ಐಸಿಸಿ ಅಂಡರ್ 19 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿ ಚಾಂಪಿಯನ್ ಆದ ಭಾರತ ಯುವ ಹುಡುಗರು ಈಗ ವಿಶ್ವವಿಜೇತರು. ಈ ವಿಶ್ವವಿಜೇತ ಹುಡುಗರಿಗೆ ಬಿಸಿಸಿಐ ಬಹುಮಾನ ಘೋಷಿಸಿದೆ. ಬಿಸಿಸಿಐ ಭರ್ಜರಿ ಬಹುಮಾನ ಯುವ ಹುಡುಗರ ಉತ್ಸಾಹವನ್ನು ಇಮ್ಮಡಿಗೊಳಿಸಲಿದೆ.
ಟೀಂ ಇಂಡಿಯಾದ ಕಿರಿಯರ ತಂಡವು 5ನೇ ಬಾರಿಗೆ ವಿಶ್ವಕಪ್ ಟ್ರೋಫಿ ಎತ್ತಿ ಹಿಡಿದಿದೆ. ಆಂಟಿಗುವಾದ ಸರ್ ವಿವಿಯನ್ ರಿಚರ್ಡ್ಸ್ ಸ್ಟೇಡಿಯಂನಲ್ಲಿ ಫೈನಲ್ ಪಂದ್ಯದಲ್ಲಿ ಬಲಿಷ್ಠ ಇಂಗ್ಲೆಂಡ್ ತಂಡವನ್ನು ಮಣಿಸುವ ಮೂಲಕ ಭಾರತ ತಂಡ ಮತ್ತೊಮ್ಮೆ ಚಾಂಪಿಯನ್ ಪಟ್ಟಕ್ಕೇರಿತು. ವಿಶ್ವ ವಿಜೇತ ಭಾರತ ತಂಡಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.
ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ಮಣಿಸಿದ ಪ್ರತಿಯೊಬ್ಬ ಆಟಗಾರನಿಗೆ ಬಿಸಿಸಿಐ ತಲಾ 40 ಲಕ್ಷ ರೂ. ಹಾಗೂ ತಂಡದ ಸಿಬ್ಬಂದಿಗೆ ತಲಾ 25 ಲಕ್ಷ ರೂ. ನಗದು ಬಹುಮಾನ ಘೋಷಿಸಿದೆ.