ಇಂಗ್ಲೆಂಡ್ ತಂಡದ ಸ್ಪೋಟಕ ಬ್ಯಾಟ್ಸ್ಮನ್ ಹಾಗೂ ವೈಟ್ ಬಾಲ್ ತಂಡದ ನಾಯಕ ಜಾಸ್ ಬಟ್ಲರ್ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಮತ್ತೊಂದು ಮೈಲುಗಲ್ಲು ತಲುಪಿದ್ದು, ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 10 ಸಾವಿರ ರನ್ಗಳನ್ನ ಪೂರೈಸಿದ್ದಾರೆ.
ಸೌತ್ ಆಫ್ರಿಕಾ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಜಾಸ್ ಬಟ್ಲರ್ ಈ ಸಾಧನೆ ಮಾಡಿದ್ದು, ಆ ಮೂಲಕ 10 ಸಾವಿರ ರನ್ ಪೂರೈಸಿದ ಇಂಗ್ಲೆಂಡ್ ತಂಡದ 12ನೇ ಬ್ಯಾಟ್ಸ್ಮನ್ ಎನಿಸಿದ್ದಾರೆ. ಹರಿಣಗಳ ವಿರುದ್ಧ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ಬಟ್ಲರ್, ವೈಯಕ್ತಿಕ 84 ರನ್ಗಳಿಸುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಹೊಸ ಮೈಲುಗಲ್ಲು ತಲುಪಿದರು.
ಮೂರನೇ ಏಕದಿನ ಪಂದ್ಯದಲ್ಲಿ ಮೊದಲ ಬ್ಯಾಟ್ ಮಾಡಿದ ಇಂಗ್ಲೆಂಡ್ ಆರಂಭದಲ್ಲೇ ಪ್ರಮುಖ 3 ವಿಕೆಟ್ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ಹಂತದಲ್ಲಿ ಕಣಕ್ಕಿಳಿದ ನಾಯಕ ಜಾಸ್ ಬಟ್ಲರ್, ಭರ್ಜರಿ ಬ್ಯಾಟಿಂಗ್ ಮೂಲಕ ಶತಕ ಸಿಡಿಸಿ ಸಂಭ್ರಮಿಸಿದರು. 10 ಸಾವಿರ ರನ್ ಪೂರೈಸಿದ ಸಂಭ್ರಮದ ನಡುವೆಯೇ ಶತಕದ ಸಂಭ್ರಮ ಸಹ ಆಚರಿಸಿಕೊಂಡರು. ಸೌತ್ ಆಫ್ರಿಕಾ ಬೌಲಿಂಗ್ ದಾಳಿಗೆ ದಿಟ್ಟ ಉತ್ತರ ನೀಡಿದ ಬಟ್ಲರ್, 127 ಬಾಲ್ಗಳಲ್ಲಿ 6 ಬೌಂಡರಿ, 7 ಸಿಕ್ಸ್ ಮೂಲಕ 131 ರನ್ಗಳಿಸಿ ಮಿಂಚಿದರು.
England, South Africa, ODI Series, Jos Buttler, Elite List, Sports Karnataka