Durand Cup 2022 – ನಾಲ್ಕನೇ ಬಾರಿ ಸೆಮಿಫೈನಲ್ ಪ್ರವೇಶಿಸಿದ ಬೆಂಗಳೂರು ಫುಟ್ ಬಾಲ್ ಕ್ಲಬ್

ಡುರಾಂಡ್ ಕಪ್ ಫುಟ್ ಬಾಲ್ ಟೂರ್ನಿಯಲ್ಲಿ ಬೆಂಗಳೂರು ಫುಟ್ ಬಾಲ್ ಕ್ಲಬ್ ತಂಡ ಸೆಮಿಫೈನಲ್ ಪ್ರವೇಶಿಸಿದೆ.
ಕೊಲ್ಕತ್ತಾದ ಕೆಬಿಕೆ ಅಂಗಣದಲ್ಲಿ ನಡೆದ ಪಂದ್ಯದಲ್ಲಿ ಬೆಂಗಳೂರು ಫುಟ್ ಬಾಲ್ ಕ್ಲಬ್ ತಂಡ 2-1 ಗೋಲುಗಳಿಂದ ಒಡಿಸ್ಸಾ ಫುಟ್ ಬಾಲ್ ಕ್ಲಬ್ ತಂಡವನ್ನು ಪರಾಭವಗೊಳಿಸಿತು.
ನಿಗದಿತ ಅವಧಿಯಲ್ಲಿ ಉಭಯ ತಂಡಗಳು ಗೋಲು ರಹಿತವಾಗಿ ಸಮಬಲದ ಹೋರಾಟವನ್ನೇ ಪ್ರದರ್ಶಿದವು. ಆದ್ರೆ ಹೆಚ್ಚುವರಿ ಅವಧಿಯಲ್ಲಿ ಬೆಂಗಳೂರು ಫುಟ್ ಬಾಲ್ ಕ್ಲಬ್ ಅದ್ಭುತವಾದ ಪ್ರದರ್ಶನವನ್ನು ನೀಡಿತ್ತು. ಅದರಲ್ಲೂ ಬೆಂಗಳೂರು ಫುಟ್ ಬಾಲ್ ಕ್ಲಬ್ ತಂಡದ ಶಿವಶಕ್ತಿ ಅವರು 97ನೇ ನಿಮಿಷದಲ್ಲಿ ಮೊದಲ ಗೋಲು ದಾಖಲಿಸಿ ತಂಡಕ್ಕೆ ಮುನ್ನಡೆಯನ್ನು ಒದಗಿಸಿದ್ರು. ಆದ್ರೆ ಈ ಮುನ್ನಡೆ ಹೆಚ್ಚು ಸಮಯ ಉಳಿಯಲಿಲ್ಲ. ಪಂದ್ಯದ 115ನೇ ನಿಮಿಷದಲ್ಲಿ ಒಡಿಸ್ಸಾ ತಂಡದ ಡಿಯಾಗೊ ಮೌರಿಕ್ಯ್ ಅವರು ಗೋಲು ದಾಖಲಿಸಿ ಅಂತರವನ್ನು ಸಮಗೊಳಿಸಿದ್ರು. ಆದ್ರೆ 121ನೇ ನಿಮಿಷದಲ್ಲಿ ಬಿಎಫ್ ಸಿ ತಂಡ ರಾಯ್ ಕೃಷ್ಣ ಅವರು ಅಮೋಘ ಗೋಲು ದಾಖಲಿಸಿ ತಂಡದ ಗೆಲುವಿನಲ್ಲೂ ಪ್ರಮುಖ ಪಾತ್ರವಹಿಸಿದ್ದರು. ಈ ಮೂಲಕ ಬೆಂಗಳೂರು ಫುಟ್ ಬಾಲ್ ಕ್ಲಬ್ ತಂಡ ಸತತ ನಾಲ್ಕನೇ ಬಾರಿ ಸೆಮಿಫೈನಲ್ ಪ್ರವೇಶಿಸಿದ ಸಾಧನೆ ಮಾಡಿದೆ.
ಮೂರನೇ ಕ್ವಾರ್ಟರ್ ಫೈನಲ್ ನಲ್ಲಿ ಮುಂಬೈ ಸಿಟಿ ಫುಟ್ ಬಾಲ್ ಕ್ಲಬ್ ಮತ್ತು ಚೆನ್ನೈಯನ್ ತಂಡಗಳು ಕಾದಾಟ ನಡೆಸಲಿವೆ. ಈ ಪಂದ್ಯ ಸಂಜೆ ಆರು ಗಂಟೆಗೆ ನಡೆಯಲಿದೆ.