ಕ್ರಿಕೆಟ್ ಲೋಕವೇ ಎದುರು ನೋಡುತ್ತಿರುವ ಬಹುನಿರೀಕ್ಷಿತ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್-2023 ಟೂರ್ನಿಗೆ ವೇದಿಕೆ ಸಿದ್ದವಾಗಿದ್ದು, ಕ್ರಿಕೆಟ್ನ ಮಹಾಸಮರದಲ್ಲಿ ರೋಚಕ ಹಣಾಹಣಿ ನಡೆಸಲು ವಿಶ್ವದ 10 ಬಲಿಷ್ಠ ತಂಡಗಳು ಸಜ್ಜಾಗಿವೆ.
ಭಾರತದ ಅತಿಥ್ಯದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಟೂರ್ನಿಯು ಅ.5ರಿಂದ ನವೆಂಬರ್ 19ರವರೆಗೆ ನಡೆಯಲಿದೆ. ಅಹ್ಮದಾಬಾದ್ನಲ್ಲಿ ನಾಳೆ ನಡೆಯುವ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ನ್ಯೂಜಿ಼ಲೆಂಡ್ ಮುಖಾಮುಖಿಯಾಗಲಿವೆ. ಈ ಪಂದ್ಯದೊಂದಿಗೆ 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಚಾಲನೆ ಸಿಗಲಿದೆ. ಇನ್ನೂ ಏಕದಿನ ವಿಶ್ವಕಪ್ನ ಅತಿಥ್ಯವಹಿಸಿರುವ ಟೀಂ ಇಂಡಿಯಾ, ಚೆನ್ನೈನಲ್ಲಿ ಅ.8ರಂದು ನಡೆಯುವ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದ ಮೂಲಕ ತನ್ನ ವಿಶ್ವಕಪ್ ಅಭಿಯಾನ ಆರಂಭಿಸಲಿದ್ದು, ರೋಹಿತ್ ಶರ್ಮ ಸಾರಥ್ಯದಲ್ಲಿ ಮುನ್ನಡೆಯಲಿರುವ ಭಾರತ ಈ ಬಾರಿಯ ಏಕದಿನ ವಿಶ್ವಕಪ್ ಗೆಲ್ಲುವ ಫೇವರೆಟ್ ತಂಡವೆನಿಸಿದೆ. ನಾಳೆಯಿಂದ(ಅ.5) ವಿಶ್ವಕಪ್ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಎಲ್ಲಾ 10 ತಂಡಗಳ ಆಟಗಾರರು ಬುಧವಾರ ಅಹ್ಮದಾಬಾದ್ನಲ್ಲಿ ನಡೆದ ರೌಂಡ್ ಟೇಬಲ್ ಈವೆಂಟ್ನಲ್ಲಿ ಪಾಲ್ಗೊಂಡಿದ್ದರು. ಇದಾದ ಬಳಿಕ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಎಲ್ಲಾ ತಂಡದ ನಾಯಕರು ಐಸಿಸಿ ಏಕದಿನ ವಿಶ್ವಕಪ್ ಟ್ರೋಫಿ ಜೊತೆಗೆ ಫೋಟೋ ಶೂಟ್ನಲ್ಲಿ ಸಹ ಪಾಲ್ಗೊಂಡರು.
ವಿಶ್ವಕಪ್ನಲ್ಲಿ ಆಡುವ 10 ತಂಡಗಳ ಮಾಹಿತಿ ಇಲ್ಲಿದೆ
ಅಫ್ಘಾನಿಸ್ತಾನ ತಂಡ:
ಹಶ್ಮತುಲ್ಲಾ ಶಹೀದಿ(ನಾಯಕ), ರಹಮಾನುಲ್ಲಾ ಗುರ್ಬಾಜ್, ಇಬ್ರಾಹಿಂ ಝದ್ರಾನ್, ರಿಯಾಜ್ ಹಸನ್, ರಹಮತ್ ಷಾ, ನಜೀಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಇಕ್ರಮ್ ಅಲಿಖಿಲ್, ಅಜ್ಮತುಲ್ಲಾ ಒಮರ್ಜಾಯ್, ರಶೀದ್ ಖಾನ್, ಮುಜೀಬ್ ಉರ್ ರಹಮಾನ್, ನೂರ್ ಅಹ್ಮದ್, ಫಜಲ್ ರಹಮದ್, ಫಜಲ್ ರಹಕ್ವೀನ್.
