ಅಹಮದಾಬಾದ್‍ನ ನರೇಂದ್ರ ಮೋದಿ ಕ್ರೀಡಾಂಗಣ ಗಿನ್ನಿಸ್ ಬುಕ್ ಆಫ್ ರೆಕಾರ್ಡ್ನಲ್ಲಿ ಸ್ಥಾನ ಪಡೆದಿದೆ.
ಐಪಿಎಲ್ 15ರ ಆವೃತ್ತಿಯ ಫೈನಲ್ ಪಂದ್ಯ ಮೇ29ರಂದು ನರೇಂದ್ರ ಮೋದಿ ಮೈದಾನದಲ್ಲಿ ನಡೆದಿತ್ತು. ಅಂದಿನ ಫೈನಲ್ ಪಂದ್ಯ ಗುಜರಾತ್ ಟೈಟಾನ್ಸ್ ಮತ್ತು ರಾಜಸ್ತಾನ ರಾಯಲ್ಸ್ ನಡುವೆ ನಡೆದಿತ್ತು.
ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ ಚಾಂಪಿಯನ್ನಾಗಿ ಹೊರಹೊಮ್ಮಿತ್ತು.
ಅಂತಿಮ ಕದನವನ್ನು ವೀಕ್ಷಿಸಲು 101,566 ಮಂದಿ ಹಾಜರಿದ್ದರು. ಟಿ20 ಪಂದ್ಯವೊಂದರ ವೀಕ್ಷಣೆಗೆ ಅತ್ಯಕ ಪ್ರೇಕ್ಷಕರು ಸೇರಿದ ಮೈದಾನವೆಂಬ ವಿಶ್ವ ದಾಖಲೆಗೆ ನರೇಂದ್ರ ಮೋದಿ ಕ್ರೀಡಾಂಗಣ ಪಾತ್ರವಾಗಿದೆ.
ಎಲ್ಲಾ ಭಾರತೀಯರು ಹೆಮ್ಮೆ ಪಡುವ ವಿಚಾರ ಎಂದು ಬಿಸಿಸಿಐ ಟ್ವೀಟ್ ಮಾಡಿದೆ.
ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಗಿನ್ನಿಸ್ ದಾಖಲೆಯ ಸರ್ಟಿಫಿಕೇಟ್ ಅನ್ನು ಸ್ವೀಕರಿಸಿದ್ದಾರೆ.