BWF World Championships – ಚಿರಾಗ್ – ಸಾತ್ವಿಕ್ ಗೆ ಕಂಚಿನ ಪದಕ

ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಷಿಪ್ ನ ಪುರುಷರ ಡಬಲ್ಸ್ ನಲ್ಲಿ ಭಾರತದ ಚಿರಾಗ್ ಶೆಟ್ಟಿ ಮತ್ತು ಸಾತ್ವಿಕ್ ಸಾಯಿರಾಜ್ ರಾಂಕಿ ರೆಡ್ಡಿ ಅವರು ಕಂಚಿನ ಪದಕ ಗೆದ್ದುಕೊಂಡಿದ್ದಾರೆ.
ಟೊಕಿಯೋದಲ್ಲಿ ನಡೆದ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಷಿಪ್ ನ ಸೆಮಿಫೈನಲ್ ಪಂದ್ಯದಲ್ಲಿ ಚಿರಾಗ್ ಮತ್ತು ಸಾತ್ವಿಕ್ ಸಾಯಿರಾಜ್ ಅವರು ನಿರಾಸೆ ಅನುಭವಿಸಿದ್ದಾರೆ.
ಏಳನೇ ಶ್ರೇಯಾಂಕವನ್ನು ಪಡೆದುಕೊಂಡಿರುವ ಚಿರಾಗ್ ಮತ್ತು ಸಾತ್ವಿಕ್ ಸಾಯಿ ರಾಜ್ 22-20, 18-21, 16-21ರಿಂದ ಮಲೆಶಿಯಾದ ಆರೋನ್ ಚಿಯಾ ಮತ್ತು ವುಯಿ ಯಿಕ್ ವಿರುದ್ಧ ಸೋಲು ಅನುಭವಿಸಿದ್ದರು.
ಇತ್ತೀಚೆಗೆ ಬರ್ಮಿಂಗ್ ಹ್ಯಾಮ್ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಚಿರಾಗ್ ಮತ್ತು ಸಾತ್ವಿಕ್ ಅವರು ಪುರುಷರ ಡಬಲ್ಸ್ ನಲ್ಲಿ ಚಿನ್ನ ಗೆದ್ದುಕೊಂಡಿದ್ದರು.
ಆದ್ರೆ ಸಾತ್ವಿಕ್ ಸಾಯಿ ರಾಜ್ ಮತ್ತು ಚಿರಾಗ್ ಶೆಟ್ಟಿ ಅವರು ಭಾರತೀಯ ಪುರುಷರ ಬ್ಯಾಡ್ಮಿಂಟನ್ ಡಬಲ್ ವಿಭಾಗದಲ್ಲಿ ಅಮೋಘ ಸಾಧನೆಯನ್ನು ಮಾಡಿದ್ದಾರೆ. ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಷಿಪ್ ನಲ್ಲಿ ಭಾರತದ ಪುರುಷರ ತಂಡ ಇದೇ ಮೊದಲ ಬಾರಿ ಕಂಚಿನ ಪದಕ ಗೆದ್ದುಕೊಂಡಿದೆ. ಈ ಹಿಂದೆ 2012ರಲ್ಲಿ ಜ್ವಾಲಾ ಗುಟ್ಟಾ ಮತ್ತು ಅಶ್ವಿನಿ ಪೊನ್ನಪ್ಪ ಅವರು ಮಹಿಳೆಯರ ಡಬಲ್ಸ್ ನಲ್ಲಿ ಕಂಚು ಗೆದ್ದುಕೊಂಡಿದ್ದರು.