ಪಾಕಿಸ್ತಾನದ ಯುವ ಕ್ರಿಕೆಟಿಗ ಬಾಬರ್ ಅಜಮ್ ವೃತ್ತಿ ಜೀವನದ ಶ್ರೇಷ್ಠ ಫಾರ್ಮ್ನಲ್ಲಿದ್ದಾರೆ. ಬಾಬರ್ ಮುಟ್ಟಿದ್ದೆಲ್ಲವೂ ಚಿನ್ನವಾಗುತ್ತಿದೆ. ಈಗ ವಿರಾಟ್ ಕೊಹ್ಲಿಯ ದಾಖಲೆಯನ್ನು ಬಾಬರ್ ಮುರಿದಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧ ಮೊದಲನೇ ಓಡಿಐ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ಬಾಬರ್ ಆಝಮ್ ಅಂತಾರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ಹೊಸ ದಾಖಲೆ ಬರೆದರು.
ಮುಲ್ತಾನ್ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ವೆಸ್ಟ್ಇಂಡೀಸ್ ಪಾಕ್ ತಂಡಕ್ಕೆ 306 ರನ್ಗಳ ಗುರಿ ನೀಡಿತ್ತು. ಈ ಪಂದ್ಯದಲ್ಲಿ ಬಾಬರ್ 103 ರನ್ಗಳಿಸಿದರು. ಏಕದಿನ ಕ್ರಿಕೆಟ್‌ನಲ್ಲಿ ಮೂರನೇ ಶತಕ ಸಿಡಿಸಿದ ಕೀರ್ತಿ ಬಾಬರ್ ಪಾಲಾಯಿತು. ಬಾಬರ್ ಆಝಮ್ ಓಡಿಐ ಕ್ರಿಕೆಟ್‌ನಲ್ಲಿ ಎರಡನೇ ಬಾರಿ ಹ್ಯಾಟ್ರಿಕ್ ಶತಕ ಸಿಡಿಸಿದ ದಾಖಲೆ ಬರೆದರು.
ಓಡಿಐ ಕ್ರಿಕೆಟ್‌ನಲ್ಲಿ ನಾಯಕನಾಗಿ ವೇಗವಾಗಿ 1000 ರನ್ ಸಿಡಿಸಿದ ಮೊದಲ ಬ್ಯಾಟ್ಸ್‌ಮನ್ ಎನಿಸಿಕೊಂಡರು. 17 ಇನಿಂಗ್ಸ್‌ಗಳಲ್ಲಿ ಈ ದಾಖಲೆ ಬರೆದಿದ್ದ ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದರು. ಬಾಬರ್ ಕೇವಲ 13 ಇನ್ನಿಂಗ್ಸ್ಗಳಲ್ಲಿ ಈ ಸಾಧನೆ ಮಾಡಿದ್ದಾರೆ.