ಆರಂಭಿಕ ಬ್ಯಾಟ್ಸ್‌ಮನ್ ಜೇಸನ್ ರಾಯ್(101*) ಅಜೇಯ ಶತಕ ಹಾಗೂ ನಾಯಕ ಜಾಸ್ ಬಟ್ಲರ್(86*) ಭರ್ಜರಿ ಬ್ಯಾಟಿಂಗ್‌ನಿಂದ ಅಬ್ಬರಿಸಿದ ಇಂಗ್ಲೆಂಡ್ ಅತಿಥೇಯ ನೆದರ್ಲೆಂಡ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಆ ಮೂಲಕ ODI ಸರಣಿಯನ್ನ ಕ್ಲೀಸ್ ಸ್ವೀಪ್ ಮಾಡಿದ ಇಂಗ್ಲೆಂಡ್ 3-0 ಅಂತರದಲ್ಲಿ ಸರಣಿ ಗೆದ್ದು ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.
ಆಮ್ಸ್ಟೆಲ್ವೀನ್‌ನ ವಿಆರ್‌ಎ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲ ಬ್ಯಾಟ್ ಮಾಡಿದ ನೆದರ್ಲೆಂಡ್, ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳ ನೆರವಿನಿಂದ 49.2 ಓವರ್‌ಗಳಲ್ಲಿ 244 ರನ್‌ಗಳ ಸ್ಪರ್ಧಾತ್ಮಕ ಮೊತ್ತ ಕಲೆಹಾಕಿತು. ಈ ಟಾರ್ಗೆಟ್ ಚೇಸ್ ಮಾಡಿದ ಇಂಗ್ಲೆಂಡ್, ಸ್ಪೋಟಕ ಬ್ಯಾಟಿಂಗ್ ಮೂಲಕ 30.1 ಓವರ್‌ಗಳಲ್ಲಿ 2 ವಿಕೆಟ್‌ಗೆ 248 ರನ್‌ಗಳಿತು.

ಅಗ್ರ ಕ್ರಮಾಂಕದ ಆಸರೆ:
ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ನೆದರ್ಲೆಂಡ್ ಆರಂಭದಲ್ಲೇ ವಿಕ್ರಮ್‌ಜಿತ್ ಸಿಂಗ್(6) ವಿಕೆಟ್ ಕಳೆದುಕೊಂಡು ಆಘಾತ ಕಂಡಿತು. ನಂತರ ಜೊತೆಯಾದ ಮ್ಯಾಕ್ಸ್ ಓಡೌಡ್(50) ಹಾಗೂ ಟಾಮ್ ಕೂಪರ್(33) ಜವಾಬ್ದಾರಿಯ ಬ್ಯಾಟಿಂಗ್‌ನಿಂದ ತಂಡಕ್ಕೆ ಆಸರೆಯಾದರು. ಇವರಿಬ್ಬರ ವಿಕೆಟ್ ಪತನದ ಬಳಿಕ ಬಂದ ಡೆಲೀಡ್(56) ಹಾಗೂ ನಾಯಕ ಎಡ್ವರ್ಡ್ಸ್(64) ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದರು. ಅಲ್ಲದೇ ಇಂಗ್ಲೆಂಡ್ ಬೌಲಿಂಗ್ ದಾಳಿಯನ್ನ ಸಮರ್ಥವಾಗಿ ಎದುರಿಸಿದ ಈ ಜೋಡಿ ತಂಡದ ಮೊತ್ತವನ್ನ 200ರ ಗಡಿದಾಟಿಸಿದರು. ಆದರೆ ನಂತರ ಕಣಕ್ಕಿಳಿದ ಯಾವ ಆಟಗಾರರು ಸಹ ನಿರೀಕ್ಷಿತ ಆಟವಾಡಲಿಲ್ಲ. ಅಂತಿಮವಾಗಿ ನೆದರ್ಲೆಂಡ್ 244 ರನ್‌ಗಳಿಗೆ ಆಲೌಟ್ ಆಯಿತು. ಇಂಗ್ಲೆಂಡ್ ಪರ ಡೇವಿಡ್ ವಿಲ್ಲಿ(4/34) ವಿಕೆಟ್ ಪಡೆದು ಮಿಂಚಿದರು.

ಆಂಗ್ಲರ ಸ್ಪೋಟಕ ಆಟ:
ನೆದರ್ಲೆಂಡ್ ನೀಡಿದ 245 ರನ್‌ಗಳ ಗುರಿ ಬೆನ್ನತ್ತಿದ ಇಂಗ್ಲೆಂಡ್, ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿತು. ಆರಂಭಿಕನಾಗಿ ಕಣಕ್ಕಿಳಿದ ಫಿಲಿಪ್ ಸ್ಲಟ್(49) ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿ ವಿಕೆಟ್ ಒಪ್ಪಿಸಿದರು. ಆದರೆ ನಂತರ ಬಂದ ಡಾವಿಡ್ ಮಲಾನ್(0) ಡಕೌಟ್ ಆಗಿ ನಿರಾಸೆ ಅನುಭವಿಸಿದರು. ಈ ಹಂತದಲ್ಲಿ ಜೊತೆಯಾದ ಜೇಸನ್ ರಾಯ್ 101* ರನ್(86 ಬಾಲ್, 15 ಬೌಂಡರಿ) ಹಾಗೂ ನಾಯಕ ಜಾಸ್ ಬಟ್ಲರ್ 86* ರನ್(7 ಬೌಂಡರಿ, 5 ಸಿಕ್ಸ್) ಮೂಲಕ ಎದುರಾಳಿ ಬೌಲರ್‌ಗಳನ್ನು ಧೂಳಿಪಟ ಮಾಡಿದರು. ಮಲಾನ್ ಭರ್ಜರಿ ಶತಕ ಸಿಡಿಸಿ ಮಿಂಚಿದರೆ, ಬಟ್ಲರ್ ಅರ್ಧಶತಕ ಸಿಡಿಸಿ ಅಬ್ಬರಿಸಿದರು. ಇವರಿಬ್ಬರ 3ನೇ ವಿಕೆಟ್‌ಗೆ 163* ರನ್‌ಗಳ ಜೊತೆಯಾಟದ ನೆರವಿನಿಂದ ಇಂಗ್ಲೆಂಡ್, 30.1 ಓವರ್‌ಗಳಲ್ಲಿ ಗೆಲುವಿನ ನಗೆಬೀರಿತು. ಸರಣಿಯ ಕೊನೆಯ ಪಂದ್ಯದಲ್ಲಿ ಭರ್ಜರಿ ಶತಕ ಬಾರಿಸಿದ ಡಾವಿಡ್ ಮಲಾನ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರೆ. ಸರಣಿಯಲ್ಲಿ ಸ್ಪೋಟಕ ಬ್ಯಾಟಿಂಗ್‌ನಿಂದ ಅಬ್ಬರಿಸಿದ ಜಾಸ್ ಬಟ್ಲರ್ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.