ಆಸ್ಟ್ರೇಲಿಯಾ ತಂಡ:
ಪ್ಯಾಟ್ ಕಮ್ಮಿನ್ಸ್ (ನಾಯಕ), ಸ್ಟೀವ್ ಸ್ಮಿತ್, ಅಲೆಕ್ಸ್ ಕ್ಯಾರಿ, ಜೋಶ್ ಇಂಗ್ಲಿಸ್, ಸೀನ್ ಅಬೋಟ್, ಕೆಮೆರೂನ್ ಗ್ರೀನ್, ಜೋಶ್ ಹೇಜಲ್ವುಡ್, ಟ್ರಾವಿಸ್ ಹೆಡ್, ಮಾರ್ನಸ್ ಲಬುಶೇನ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್ವೆಲ್, ಮಾರ್ಕಸ್ ಸ್ಟಾಯ್ನಿಸ್, ಡೇವಿಡ್ ವಾರ್ನರ್, ಆಡಮ್ ಝಂಪಾ, ಮಿಚೆಲ್ ಸ್ಟಾರ್ಕ್.
ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಥಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್.
ಬಾಂಗ್ಲಾದೇಶ ತಂಡ:
ಶಕೀಬ್-ಅಲ್-ಹಸನ್(ನಾಯಕ), ಲಿಟನ್ ದಾಸ್, ತಂಝಿದ್ ಹಸನ್ ತಮೀಮ್, ನಜ್ಮುಲ್ ಹೊಸೈನ್ ಶಾಂಟೊ, ತೌಹಿದ್ ಹೃದೋಯ್, ಮುಶ್ಫಿಕರ್ ರಹೀಮ್, ಮಹ್ಮುದುಲ್ಲಾ ರಿಯಾದ್, ಮೆಹಿದಿ ಹಸನ್ ಮಿರಾಜ್, ನಸುಮ್ ಅಹ್ಮದ್, ಶಾಕ್ ಮಹೆದಿ ಹಸನ್, ತಸ್ಕಿನ್ ಅಹ್ಮದ್, ಮುಸ್ತಫಿಜು಼ರ್ ರಹಮಾನ್, ಹಸನ್ ಮಹಮೊದ್, ಶೋರಿಫುಲ್ ಇಸ್ಲಾಂ, ತಂಝೀಮ್ ಹಸನ್ ಸಾಕಿಬ್.
ಇಂಗ್ಲೆಂಡ್ ತಂಡ:
ಜಾಸ್ ಬಟ್ಲರ್(ನಾಯಕ), ಮೊಯಿನ್ ಅಲಿ, ಗಸ್ ಅಟ್ಕಿನ್ಸನ್, ಜಾನಿ ಬೈರ್ಸ್ಟೋವ್, ಸ್ಯಾಮ್ ಕರನ್, ಲಿಯಾಮ್ ಲಿವಿಂಗ್ಸ್ಟೋನ್, ಡೇವಿಡ್ ಮಲನ್, ಆದಿಲ್ ರಶೀದ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್, ರೀಸ್ ಟಾಪ್ಲಿ, ಡೇವಿಡ್ ವಿಲ್ಲಿ, ಮಾರ್ಕ್ ವುಡ್, ಕ್ರಿಸ್ ವೋಕ್ಸ್.
ನೆದರ್ಲ್ಯಾಂಡ್ಸ್ ತಂಡ:
ಸ್ಕಾಟ್ ಎಡ್ವರ್ಡ್ಸ್(ನಾಯಕ), ಮ್ಯಾಕ್ಸ್ ಒಡೌಡ್, ಬಾಸ್ ಡಿ ಲೀಡೆ, ವಿಕ್ರಮ್ ಸಿಂಗ್, ತೇಜ ನಿಡಮನೂರು, ಪಾಲ್ ವ್ಯಾನ್ ಮೀಕೆರೆನ್, ಕಾಲಿನ್ ಅಕರ್ಮನ್, ವ್ಯಾನ್ ಡೆರ್ ಮೆರ್ವೆ, ಲೋಗನ್ ವ್ಯಾನ್ ಬೀಕ್, ಆರ್ಯನ್ ದತ್, ರಯಾನ್ ಕ್ಲೈನ್, ವೆಸ್ಲಿ ಬ್ಯಾರೆಸಿ, ಸಾಕಿಬ್ ಜುಲ್ಫಿಕರ್, ಶರೀಜ್ ಅಹ್ಮದ್, ಸೈಬ್ರಾಂಡ್ ಎಂಗಲ್ಬ್ರೆಕ್ಟ್.
