team india – captain Rohit sharma – ಆರಂಭ… ಇನ್ನೂ ಕಾಯಲು ಸಾಧ್ಯವಿಲ್ಲ – ರೋಹಿತ್ ಶರ್ಮಾ
ಆರಂಭ… ಇನ್ನೂ ಕಾಯಲು ಸಾಧ್ಯವಿಲ್ಲ ಎಂದು ಟೀಮ್ ಇಂಡಿಯಾದ ಏಕದಿನ ಮತ್ತು ಟಿ-20 ತಂಡದ ನಾಯಕ ರೋಹಿತದ ಶರ್ಮಾ ಹೇಳಿದ್ದಾರೆ.
ವೆಸ್ಟ್ ಇಂಡೀಸ್ ವಿರುದ್ದದ ಏಕದಿನ ಮತ್ತು ಟಿ-20 ಸರಣಿಗಳು ಫೆಬ್ರವರಿ 6ರಿಂದ 20ರವರೆಗೆ ನಡೆಯಲಿದೆ. ಏಕದಿನ ಪಂದ್ಯಗಳು ಫೆಬ್ರವರಿ 6, 9 ಮತ್ತು 11ರಂದು ಅಹಮದಾಬಾದ್ ನಲ್ಲಿ ನಡೆದ್ರೆ, ಟಿ-20 ಪಂದ್ಯಗಳು ಫೆಬ್ರವರಿ 16, 18 ಮತ್ತು 20ರಂದು ಕೊಲ್ಕತ್ತಾದಲ್ಲಿ ನಡೆಯಲಿದೆ.
ಟೀಮ್ ಇಂಡಿಯಾ ಏಕದಿನ ತಂಡದ ಪೂರ್ಣ ಪ್ರಮಾಣದ ನಾಯನನಾಗಿ ರೋಹಿತ್ ಶರ್ಮಾ ಅವರಿಗೆ ವೆಸ್ಟ್ ಇಂಡೀಸ್ ವಿರುದ್ಧದ ಸರಣಿ ಅಗ್ನಿ ಪರೀಕ್ಷೆಯಾಗಲಿದೆ.
ಕಳೆದ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ರೋಹಿತ್ ಶರ್ಮಾ ಅವರು ನಾಯಕನಾಗಿ ಆಯ್ಕೆಯಾಗಿದ್ದರು. ಆದ್ರೆ ಸರಣಿಗೆ ಮುನ್ನವೇ ರೋಹಿತ್ ಶರ್ಮಾ ಗಾಯಗೊಂಡ್ರು. ಹೀಗಾಗಿ ಸರಣಿಯಿಂದ ಹೊರಗುಳಿದ ರೋಹಿತ್ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೇ ವೇಳೆ ಟೀಮ್ ಇಂಡಿಯಾವನ್ನು ಕೆ.ಎಲ್. ರಾಹುಲ್ ಮುನ್ನಡೆಸಿದ್ದರು. ಅಲ್ಲದೆ ಸರಣಿಯಲ್ಲಿ ಟೀಮ್ ಇಂಡಿಯಾ 0-3ರಿಂದ ವೈಟ್ ವಾಶ್ ಮಾಡಿಕೊಂಡಿತ್ತು.
ದಕ್ಷಿಣ ಆಫ್ರಿಕಾ ವಿರುದ್ದದ ಏಕದಿನ ಸರಣಿ ಮತ್ತು ಟೆಸ್ಟ್ ಸರಣಿ ಸೋತ ಬಳಿಕ ಟೀಮ್ ಇಂಡಿಯಾ ವಿರುದ್ದ ಸಾಕಷ್ಟು ಟೀಕೆಗಳು ಕೇಳಿಬಂದಿದ್ದವು. ಇದೀಗ ವೆಸ್ಟ್ ಇಂಡೀಸ್ ಸರಣಿಯ ಮೂಲಕ ಎಲ್ಲಾ ಟೀಕೆಗಳಿಗೆ ತಕ್ಕ ಉತ್ತರ ನೀಡಬೇಕಿದೆ.
ಇನ್ನು 34ರ ಹರೆಯದ ರೋಹಿತ್ ಶರ್ಮಾ ಮುಂದಿನ ದಿನಗಳಲ್ಲಿ ಟೆಸ್ಟ್ ತಂಡಕ್ಕೂ ನಾಯಕನಾಗುವ ಸಾಧ್ಯತೆಗಳಿವೆ. ಹಾಗೇ ಮುಂದಿನ ಎರಡು ವಿಶ್ವಕಪ್ ಟೂರ್ನಿಗಳಲ್ಲಿ ಅಂದ್ರೆ 2022 ಟಿ-20 ಮತ್ತು 2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ರೋಹಿತ್ ಶರ್ಮಾ ಅವರೇ ತಂಡವನ್ನು ಮುನ್ನಡೆಸಲಿದ್ದಾರೆ.
ಒಟ್ಟಿನಲ್ಲಿ ಗಾಯದಿಂದ ಚೇತರಿಸಿಕೊಂಡಿರುವ ರೋಹಿತ್ ಶರ್ಮಾ ಫುಲ್ ಫಿಟ್ ಆಗಿದ್ದಾರೆ. ಮತ್ತೆ ಬ್ಯಾಟಿಂಗ್ ನಲ್ಲಿ ಹಳೆಯ ಲಯವನ್ನು ಪಡೆದುಕೊಳ್ಳುವ ವಿಶ್ವಾಸದಲ್ಲೂ ಇದ್ದಾರೆ.