HS Prannoy – ಶ್ವೇತಾ ಗೋಮ್ಸ್ ಜೊತೆ ಎಚ್.ಎಸ್. ಪ್ರಣೋಯ್ ಮದುವೆ..!

ವಿಶ್ವದ ನಂಬರ್ ವನ್ ಬ್ಯಾಡ್ಮಿಂಟನ್ ಆಟಗಾರ ಎಚ್. ಎಸ್. ಪ್ರಣೋಯ್ ಅವರು ಶೀಘ್ರದಲ್ಲೇ ಹಸೆಮಣೆ ಏರಲಿದ್ದಾರೆ.
ಈ ವಿಚಾರವನ್ನು ಸ್ವತಃ ಎಚ್. ಎಸ್. ಪ್ರಣೋಯ್ ಅವರೇ ಬಹಿರಂಗಪಡಿಸಿದ್ದಾರೆ. ತನ್ನ ಬಹುಕಾಲದ ಗೆಳತಿ ಶ್ವೇತಾ ಗೋಮ್ಸ್ ಅವರೊಂದಿಗೆ ಮದುವೆಯಾಗಲಿದ್ದಾರೆ.

ಪ್ರಿ ವೆಡ್ಡಿಂಗ್ ಶೂಟ್ ಫೋಟೋಗಳನ್ನು ತನ್ನ ಸಾಮಾಜಿಕ ಜಾಲ ತಾಣದಲ್ಲಿ ಶೇರ್ ಮಾಡಿಕೊಂಡಿರುವ ಎಚ್.ಎಸ್. ಪ್ರಣೋಯ್ ಅವರು ಇನ್ನು ಮೂರು ದಿನಗಳಿವೆ ಎಂದು ಬರೆದುಕೊಂಡಿದ್ದಾರೆ.
ಎಚ್. ಎಸ್. ಪ್ರಣೋಯ್ ಅವರು ಸದ್ಯ ವಿಶ್ವ ಬ್ಯಾಡ್ಮಿಂಟನ್ ಶ್ರೇಯಾಂಕಪಟ್ಟಿಯಲ್ಲಿ ನಂಬರ್ ವನ್ ಸ್ಥಾನದಲ್ಲಿದ್ದಾರೆ.
ಎಚ್. ಎಸ್. ಪ್ರಣೋಯ್ ಅವರು 2022ರಲ್ಲಿ ಅದ್ಭುತವಾದ ಆಟವನ್ನೇ ಆಡಿದ್ದರು. ಜನವರಿಯಲ್ಲಿ ನಡೆದಿದ್ದ ಇಂಡಿಯನ್ ಓಪನ್ ನಲ್ಲಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದರು. ಹಾಗೇ ಸಯ್ಯದ್ ಮೋದಿ ಇಂಟರ್ ನ್ಯಾಷನಲ್ ಟೂರ್ನಿಯಲ್ಲೂ ಕ್ವಾರ್ಟರ್ ಫೈನಲ್ ತಲುಪಿದ್ದರು.

ಮಾರ್ಚ್ ನಲ್ಲಿ ಜರ್ಮನ್ ಓಪನ್ ನಲ್ಲಿ ಕ್ವಾರ್ಟರ್ ಫೈನಲ್, ಆಲ್ ಇಂಗ್ಲೆಂಡ್ ಚಾಂಪಿಯನ್ ಷಿಪ್ ನಲ್ಲಿ ಮೊದಲ ಸುತ್ತಿನಲ್ಲೇ ನಿರಾಸೆ ಅನುಭವಿಸಿದ್ದರು. ಬಳಿಕ ಸ್ವೀಸ್ ಓಪನ್ ನಲ್ಲಿ ರನ್ನರ್ ಅಪ್ ಆಗಿದ್ದರು. ಆದ್ರೆ ಕೊರಿಯಾ ಓಪನ್ ಮತ್ತು ಥಾಯ್ಲೆಂಡ್ ಟೂರ್ನಿಗಳಲ್ಲಿ ಮೊದಲ ಸುತ್ತಿನಲ್ಲೇ ನಿರ್ಗಮಿಸಿದ್ದರು.
ಇನ್ನುಇಂಡೊನೇಶಿಯಾ ಓಪನ್ ನಲ್ಲಿ ಸೆಮಿಫೈನಲ್ ಹಾಗೂ ಮಲೇಶಿಯಾ ಓಪನ್ ನಲ್ಲಿ ಕ್ವಾರ್ಟರ್ ಫೈನಲ್ ಹಾಗೂ ಮಲೇಶಿಯಾ ಮಾಸ್ಟರ್ಸ್ ಟೂರ್ನಿಯಲ್ಲಿ ಸೆಮಿಫೈನಲ್ ಮತ್ತು ಸಿಂಗಾಪುರ ಓಪನ್ ನಲ್ಲಿ ಕ್ವಾರ್ಟರ್ ಫೈನಲ್ ಹಾಗೂ ಜಪಾನ್ ಓಪನ್ ನಲ್ಲೂ ಕ್ವಾರ್ಟರ್ ಫೈನಲ್ ಪ್ರವೇಸಿಸಿದ್ದರು.