Durand Cup Football 2022- ಕೇರಳ ಬ್ಲ್ಯಾಸ್ಟರ್ಸ್ ಮತ್ತು ಆರ್ಮಿ ಗ್ರೀನ್ – ಯಾರು ಗೆಲ್ತಾರೆ ?
ಡುರಾಂಡ್ ಕಪ್ ಫುಟ್ ಬಾಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಕೇರಳ ಬ್ಲ್ಯಾಸ್ಟರ್ಸ್ ಮತ್ತು ಆರ್ಮಿ ಗ್ರೀನ್ ತಂಡಗಳ ನಡುವೆ ನಡೆಯಲಿದೆ.
ಡಿ ಗುಂಪಿನ ಈ ಪಂದ್ಯ ಉಭಯ ತಂಡಗಳಿಗೆ ಮಹತ್ವದ ಪಂದ್ಯವಾಗಿದೆ. ಈಗಗಲೇ ಕೇರಳ ಬ್ಲ್ಯಾಸ್ಟರ್ಸ್ ತಂಡ ಆಡಿರುವ ನಾಲ್ಕು ಪಂದ್ಯಗಳಲ್ಲಿ ಒಂದು ಪಂದ್ಯದಲ್ಲಿ ಮಾತ್ರ ಜಯ ಸಾಧಿಸಿದೆ. ಎರಡು ಪಂದ್ಯಗಳಲ್ಲಿ ಸೋಲು ಕಂಡಿದೆ. ಒಂದು ಪಂದ್ಯ ಡ್ರಾಗೊಂಡಿದೆ. ಹೀಗಾಗಿ ಕೇರಳ ತಂಡ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.
ಇನ್ನು ಆರ್ಮಿ ಗ್ರೀನ್ ತಂಡ ಆಡಿರುವ ಮೂರು ಪಂದ್ಯಗಳಲ್ಲಿ ಎರಡು ಪಂದ್ಯಗಳನ್ನು ಡ್ರಾ ಮಾಡಿಕೊಂಡಿದೆ. ಒಂದು ಪಂದ್ಯದಲ್ಲಿ ಜಯ ಸಾಧಿಸಿದೆ. ಐದು ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಲ್ಲಿದ್ರೆ, ಒಡಿಸ್ಸಾ ತಂಡ ಆಡಿರುವ ಮೂರು ಪಂದ್ಯಗಳನ್ನು ಗೆದ್ದು ಡಿ ಬಣದಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ.
ನಿನ್ನೆ ನಡೆದ ಪಂದ್ಯದಲ್ಲಿ ಬೆಂಗಳೂರು ಫುಟ್ ಬಾಲ್ ಕ್ಲಬ್ ಮತ್ತು ಗೋವಾ ತಂಡಗಳು 2-2 ಗೋಲುಗಳಿಂದ ಪಂದ್ಯವನ್ನು ಡ್ರಾ ಮಾಡಿಕೊಂಡಿದೆ. ಈ ಮೂಲಕ ಬೆಂಗಳೂರು ಫುಟ್ ಬಾಲ್ ಕ್ಲಬ್ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದೆ.