ಕ್ರಿಕೆಟ್ ಆಸ್ಟ್ರೇಲಿಯಾ ಗುರುವಾರ (7 ಏಪ್ರಿಲ್) ಪುರುಷ ಆಟಗಾರರ ಹೊಸ ವಾರ್ಷಿಕ ಒಪ್ಪಂದವನ್ನು ಪ್ರಕಟಿಸಿದೆ. ಟಿ20 ವಿಶ್ವಕಪ್ ಸೆಮಿಫೈನಲ್ ನಲ್ಲಿ ಅದ್ಭುತ ಇನ್ನಿಂಗ್ಸ್ ಆಡಿದ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಮ್ಯಾಥ್ಯೂ ವೇಡ್ ಅವರನ್ನು ಈ ಪಟ್ಟಿಯಿಂದ ಕೈಬಿಡಲಾಗಿದೆ. ಅವರಲ್ಲದೆ, ಮಾಜಿ ಟೆಸ್ಟ್ ನಾಯಕ ಟಿಮ್ ಪೈನ್, ಆಲ್ ರೌಂಡರ್ ಮೊಯಿಸೆಸ್ ಹೆನ್ರಿಕ್ಸ್, ಬ್ಯಾಟ್ಸ್ಮನ್ ಬೆನ್ ಮೆಕ್ಡರ್ಮಾಟ್, ಬೌಲರ್ ಜ್ಯೆ ರಿಚರ್ಡ್ಸನ್ ಮತ್ತು ಕೇನ್ ರಿಚರ್ಡ್ಸನ್ ಅವರನ್ನು ಕೇಂದ್ರ ಒಪ್ಪಂದದಲ್ಲಿ ಸೇರಿಸಲಾಗಿಲ್ಲ.
ನಿವೃತ್ತ ವೇಗದ ಬೌಲರ್ ಜೇಮ್ಸ್ ಪ್ಯಾಂಟಿನ್ಸನ್ ಹೆಸರನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಲೈಂಗಿಕ ಹಗರಣದಲ್ಲಿ ಸಿಲುಕಿರುವ ಕಾರಣ ಟಿಮ್ ಪೈನ್ ಅವರ ಹೆಸರನ್ನು ತೆಗೆದುಹಾಕಲಾಗಿದೆ. ಅವರು ಕ್ರಿಕೆಟ್ನಿಂದ ಅನಿರ್ದಿಷ್ಟ ವಿರಾಮ ತೆಗೆದುಕೊಂಡಿದ್ದಾರೆ. ಕೇಂದ್ರ ಒಪ್ಪಂದದಲ್ಲಿ 20 ಆಟಗಾರರನ್ನು ಸೇರಿಸಲಾಗಿದೆ. ಪಟ್ಟಿಯಲ್ಲಿ ಹೆಸರಿಲ್ಲದವರು ಸಹ ಆಸ್ಟ್ರೇಲಿಯಾ ಪರ ಅಂತಾರಾಷ್ಟ್ರೀಯ ಪಂದ್ಯಗಳನ್ನೂ ಆಡಬಹುದು.
2022-23ರ ಕೇಂದ್ರ ಒಪ್ಪಂದದಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಜೋಶ್ ಇಂಗ್ಲಿಷ್ ಅವರನ್ನು ಸೇರಿಸಲಾಗಿದೆ. ಇವರಲ್ಲದೆ ಮಿಚೆಲ್ ಮಾರ್ಷ್, ಸ್ಕಾಟ್ ಬೋಲ್ಯಾಂಡ್, ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮಾರ್ಕಸ್ ಸ್ಟೊಯಿನಿಸ್ ಮತ್ತು ಮಿಚೆಲ್ ಸ್ವೀಪ್ಸನ್ ತಮ್ಮ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಕ್ರಿಕೆಟ್ ಆಸ್ಟ್ರೇಲಿಯಾದ ಮುಖ್ಯ ಆಯ್ಕೆಗಾರ ಜಾರ್ಜ್ ಬೈಲಿ, “ಈ ಆಟಗಾರರ ಗುಂಪು ನಮಗೆ ಎಲ್ಲಾ ಮೂರು ಸ್ವರೂಪಗಳಿಗೆ ಬಲವನ್ನು ನೀಡುತ್ತದೆ. ಒಪ್ಪಂದದ ಪಟ್ಟಿಯಲ್ಲಿ ಕೇವಲ 20 ಆಟಗಾರರನ್ನು ಸೇರಿಸುವುದು ಕಷ್ಟ. ಅನೇಕ ಪ್ರಮುಖ ಸರಣಿಗಳು ಬರಲಿವೆ. ಟಿ-20 ಮತ್ತು ವಿಶ್ವಕಪ್ ಏಕದಿನ ಪಂದ್ಯಗಳೂ ನಡೆಯಬೇಕಿದೆ”ಎಂದು ತಿಳಿಸಿದ್ದಾರೆ.
ಕೇಂದ್ರ ಒಪ್ಪಂದದಲ್ಲಿ ಒಳಗೊಂಡಿರುವ ಆಟಗಾರರು: ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಪ್ಯಾಟ್ ಕಮ್ಮಿನ್ಸ್, ಆರನ್ ಫಿಂಚ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಷ್, ಉಸ್ಮಾನ್ ಖವಾಜಾ, ಮರ್ನಾಶ್ ಲ್ಯಾಬುಸ್ಚಾಗ್ನೆ, ನಾಥನ್ ಲಿಯಾನ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್ವೆಲ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಮಿಚೆಲ್ ಸ್ವೀಪ್ಸನ್, ಡೇವಿಡ್ ವಾರ್ನರ್, ಆಡಮ್ ಝಂಪಾ.