England Vs South Africa- ದಕ್ಷಿಣ ಆಫ್ರಿಕಾ ಟಿ-20 ಸರಣಿಗೆ ಬೆನ್ ಸ್ಟೋಕ್ಸ್ ಗೆ ವಿಶ್ರಾಂತಿ..!

ಆಸ್ಟ್ರೇಲಿಯಾದಲ್ಲಿ ಅಕ್ಟೋಬರ್ 16ರಿಂದ ಐಸಿಸಿ ಟಿ-20 ವಿಶ್ವಕಪ್ ಟೂರ್ನಿ ನಡೆಯಲಿದೆ. ಈಗಾಗಲೇ ಟೂರ್ನಿಯಲ್ಲಿ ಆಡಲಿರುವ ತಂಡಗಳು ಸಕತ್ ತಯಾರಿಯನ್ನು ನಡೆಸುತ್ತಿವೆ.
ಇದೀಗ ಇಂಗ್ಲೆಂಡ್ ತಂಡ ಟೀಮ್ ಇಂಡಿಯಾ ವಿರುದ್ಧದ ಏಕದಿನ ಸರಣಿಯ ಮುಗಿದ ಬೆನ್ನಲ್ಲೇ ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಮತ್ತು ಟಿ-20 ಸರಣಿಗಳನ್ನು ಆಡಲಿದೆ
ದಕ್ಷಿಣ ಆಫ್ರಿಕಾ ಸರಣಿಗೆ ಇಂಗ್ಲೆಂಡ್ ಕ್ರಿಕೆಟ್ ತಂಡವನ್ನು ಪ್ರಕಟಿಸಿದೆ. ಟೆಸ್ಟ್ ಕ್ಯಾಪ್ಟನ್ ಬೆನ್ ಸ್ಟೋಕ್ಸ್ ಅವರಿಗೆ ಟಿ-20 ಸರಣಿಗೆ ವಿಶ್ರಾಂತಿ ನೀಡಲಾಗಿದೆ. ಆದ್ರೆ ಏಕದಿನ ಸರಣಿಯಲ್ಲಿ ಆಡಲಿದ್ದಾರೆ.
ಏಕದಿನ ಸರಣಿ ಜುಲೈ 19ರಿಂದ ನಡೆಯಲಿದೆ. ಟಿ-20 ಸರಣಿ ಜುಲೈ 27ರಿಂದ ಆರಂಭವಾಗಲಿದೆ.
ವರ್ಕ್‍ಲೋಡ್ ಮತ್ತು ಫಿಟ್ ನೆಸ್ ಗಾಗಿ ಬೆನ್ ಸ್ಟೋಕ್ಸ್ ಅವರಿಗೆ ವಿಶ್ರಾಂತಿ ನೀಡಲಾಗಿದೆ ಎಂದು ಇಂಗ್ಲೆಂಡ್ ಕ್ರಿಕೆಟ್ ಮಂಡಳಿಯು ತಿಳಿಸಿದೆ.

sportskarnataka
ಈ ಹಿಂದೆ ಬೆನ್ ಸ್ಟೋಕ್ಸ್ ಅವರು ಟೀಮ್ ಇಂಡಿಯಾ ವಿರುದ್ಧದ ಟಿ-20 ಸರಣಿಗೆ ಆಯ್ಕೆಯಾಗಿದ್ದರು. ಆದ್ರೆ ಟೆಸ್ಟ್ ಪಂದ್ಯಗಳ ಬಳಿಕ ಅವರಿಗೆ ವಿಶ್ರಾಂತಿ ನೀಡಲಾಗಿತ್ತು.
ಇನ್ನು ಬೆನ್ ಸ್ಟೋಕ್ಸ್ ಸಾರಥ್ಯದಲ್ಲಿ ಇಂಗ್ಲೆಂಡ್ ಟೆಸ್ಟ್ ತಂಡ ಅದ್ಭುತವಾದ ಪ್ರದರ್ಶನವನ್ನೇ ನೀಡಿದೆ. ಸತತ ನಾಲ್ಕು ಪಂದ್ಯಗಳಲ್ಲೂ ಜಯ ಸಾಧಿಸಿದೆ. ನ್ಯೂಜಿಲೆಂಡ್ ತಂಡವನ್ನು ಕ್ಲೀನ್ ಸವೀಪ್ ಮಾಡಿಕೊಂಡ ಇಂಗ್ಲೆಂಡ್, ಭಾರತ ವಿರುದ್ಧದ ಐದನೇ ಟೆಸ್ಟ್ ಪಂದ್ಯವನ್ನು ಸರಣಿಯನ್ನು ಸಮಬಲಗೊಳಿಸುವಲ್ಲಿ ಯಶಸ್ವಿಯಾಗಿದೆ.
ಇನ್ನು ಟೀಮ್ ಇಂಡಿಯಾ ವಿರುದ್ಧದ ಅಂತಿಮ ಏಕದಿನ ಪಂದ್ಯ ಜುಲೈ 16ರಂದು ನಡೆಯಲಿದೆ. ಈ ಪಂದ್ಯವನ್ನು ಗೆದ್ದ ತಂಡ ಸರಣಿಯನ್ನು ಗೆಲ್ಲಲಿದೆ.
ದಕ್ಷಿಣ ಆಫ್ರಿಕಾ ವಿರುದ್ಧ ಇಂಗ್ಲೆಂಡ್ ಏಕದಿನ ತಂಡ
ಜೋಸ್ ಬಟ್ಲರ್ (ನಾಯಕ), ಮೋಯಿನ್ ಆಲಿ, ಜಾನಿ ಬೇರ್ ಸ್ಟೋವ್, ಬ್ರೈಡನ್ ಕಾರ್ಸ್, ಸ್ಯಾಮ್ ಕುರನ್, ಲಿಯಾಮ್ ಲಿವಿಂಗ್ ಸ್ಟನ್, ಕ್ರೇಗ್ ಒವರ್ಟನ್, ಮ್ಯಾಥ್ಯೂ ಪೊಟ್ಸ್, ಆದೀಲ್ ರಶೀದ್, ಜೋಯ್ ರೂಟ್, ಜೇಸನ್ ರಾಯ್, ಫಿಲ್ ಸಾಲ್ಟ್, ಬೆನ್ ಸ್ಟೋಕ್ಸ್, ರೀಸ್ ಟಾಪ್ಲೆ, ಡೇವಿಡ್ ವಿಲ್ಲೆ.
ದಕ್ಷಿಣ ಆಫ್ರಿಕಾ ವಿರುದ್ಧ ಇಂಗ್ಲೆಂಡ್ ಟಿ-20 ತಂಡ
ಜೋಸ್ ಬಟ್ಲರ್ (ನಾಯಕ), ಮೋಯಿನ್ ಆಲಿ, ಜಾನಿ ಬೇರ್ ಸ್ಟೋವ್, ಹ್ಯಾರಿ ಬ್ರೂಕ್, ಸ್ಯಾಮ್ ಕುರನ್, ರಿಚರ್ಡ್ ಗ್ಲೀಸನ್, ಕ್ರಿಸ್ ಜೋರ್ಡಾನ್, ಲಿಯಾಮ್ ಲಿವಿಂಗ್‍ಸ್ಟನ್, ಡೇವಿಡ್ ಮಲಾನ್, ಆದೀಲ್ ರಶೀದ್, ಜೇಸನ್ ರಾಯ್, ಫಿಲ್ ಸಾಲ್ಟ್, ರೀಸ್ ಟಾಪ್ಲೆ, ಡೇವಿಡ್ ವಿಲ್ಲೆ