Chennai super kings – ಚೆನ್ನೈ ಮತ್ತು ಸೇಲಂ ನಲ್ಲಿ ಸೂಪರ್ ಕಿಂಗ್ಸ್ ಕ್ರಿಕೆಟ್ ಅಕಾಡೆಮಿ ಆರಂಭ

ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಚೆನ್ನೈ ಮತ್ತು ಸೇಲಂ ನಲ್ಲಿ ಸೂಪರ್ ಕಿಂಗ್ಸ್ ಕ್ರಿಕೆಟ್ ಅಕಾಡೆಮಿಯನ್ನು ಆರಂಭಿಸಿದೆ.
ಸದ್ಯ ಚೆನ್ನೈ ಮತ್ತು ಸೇಲಂ ನಲ್ಲಿ ಸೂಪರ್ ಕಿಂಗ್ಸ್ ಅಕಾಡೆಮಿಯನ್ನು ಶುರು ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಬೇರೆ ಬೇರೆ ಕಡೆ ವಿಸ್ತಾರಗೊಳಿಸಲಾಗುವುದು. ಏಪ್ರಿಲ್ ನಿಂದ ಅಕಾಡೆಮಿಯ ಆರಂಭವಾಗಲಿದೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಪ್ರತಿಕಾ ಪ್ರಕಟನೆಯಲ್ಲಿ ತಿಳಿಸಿದೆ.
ಕಳೆದ ಐದು ದಶಕಗಳಿಂದ ನಾವು ಕ್ರಿಕೆಟ್ ಜೊತೆಗೆ ನಂಟನ್ನು ಬೆಳೆಸಿಕೊಂಡಿದ್ದೇವೆ. ಇದೀಗ ಕ್ರಿಕೆಟ್ ಆಟವನ್ನು ಇನ್ನಷ್ಟು ಉತ್ತಮ ಪಡಿಸಲು ಅವಕಾಶ ಸಿಕ್ಕಿದೆ. ಮುಂದಿನ ಪೀಳಿಗೆಗೆ ನಮ್ಮ ಅನುಭವ ಮತ್ತು ನೆರವು ನೀಡುವ ನಿಟ್ಟಿನಲ್ಲಿ ಈ ಅಕಾಡೆಮಿಯನ್ನು ಆರಂಭಿಸಲಾಗಿದೆ. ಅಕಾಡೆಮಿಯಲ್ಲಿ ಅತ್ಯುತ್ತಮ ಮಟ್ಟದ ಸೌಲಭ್ಯುಗಳು ಇವೆ. ಅನುಭವಿ ತರಬೇತುದಾರರು ತರಬೇತಿಯನ್ನು ನೀಡಲಿದ್ದಾರೆ. ವರ್ಷಪೂರ್ತಿ ಅಕಾಡೆಮಿ ಕಾರ್ಯ ನಿರ್ವಹಿಸಲಿದೆ. ಬಾಲಕ ಮತ್ತು ಬಾಲಕಿಯರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು ಎಂದು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸಿಇಒ ಕೆ.ಎಸ್. ವಿಶ್ವನಾಥನ್ ತಿಳಿಸಿದ್ದಾರೆ. Chennai super kings to launch Super Kings Academy in Chennai, Salem
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬ್ಯಾಟಿಂಗ್ ಕೋಚ್ ಮೈಕ್ ಹಸ್ಸಿ ಮತ್ತು ಬೌಲಿಂಗ್ ಕೋಚ್ ಎ.ಎಲ್. ಬಾಲಾಜಿ ಕೂಡ ಯುವ ಕ್ರಿಕೆಟಿಗರು ಈ ಅವಕಾಶವನ್ನು ಬಳಸಿಕೊಳ್ಳಿ ಎಂದು ಹೇಳಿದ್ದಾರೆ. ತಮಿಳುನಾಡಿನಾದ್ಯಂತ ವಿವಿಧ ಕೇಂದ್ರಗಳಲ್ಲಿ ಜೂನಿಯರ್ ಸೂಪರ್ ಕಿಂಗ್ಸ್ ಟೂರ್ನಿಗಳನ್ನು ಆಯೋಜನೆ ಮಾಡಲಾಗುವುದು.