾರ್ ವಿಶ್ರಾಂತಿಯಲ್ಲಿದ್ದು, ಮತ್ತೆ ತಂಡವನ್ನು ಸೇರಿಕೊಂಡಿದ್ದಾರೆ, ಇವರಿಬ್ಬರಿಗೆ ವೆಸ್ಟ್ ಇಂಡೀಸ್ ಸರಣಿಗೆ ವಿಶ್ರಾಂತಿ ನೀಡಲಾಗಿತ್ತು.
ಇನ್ನು ಆಲ್ ರೌಂಡರ್ ಕ್ಯಾಮರೂನ್ ಗ್ರೀನ್ ಇಂಗ್ಲೆಂಡ್ ವಿರುದ್ಧದ ಸರಣಿಗೆ ಆಸ್ಟ್ರೇಲಿಯಾ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಆದ್ರೆ ಆಸ್ಟ್ರೇಲಿಯಾ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದುಕೊಂಡಿಲ್ಲ. ಈ ಬಾರಿಯ ಟಿ-20 ವಿಶ್ವಕಪ್ ಟೂರ್ನಿಗೆ ಆಸ್ಟ್ರೇಲಿಯಾವೇ ಆತಿಥ್ಯ ವಹಿಸಿದೆ. ಹಾಲಿ ಚಾಂಪಿಯನ್ ಆಗಿರುವ ಆಸ್ಟ್ರೇಲಿಯಾ ತಂಡ ಪ್ರಶಸ್ತಿ ಉಳಿಸಿಕೊಳ್ಳುತ್ತಾ ಅನ್ನೋದನ್ನು ಕಾದು ನೋಡಬೇಕಿದೆ.