ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಸಾಂಘಿಕ ಪ್ರದರ್ಶನ ನೀಡಿದ ಅಫ್ಘಾನಿಸ್ತಾನ ಅತಿಥೇಯ ಬಾಂಗ್ಲಾದೇಶ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ 8 ವಿಕೆಟ್‌ಗಳ ಗೆಲುವು ಸಾಧಿಸಿದೆ.
ಮೀರ್‌ಪುರ್‌ನಲ್ಲಿ ನಡೆದ ಹಗಲು ರಾತ್ರಿ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ, ಬ್ಯಾಟಿಂಗ್ ವೈಫಲ್ಯ ಕಂಡಿತು. ಮುಶ್ಫಿಕುರ್ ರಹೀಮ್(30) ಹಾಗೂ ನಾಯಕ ಮಹಮದುಲ್ಲಾ(21) ಹೊರತಾಗಿ ಉಳಿದ ಯಾವ ಆಟಗಾರರು ನಿರೀಕ್ಷಿತ ಪ್ರದರ್ಶನ ನೀಡಲಿಲ್ಲ. ಪರಿಣಾಮ ಬಾಂಗ್ಲಾದೇಶ 20 ಓವರ್‌ಗಳಲ್ಲಿ 115/9 ರನ್‌ಗಳಿಸಿತು. ಅಫ್ಘಾನಿಸ್ತಾನ್ ಪರ ಫಜ಼ಲ್‌ಹಕ್ ಫರೂಕಿ ಹಾಗೂ ಅಜ್ಮತುಲ್ಲಾ ಒಮರ್ಜಿ಼ ತಲಾ 3 ವಿಕೆಟ್ ಪಡೆದರು.
ಬಾಂಗ್ಲಾದೇಶ ನೀಡಿದ ಸಾಧಾರಣ ಟಾರ್ಗೆಟ್ ಬೆನ್ನತ್ತಿದ ಅಫ್ಘಾನಿಸ್ತಾನ ಆರಂಭಿಕ ಆಘಾತದ ನಡುವೆಯೂ ಉತ್ತಮ ಕಮ್‌ಬ್ಯಾಕ್ ಮಾಡಿತು. ಆರಂಭಿಕ ಆಟಗಾರ ಹಜ್ಮತುಲಾ ಝಝಾಯಿ(59*) ಹಾಗೂ ಉಸ್ಮಾನ್ ಘನಿ(47) ಅವರ ಬ್ಯಾಟಿಂಗ್ ನೆರವಿನಿಂದ ದ 17.4 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 121 ರನ್‌ಗಳಿಸುವ ಮೂಲಕ ಗೆಲುವಿನ ದಡ ಸೇರಿತು. ಈ ಗೆಲುವಿನೊಂದಿಗೆ ಅಫ್ಘಾನಿಸ್ತಾನ ಎರಡು ಪಂದ್ಯಗಳ ಟಿ20 ಸರಣಿಯಲ್ಲಿ 1-1ರಿಂದ ಸಮಬಲ ಸಾಧಿಸಿತು. ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಫಜ಼ಲ್‌ಹಕ್ ಫರೂಕಿ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರೆ, ಹಜ್ಮತುಲಾ ಝಝಾಯಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದುಕೊಂಡರು.