ಮ್ಯಾಂಚೆಸ್ಟರ್‌ನಲ್ಲಿ ಭರ್ಜರಿ ದಾಳಿ ನಡೆಸಿದ Hardik Pandya ವಿಶೇಷ ಸಾಧನೆ
ಭಾರತ ಮತ್ತು ಇಂಗ್ಲೆಂಡ್ ನಡುವಿನ ಏಕದಿನ ಸರಣಿಯ ಮೂರನೇ ಪಂದ್ಯ ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆಯಿತು. ಈ ಪಂದ್ಯದಲ್ಲಿ ಇಂಗ್ಲೆಂಡ್ ಭಾರತಕ್ಕೆ ಗೆಲುವಿಗೆ 260 ರನ್ ಟಾರ್ಗೆಟ್ ನೀಡಿತ್ತು. ಈ ವೇಳೆ ಹಾರ್ದಿಕ್ ಪಾಂಡ್ಯ ಅಮೋಘ ಪ್ರದರ್ಶನ ನೀಡಿದರು. ಅವರು 4 ವಿಕೆಟ್ ಪಡೆದು ಮಿಂಚಿದರು. ತಮ್ಮ ಬೌಲಿಂಗ್ ಬಲದಿಂದ ಪಾಂಡ್ಯ ವಿಶೇಷ ಸಾಧನೆ ಮಾಡಿದರು. ಈ ಮೈದಾನದಲ್ಲಿ ಭಾರತದ ಪರ ಅತ್ಯುತ್ತಮ ಪ್ರದರ್ಶನ ನೀಡಿದ ಮೂರನೇ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಪಾಂಡ್ಯ 7 ಓವರ್ ಗಳಲ್ಲಿ ಕೇವಲ 24 ರನ್ ನೀಡಿ 4 ವಿಕೆಟ್ ಪಡೆದರು. ಈ ಸಮಯದಲ್ಲಿ ಅವರು 3 ಮೇಡನ್ ಓವರ್‌ಗಳನ್ನು ಸಹ ಮಾಡಿದರು. ಜೇಸನ್ ರಾಯ್, ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್ ಮತ್ತು ಲಿಯಾಮ್ ಲಿವಿಂಗ್‌ಸ್ಟೋನ್ ಅವರ ವಿಕೆಟ್‌ಗಳನ್ನು ಹಾರ್ದಿಕ್ ಪಡೆದರು. ಅವರು ಓಲ್ಡ್ ಟ್ರಾಫರ್ಡ್‌ನಲ್ಲಿ ಟೀಮ್ ಇಂಡಿಯಾದ ಅತ್ಯುತ್ತಮ ಬೌಲಿಂಗ್ ಪ್ರದರ್ಶನದ ವಿಷಯದಲ್ಲಿ ಮೂರನೇ ಸ್ಥಾನವನ್ನು ತಲುಪಿದ್ದಾರೆ.

ವೆಂಕಟೇಶ್ ಪ್ರಸಾದ್ ಅವರು ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ದಾಖಲೆ ಹೊಂದಿದ್ದಾರೆ. ಅವರು 1999 ರಲ್ಲಿ ಪಾಕಿಸ್ತಾನದ ವಿರುದ್ಧ 27 ರನ್‌ಗಳಿಗೆ 5 ವಿಕೆಟ್ ಪಡೆದಿದ್ದಾರೆ. ಈ ಪಟ್ಟಿಯಲ್ಲಿ ಮೊಹಮ್ಮದ್ ಶಮಿ ಎರಡನೇ ಸ್ಥಾನದಲ್ಲಿದ್ದಾರೆ. ಅವರು 2019 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 16 ರನ್ ಳಿಗೆ 4 ವಿಕೆಟ್ ಗಳನ್ನು ಪಡೆದರು. ಈ ಪಟ್ಟಿಗೆ ಪಾಂಡ್ಯ ಹೆಸರೂ ಸೇರ್ಪಡೆಯಾಗಿದೆ. 24 ರನ್ ನೀಡಿ 4 ವಿಕೆಟ್ ಪಡೆದರು.

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ಭಾರತದ ಬೌಲರ್‌ಗಳ ಅತ್ಯುತ್ತಮ ಪ್ರದರ್ಶನ –
5/27 – ವೆಂಕಟೇಶ್ ಪ್ರಸಾದ್ ವಿರುದ್ಧ ಪಾಕ್, 1999 ವಿಶ್ವಕಪ್
4/16 – ಮೊಹಮ್ಮದ್ ಶಮಿ vs ವೆಸ್ಟ್ ಇಂಡೀಸ್, 2019 ವಿಶ್ವಕಪ್
4/24 – ಹಾರ್ದಿಕ್ ಪಾಂಡ್ಯ ವಿರುದ್ಧ ಇಂಗ್ಲೆಂಡ್, 2022