ICC – ಬರ್ಮಿಂಗ್ ಹ್ಯಾಮ್ ನಲ್ಲಿ ಜುಲೈ 25 ಮತ್ತು 26ರಂದು ಐಸಿಸಿ ಸಭೆ
ಜುಲೈ 25 ಮತ್ತು 26ರಂದು ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿಯ ಸಭೆ ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯಲಿದೆ.
ಕಾಮನ್ ವೆಲ್ತ್ ಗೇಮ್ಸ್ ಹಿನ್ನಲೆಯಲ್ಲಿ ನಡೆಯಲಿರುವ ಈ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು. ಅಲ್ಲದೆ ಈ ಸಭೆಯಲ್ಲಿ ಎಲ್ಲಾ ಕ್ರಿಕೆಟ್ ಮಂಡಳಿಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
2024ರಿಂದ 2013ರವರೆಗಿನ ಅಂತಾರಾಷ್ಟ್ರೀಯ ಕ್ರಿಕೆಟ್ ವೇಳಾಪಟ್ಟಿ (ಐಸಿಸಿ ಫ್ಯೂಚರ್ ಟೂರ್ಸ್) ಮತ್ತು ಐಸಿಸಿ ನೂತನ ಅಧ್ಯಕ್ಷರ ಆಯ್ಕೆಯ ಬಗ್ಗೆಯೂ ಚರ್ಚೆ ನಡೆಯಲಿದೆ. ICC -ICC board meet on 25 and 26th of July in Birmingham
ಇದೇ ವೇಳೆ ಅಕ್ಟೋಬರ್ ನಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ ಟೂರ್ನಿಯ ತಯಾರಿಯ ಕುರಿತು ಕೂಡ ಸಭೆಯಲ್ಲಿ ಚರ್ಚೆ ನಡೆಯಲಿದೆ.
ಇನ್ನೊಂದೆಡೆ ಬಿಸಿಸಿಐ ಮುಂಬರುವ ಐಪಿಎಲ್ ಟೂರ್ನಿಗೆ ಐಸಿಸಿ ಎಫ್‍ಟಿಎಫ್ ನಲ್ಲಿ ಅವಕಾಶ ನೀಡಬೇಕು ಎಂದು ಈಗಾಗಲೇ ಬಿಸಿಸಿಐ ಕಾರ್ಯದರ್ಶಿ ಜೈ ಶಾ ಅವರು ಮನವಿ ಮಾಡಿಕೊಂಡಿದ್ದಾರೆ. ಈ ಕುರಿತು ಸಭೆಯಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆಗಳಿವೆ.
ಇನ್ನೊಂದೆಡೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಕೂಡ ಮೂರು ರಾಷ್ಟ್ರಗಳ ನಡುವಿನ ಟಿ-20 ಸರಣಿ ನಡೆಸಲು ಪ್ರಸ್ತಾಪವನ್ನು ಸಲ್ಲಿಸಿದೆ. ಈ ಬಗ್ಗೆಯು ಐಸಿಸಿ ಸಭೆಯಲ್ಲಿ ಚರ್ಚೆ ನಡೆಯಲಿದೆ.