ತವರಿನಲ್ಲಿ ಬ್ಯಾಕ್ ಟು ಬ್ಯಾಕ್ ಸರಣಿಗಳಲ್ಲಿ ತೊಡಗಿರುವ ಇಂಗ್ಲೆಂಡ್(England) ಮುಂಬರುವ ಸೌತ್ ಆಫ್ರಿಕಾ(South Africa) ವಿರುದ್ಧದ ODI ಹಾಗೂ T20I ಸರಣಿಗೆ ಸಜ್ಜಾಗಿದ್ದು, ಎರಡು ಸರಣಿಗಳಿಗೆ ತಂಡವನ್ನ ಪ್ರಕಟಿಸಿದೆ.
ಆಂಗ್ಲರ ಪರ ಟೆಸ್ಟ್ ಕ್ರಿಕೆಟ್ನಲ್ಲಿ ಮಿಂಚುವ ಜೊತೆಗೆ ಚೊಚ್ಚಲ ಲಿಸ್ಟ್-ಎ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ 16 ವಿಕೆಟ್ ಪಡೆದು ಮಿಂಚಿದ್ದ ಸ್ಪೀಡ್ ಬೌಲರ್ ಮ್ಯಾಥ್ಯೂ ಪಾಟ್ಸ್ ಚೊಚ್ಚಲ ODI ಸರಣಿಗೆ ಆಯ್ಕೆ ಆಗಿದ್ದಾರೆ. ಇನ್ನೂ ಟೀಂ ಇಂಡಿಯಾ ವಿರುದ್ಧದ ಏಕದಿನ ಮತ್ತು ಟಿ20 ಸರಣಿಯಿಂದ ಹೊರಗುಳಿದಿದ್ದ ಆದಿಲ್ ರಶೀದ್, ಕಮ್ ಬ್ಯಾಕ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಹಜ್ ಯಾತ್ರೆಗೆ ತೆರಳಲು ಅವಕಾಶ ಕಲ್ಪಿಸಿಕೊಟ್ಟಿದ್ದ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ಸ್, ಲೆಗ್ ಸ್ಪಿನ್ನರ್ಗೆ ಟಿ20 ಮತ್ತು ಏಕದಿನ ಸರಣಿಯಿಂದ ಕೈಬಿಡಲಾಗಿತ್ತು.
ಭಾರತದ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿದಿದ್ದ ಜಾನಿ ಬೈರ್ಸ್ಟೋವ್, ಸೌತ್ ಆಫ್ರಿಕಾ ವಿರುದ್ದದ T20I ಸರಣಿಯಲ್ಲಿ ಸ್ಥಾನ ಪಡೆದಿದ್ದಾರೆ. ಇವರ ನಡುವೆ ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಬೆನ್ ಸ್ಟೋಕ್ಸ್ ಸಹ ಉಭಯ ತಂಡಗಳಲ್ಲಿ ಆಡುವ ಅವಕಾಶ ಗಿಟ್ಟಿಸಿದ್ದಾರೆ. ಇನ್ನು ಟೀಂ ಇಂಡಿಯಾ ವಿರುದ್ಧ 2ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಬೌಲಿಂಗ್ ದಾಳಿ ನಡೆಸಿ ಇಂಗ್ಲೆಂಡ್ ಗೆಲುವಿಗೆ ಕಾರಣವಾಗಿದ್ದ ರೀಸ್ ಟಾಪ್ಲಿ ಸಹ ಏಕದಿನ ಮತ್ತು ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಉಭಯ ತಂಡಗಳ ನಡುವಿನ ODI ಸರಣಿಯ ಮೊದಲ ಪಂದ್ಯ ಜು.19ರಿಂದ ಆರಂಭಗೊಳ್ಳಲಿದ್ದು, ಜು.27ರಿಂದ ಟಿ20 ಸರಣಿ ಆರಂಭವಾಗಲಿದೆ.
ಇಂಗ್ಲೆಂಡ್ ODI ತಂಡ: ಜೋಸ್ ಬಟ್ಲರ್(ನಾಯಕ), ಮೊಯಿನ್ ಅಲಿ, ಜಾನಿ ಬೈರ್ಸ್ಟೋವ್, ಬ್ರೈಡನ್ ಕಾರ್ಸೆ, ಸ್ಯಾಮ್ ಕರ್ರನ್, ಲಿಯಾಮ್ ಲಿವಿಂಗ್ಸ್ಟೋನ್, ಕ್ರೇಗ್ ಓವರ್ಟನ್, ಮ್ಯಾಥ್ಯೂ ಪಾಟ್ಸ್, ಆದಿಲ್ ರಶೀದ್, ಜೋ ರೂಟ್, ಜೇಸನ್ ರಾಯ್, ಫಿಲ್ ಸಾಲ್ಟ್, ಬೆನ್ ಸ್ಟೋಕ್ಸ್, ರೀಸ್ ಟಾಪ್ಲಿ, ಡೇವಿಡ್ ವಿಲ್ಲಿ
ಇಂಗ್ಲೆಂಡ್ T20I ತಂಡ: ಜೋಸ್ ಬಟ್ಲರ್(ನಾಯಕ), ಮೊಯಿನ್ ಅಲಿ, ಜಾನಿ ಬೈರ್ಸ್ಟೋವ್, ಹ್ಯಾರಿ ಬ್ರೂಕ್, ಸ್ಯಾಮ್ ಕರ್ರನ್, ರಿಚರ್ಡ್ ಗ್ಲೀಸನ್, ಕ್ರಿಸ್ ಜೋರ್ಡಾನ್, ಲಿಯಾಮ್ ಲಿವಿಂಗ್ಸ್ಟೋನ್, ಡೇವಿಡ್ ಮಲನ್, ಆದಿಲ್ ರಶೀದ್, ಜೇಸನ್ ರಾಯ್, ಫಿಲ್ ಸಾಲ್ಟ್, ರೀಸ್ ಟಾಪ್ಲಿ, ಡೇವಿಡ್ ವಿಲ್ಲಿ.