ICC Month Player ಟೀಮ್ ಇಂಡಿಯಾದ ರನ್ ಮಷೀನ್ ವಿರಾಟ್ ಕೊಹ್ಲಿ ಐಸಿಸಿ ಅಕ್ಟೋಬರ್ ತಿಂಗಳ ಆಟಗಾರನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಮೊದಲ ಬಾರಿ ಐಸಿಸಿ ತಿಂಗಳ ಪ್ರಶಸ್ತಿಗೆ ಆಯ್ಕೆಯಾಗಿದ್ದ ವಿರಾಟ್ ಕೊಹ್ಲಿ ಮೊದಲ ಪ್ರಯತ್ನದಲ್ಲೆ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕೊಹ್ಲಿಗೆ ದ.ಆಫ್ರಿಕಾದ ಡೇವಿಡ್ ಮಿಲ್ಲರ್ ಜಿಂಬಾಬ್ವೆಯ ಸಿಕಂದರ್ ರಾಝಾ ಪ್ರಶಸ್ತಿ ಪಡೆದಿದ್ದರು.
ಮಹಿಳಾ ವಿಭಾಗದಲ್ಲಿ ಏಷ್ಯಾಕಪ್ನಲ್ಲಿ ಅಮೋಘ ಪ್ರದರ್ಶನ ತೋರಿದ ಪಾಕ್ನ ನಿದಾ ಧಾರ್ ಮಹಿಳಾ ವಿಭಾಗದಲ್ಲಿ ಪ್ರಶಸ್ತಿ ಗೆದ್ದುಕೊಂಡಿದ್ದಾರೆ.
ಕ್ರಿಕೆಟ್ ಅಭಿಮಾನಿಗಳು, ಮಾಧ್ಯಮ ಪ್ರತಿನಿಧಿಗಳು ಹಾಗೂ ಐಸಿಸಿ ಹಾಲ್ ಆಫ್ ಫೇಮ್ ವಿಜೇತರ ವೋಟುಗಳ ಸಹಾಯದಿಂದ ವಿರಾಟ್ ಕೊಹ್ಲಿ ಹಾಗೂ ನಿಧಾ ಧಾರ್ ಆಯ್ಕೆಯಾಗಿದ್ದಾರೆ.
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ನಲ್ಲಿ ಅಮೋಘ ಪ್ರದರ್ಶನ ನೀಡಿರುವ ವಿರಾಟ್ ಕೊಹ್ಲಿ ಇಡೀ ಕ್ರಿಕೆಟ್ ಜಗತ್ತಿನ ಗಮನ ಸೆಳೆದಿದ್ದಾರೆ.
ಅಕ್ಟೋಬರ್ನಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದ ವಿರಾಟ್ ಕೊಹ್ಲಿ 205 ರನ್ ಕಲೆ ಹಾಕಿದ್ದಾರೆ.
ಪಾಕಿಸ್ತಾನ ವಿರುದ್ಧದ ಬ್ಲಾಕ್ ಬಸ್ಟರ್ ಕದನದಲ್ಲಿ ವಿರಾಟ್ ಕೊಹ್ಲಿ ತಂಡಕ್ಕೆ ಅತಿ ರೋಚಕ ಗೆಲುವು ತಂದುಕೊಟ್ಟರು.53 ಎಸೆತದಲ್ಲಿ ಅಜೇಯ 82 ರನ್ ಹೊಡೆದರು.