ನ್ಯೂಜಿಲೆಂಡ್ ತಂಡ:
ಕೇನ್ ವಿಲಿಯಮ್ಸನ್(ನಾಯಕ), ಟ್ರೆಂಟ್ ಬೌಲ್ಟ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೇ, ಲೊಕ್ಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಟಾಮ್ ಲೇಥಮ್, ಡೇರಿಲ್ ಮಿಚೆಲ್, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ವಿಲ್ ಯಂಗ್.
ಪಾಕಿಸ್ತಾನ ತಂಡ:
ಬಾಬರ್ ಆಜಮ್ (ನಾಯಕ), ಶಾದಾಬ್ ಖಾನ್, ಫಖರ್ ಜಮಾನ್, ಇಮಾಮ್-ಉಲ್-ಹಕ್, ಅಬ್ದುಲ್ಲಾ ಶಫೀಕ್, ಮೊಹಮ್ಮದ್ ರಿಜ್ವಾನ್, ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಸಲ್ಮಾನ್ ಅಲಿ ಅಘಾ, ಮೊಹಮ್ಮದ್ ನವಾಜ್, ಉಸಾಮಾ ಮಿರ್, ಹ್ಯಾರಿಸ್ ರೌಫ್, ಹಸನ್ ಅಲಿ, ಶಾಹೀನ್ ಅಫ್ರಿದಿ, ಮೊಹಮ್ಮದ್ ಅಫ್ರಿದಿ ವಾಸಿಂ.
ಸೌತ್ ಆಫ್ರಿಕಾ ತಂಡ:
ತೆಂಬಾ ಬವುಮಾ(ನಾಯಕ), ಜೆರಾಲ್ಡ್ ಕೊಯೆಟ್ಜಿ, ಕ್ವಿಂಟನ್ ಡಿಕಾಕ್, ರೀಜಾ ಹೆಂಡ್ರಿಕ್ಸ್, ಮಾರ್ಕೊ ಜಾನ್ಸೆನ್, ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಮ್, ಡೇವಿಡ್ ಮಿಲ್ಲರ್, ಲುಂಗಿ ಎನ್ಗಿಡಿ, ಆಂಡಿಲ್ ಫೆಹ್ಲುಕ್ವಾಯೊ, ಕಗಿಸೊ ರಬಾಡಾ, ತಬ್ರೈಜ್ ಶಮ್ಸಿ, ವ್ಯಾನ್ ದರ್ ದುಸೇನ್, ಲಿಜಾ಼ಡ್ ವಿಲಿಯಮ್ಸ್.
ಶ್ರೀಲಂಕಾ ತಂಡ:
ದಸುನ್ ಶನಕ(ನಾಯಕ), ಕುಸಲ್ ಮೆಂಡಿಸ್, ಕುಸಲ್ ಪೆರೇರ, ಪತುಮ್ ನಿಸ್ಸಂಕ, ಲಹಿರು ಕುಮಾರ, ದಿಮುತ್ ಕರುಣಾರತ್ನೆ, ಸದೀರ ಸಮರವಿಕ್ರಮ, ಚರಿತ್ ಅಸಲಂಕ, ಧನಂಜಯ ಡಿಸಿಲ್ವ, ಮಹೇಶ್ ತೀಕ್ಷಣ, ದುನಿತ್ ವೆಲ್ಲಲಾಗೆ, ಕಸುನ್ ರಜಿತ, ಮತೀಶ ಪತಿರಾನ, ಮತೀಶ ಪತಿರಾನ, ದಿಲ್ಶಾನ್ ಮಧುಶಂಕ, ದುಶಾನ್ ಹೇಮಂತ. ಚಾಮಿಕಾ ಕರುಣಾರತ್ನೆ(ರಿಸರ್ವ್ ಪ್ಲೇಯರ್)
CWC 2023, ODI World Cup, Team India, Sports Karnataka