ಐಪಿಎಲ್ ಮೆಗಾ ಹರಾಜಿಗೆ ಡೇಟ್ ಫಿಕ್ಸ್ IPL sports karnataka
2022ರ ಐಪಿಎಲ್ ಗಾಗಿ ನಡೆಯಲಿರುವ ಮೆಗಾ ಹರಾಜಿಗಾಗಿ ಡೇಟ್ ಫಿಕ್ಸ್ ಆಗಿದೆ. ಮುಂದಿನ ವರ್ಷ ಫೆಬ್ರವರಿಯಲ್ಲಿ 15 ನೇ ಆವೃತ್ತಿಯ ಮೆಗಾ ಹರಾಜು ಪ್ರಕ್ರಿಯೆ ನಡೆಯಲಿದೆ ಎಂದು ವರದಿಯಾಗಿದೆ. ಈ ಬಾರಿ ಹರಾಜು ಪ್ರಕ್ರಿಯೆಯನ್ನು ಬೆಂಗಳೂರು ಅಥವಾ ಹೈದರಾಬಾದ್ ನಲ್ಲಿ ನಡೆಸಲು ಬಿಸಿಸಿಐ ನಿರ್ಧರಿಸಿದೆ ಎಂದು ತಿಳಿದುಬಂದಿದೆ.
ಈ ಹಿಂದೆ ಜನವರಿಯಲ್ಲಿ ಮೆಗಾ ಹರಾಜು ನಡೆಸಲು ನಿರ್ಧರಿಸಲಾಗಿತ್ತು. ಆದ್ರೆ ಇದೀಗ ಫೆಬ್ರವರಿಯಲ್ಲಿ ನಡೆಸಲು ಪ್ಲಾನ್ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಲಾಗುತ್ತಿದೆ.
ಇನ್ನು ಈ ಬಾರಿಯ ಮೆಗಾ ಹರಾಜಿಗೆ ಐಪಿಎಲ್ ನ ಎಂಟು ಫ್ರಾಂಚೈಸಿಗಳು ಸಕಲ ರೀತಿಯ ಸಿದ್ಧತೆಗಳನ್ನ ನಡೆಸಿವೆ. ಹೊಸ ತಂಡಗಳಾದ ಲಕ್ನೋ ಮತ್ತು ಅಹಮದಾಬಾದ್ ತಂಡಗಳು ಕೂಡ ಬಲಿಷ್ಠ ಕಟ್ಟಲು ಪ್ಲಾನ್ ಕೊಂಡಿವೆ.
ಒಟ್ಟಾರೆ ಮೆಗಾ ಹರಾಜಿಗೆ ಮುಹೂರ್ತ ಫಿಕ್ಸ್ ಆಗಿದ್ದು, ಯಾವ ಆಟಗಾರ ಯಾವ ತಂಡದ ಪಾಲಾಗುತ್ತಾರೆ. ಈ ಬಾರಿಯ ಮಿಲಿಯನ್ ಡಾಲರ್ ಬೇಬಿ ಯಾರಾಗುತ್ತಾರೆ ಅನ್ನೋ ಕುತೂಹಲ ಎಲ್ಲರಲ್ಲೂ ಮೂಡಿದೆ.