BCCI – ವಿರಾಟ್ ಕೊಹ್ಲಿಯ ನೂರನೇ ಟೆಸ್ಟ್ ಪಂದ್ಯಕ್ಕೆ ಶುಭ ಹಾರೈಸಿದ ಬಿಗ್ ಬಾಸ್ ಗಂಗೂಲಿ..!

ವಿರಾಟ್ ಕೊಹ್ಲಿಯವರ ಐತಿಹಾಸಿಕ ನೂರನೇ ಟೆಸ್ಟ್ ಪಂದ್ಯವನ್ನು ಇಡೀ ಕ್ರಿಕೆಟ್ ಜಗತ್ತು ಕಾತರದಿಂದ ಕಾಯುತ್ತಿದೆ. ಟೆಸ್ಟ್ ಕ್ರಿಕೆಟ್ ನಲ್ಲಿ ನೂರನೇ ಟೆಸ್ಟ್ ಪಂದ್ಯವನ್ನು ಆಡುತ್ತಿರುವುದು ಅದ್ಭುತವಾದ ಸಾಧನೆಯೇ ಸರಿ.
ಅಂದ ಹಾಗೇ ಟೆಸ್ಟ್ ಪಂದ್ಯವನ್ನು ಆಡುವುದು ಪ್ರತಿಯೊಬ್ಬ ಕ್ರಿಕೆಟ್ ಆಟಗಾರನ ಕನಸು. ಅದರಲ್ಲೂ ನೂರು ಟೆಸ್ಟ್ ಪಂದ್ಯವನ್ನು ಆಡುವುದು ಅಂದ್ರೆ ಅದು ಅಸಾಮಾನ್ಯವಾದದ್ದು. ಅಂತಹುದರಲ್ಲಿ ವಿರಾಟ್ ಕೊಹ್ಲಿ ಆಧುನಿಕ ಕ್ರಿಕೆಟ್ ನಲ್ಲಿ ಈ ಸಾಧನೆಯನ್ನು ಮಾಡಿದ್ದಾರೆ.
ಕಳೆದ 11 ವರ್ಷಗಳಿಂದ ಭಾರತ ಟೆಸ್ಟ್ ತಂಡದ ಆಟಗಾರನಾಗಿ, ನಾಯಕನಾಗಿ ಅಪ್ರತಿಮ ಸಾಧನೆಯನ್ನು ಮಾಡಿದ್ದಾರೆ. ವಿರಾಟ್ ಅವರ ಐತಿಹಾಸಿಕ ಪಂದ್ಯಕ್ಕೆ ಮಾಜಿ ಕ್ರಿಕೆಟಿಗರು ಈಗಾಗಲೇ ಶುಭ ಹಾರೈಸಿದ್ದಾರೆ.
ಇದೀಗ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಕೂಡ ವಿರಾಟ್ ಕೊಹ್ಲಿಗೆ ಶುಭ ಹಾರೈಸಿದ್ದಾರೆ.

ಇದು ವಿರಾಟ್ ಕೊಹ್ಲಿಯವರ ಕನಸು ನನಸಾಗುವ ಪಂದ್ಯ. ವಿರಾಟ್ ಪಾಲಿಗೆ ಅವಿಸ್ಮರಣೀಯ ಪಂದ್ಯವಾಗಿದೆ. ಅಲ್ಲದೆ ಭಾರತೀಯ ಕ್ರಿಕೆಟ್ ನಲ್ಲಿ ಇದೊಂದು ಅಮೋಘ ಹೆಗ್ಗುರುತು. ನಾನು ಕೂಡ ನೂರನೇ ಟೆಸ್ಟ್ ಪಂದ್ಯ ಕ್ಷಣವನ್ನು ಆನಂದಿಸಿದ್ದೇನೆ. ಆ ಕ್ಷಣ ಎಷ್ಟೊಂದು ಮಹತ್ವದ ಪೂರ್ಣ ಎಂಬುದನ್ನು ನಾನು ಅರಿತುಕೊಂಡಿದ್ದೇನೆ. 11 ವರ್ಷಗಳ ಸುದೀರ್ಘ ಟೆಸ್ಟ್ ಕ್ರಿಕೆಟ್ ನ ಪಯಣದಲ್ಲಿ ವಿರಾಟ್ ಕೊಹ್ಲಿ ಅಸಾಧ್ಯವಾದದನ್ನು ಸಾಧಿಸಿದ್ದಾರೆ. BCCI -Sourav Ganguly makes huge prediction about Kohli ahead of his 100th Testಬಿಸಿಸಿಐ ಪರವಾಗಿ ಮತ್ತು 100 ಟೆಸ್ಟ್ ಪಂದ್ಯಗಳನ್ನು ಆಡಿದ ಆಟಗಾರನಾಗಿ, ಟೀಮ್ ಇಂಡಿಯಾದ ಮಾಜಿ ನಾಯಕನಾಗಿ ವಿರಾಟ್ ಕೊಹ್ಲಿಗೆ ಶುಭ ಹಾರೈಸುತ್ತೇನೆ. ಅವರು ಇನ್ನಷ್ಟು ಸಾಧನೆಗಳನ್ನು ಮಾಡಲಿ. ನೂರನೇ ಟೆಸ್ಟ್ ಪಂದ್ಯವನ್ನು ಅವಿಸ್ಮರಣೀಯವಾಗಿಸಿಕೊಳ್ಳಲಿ ಎಂದು ಸೌರವ್ ಗಂಗೂಲಿ ಹೇಳಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಸೌರವ್ ಗಂಗೂಲಿ ಮತ್ತು ವಿರಾಟ್ ಕೊಹ್ಲಿಯವರ ನಡುವಿನ ಸಂಬಂಧ ಅಷ್ಟೊಂದು ಚೆನ್ನಾಗಿಲ್ಲ. ಟಿ-20 ವಿಶ್ವಕಪ್ ನಾಯಕತ್ವ ತ್ಯಜಿಸಿದ್ದ ನಂತರ ವಿರಾಟ್ ಕೊಹ್ಲಿಯವರನ್ನು ಏಕದಿನ ತಂಡದ ನಾಯಕತ್ವದಿಂದ ಕೆಳಗಿಳಿಸಲಾಯ್ತು. ಬಳಿಕ ವಿರಾಟ್ ಕೊಹ್ಲಿ ಟೆಸ್ಟ್ ನಾಯಕತ್ವಕ್ಕೂ ರಾಜೀನಾಮೆ ನೀಡಿದ್ದರು. ವಿರಾಟ್ ಕೊಹ್ಲಿ ನಾಯಕತ್ವದಿಂದ ಕೆಳಗಿಳಿಯಲು ಪರೋಕ್ಷವಾಗಿ ಗಂಗೂಲಿಯೇ ಕಾರಣ ಎಂಬ ಮಾತುಗಳನ್ನು ಕೇಳಿ ಬಂದಿದ್ದವು. ಇದಕ್ಕೆ ಪೂರಕವಾಗಿಯೇ ಗಂಗೂಲಿ ವಿರುದ್ಧ ವಿರಾಟ್ ಕೊಹ್ಲಿ ಬಹಿರಂಗವಾಗಿ ಹೇಳಿಕೆ ಕೂಡ ನೀಡಿದ್ದರು.