ಕ್ರಿಕೆಟ್ ಅಭಿಮಾನಿಗಳಿಗೆ ಭರ್ಜರಿ ರಸದೌತಣ ನೀಡುತ್ತಿರುವ ಐಪಿಎಲ್-2022ರ ಪ್ಲೇ-ಆಫ್ ಹಾಗೂ ಫೈನಲ್ ಪಂದ್ಯಗಳ ವೇಳಾಪಟ್ಟಿ ಹಾಗೂ ಮಹಿಳಾ ಟಿ20 ಚಾಲೆಂಜ್ ಪಂದ್ಯದ ವೇಳಾಪಟ್ಟಿಯನ್ನು ಬಿಸಿಸಿಐ ಬಿಡುಗಡೆ ಮಾಡಿದೆ.
15ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಪ್ಲೇ-ಆಫ್ ಪಂದ್ಯಗಳು ಮೇ 24ರಿಂದ 29ರ ನಡುವೆ ನಡೆಯಲಿದ್ದು, ಈ ಎಲ್ಲಾ ಪಂದ್ಯಗಳು ಕೊಲ್ಕತ್ತಾ ಹಾಗೂ ಅಹ್ಮದಾಬಾದ್‌ನಲ್ಲಿ ನಡೆಯಲಿವೆ. ಪಂದ್ಯಾವಳಿಯ ಕ್ವಾಲಿಫೈಯರ್-1 ಪಂದ್ಯ ಮೇ 24ರಂದು ಕೊಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿದೆ. ಟೂರ್ನಿಯ ಎಲಿಮಿನೇಟರ್ ಪಂದ್ಯ ಮೇ 25ರಂದು ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.
ಇದಾದ ಬಳಿಕ ಮೇ 27ರಂದು ನಡೆಯುವ ಕ್ವಾಲಿಫೈಯರ್-2 ಹಾಗೂ ಮೇ 29ರಂದು ನಡೆಯುವ ಐಪಿಎಲ್-2022ರ ಟೂರ್ನಿಯ ಫೈನಲ್ ಪಂದ್ಯ ಕೂಡ ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ ಎಂದು ಪಂದ್ಯಾವಳಿಯ ವೇಳಾಪಟ್ಟಿಯನ್ನು ಬಿಸಿಸಿಐ ಬಿಡುಗಡೆಗೊಳಿಸಿತು.

ವುಮೆನ್ಸ್ ಟಿ20 ಚಾಲೆಂಜ್:
ಈ ನಡುವೆ ವುಮೆನ್ಸ್ ಟಿ20 ಚಾಲೆಂಜ್ ಪಂದ್ಯಾವಳಿಯ ವೇಳಾಪಟ್ಟಿಯನ್ನು ಸಹ ಬಿಸಿಸಿಐ ಬಿಡುಗಡೆ ಮಾಡಿದೆ. ಮೇ 23ರಿಂದ 28ರವರೆಗೆ ವುಮೆನ್ಸ್ ಟಿ20 ಚಾಲೆಂಜ್ ಪಂದ್ಯಾವಳಿ ನಡೆಯಲಿದ್ದು, ಈ ಎಲ್ಲಾ ಪಂದ್ಯಗಳು ಪುಣೆಯಲ್ಲಿ ನಡೆಯಲಿವೆ.
