ICC Rank: ಅಗ್ರ ಸ್ಥಾನದಿಂದ ಕೆಳಗಿಳಿದ Bumrah, Virat Kohli ಹಿನ್ನಡೆ
ಭಾರತ ಮತ್ತು ಇಂಗ್ಲೆಂಡ್ ನಡುವಿನ ಏಕದಿನ ಸರಣಿಯ ನಂತರ, ಇತ್ತೀಚಿನ ಐಸಿಸಿ ಶ್ರೇಯಾಂಕಗಳನ್ನು ಬಿಡುಗಡೆ ಮಾಡಲಾಗಿದೆ. ಸರಣಿ ಗೆದ್ದರೂ ಭಾರತೀಯ ಆಟಗಾರರು ಐಸಿಸಿ ಶ್ರೇಯಾಂಕದಲ್ಲಿ ಹಿನ್ನಡೆ ಅನುಭವಿಸಿದ್ದಾರೆ. ಕೊನೆಯ ಏಕದಿನ ಪಂದ್ಯವನ್ನು ಆಡದ ಜಸ್ಪ್ರೀತ್ ಬುಮ್ರಾ ಈಗ ಏಕದಿನದಲ್ಲಿ ನಂಬರ್ ಒನ್ ಸ್ಥಾನದಿಂದ ಕೆಳಗೆ ಇಳಿದಿದ್ದಾರೆ. ಬುಮ್ರಾ ಬದಲಿಗೆ ಟ್ರೆಂಟ್ ಬೌಲ್ಟ್ ಈ ಸ್ಥಾನ ಅಲಂಕರಿಸಿದ್ದಾರೆ. ಇದರೊಂದಿಗೆ 2015ರ ನಂತರ ಮೊದಲ ಬಾರಿಗೆ ಏಕದಿನ ಕ್ರಿಕೆಟ್‌ನ ಅಗ್ರ ಮೂರು ಬ್ಯಾಟ್ಸ್‌ಮನ್‌ಗಳ ಪಟ್ಟಿಯಿಂದ ವಿರಾಟ್ ಕೊಹ್ಲಿ ಹೊರಗುಳಿದಿದ್ದಾರೆ.

ಟೀಮ್ ಇಂಡಿಯಾದ ವೇಗಿ ಜಸ್ಪ್ರಿತ್ ಬುಮ್ರಾ 703 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಮೊದಲ ಸ್ಥಾನದಲ್ಲಿರುವ ಟ್ರೆಂಟ್ ಬೌಲ್ಟ್ 704 ಅಂಕಗಳೊಂದಿಗೆ ಮೊದಲ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ.
ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ 2011 ರಿಂದ ಏಕದಿನ ಕ್ರಿಕೆಟ್‌ನ ಟಾಪ್ 5 ಬ್ಯಾಟ್ಸ್‌ಮನ್‌ಗಳ ಪಟ್ಟಿಯಿಂದ ಹೊರಗುಳಿದಿರಲಿಲ್ಲ. ಆದರೆ ವಿರಾಟ್ ಕೊಹ್ಲಿ ಒಂದು ಸ್ಥಾನ ಕಳೆದುಕೊಂಡು ನಾಲ್ಕನೇ ಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ. ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೂಡ ರ್ಯಾಂಕಿಂಗ್ ನಲ್ಲಿ ಒಂದು ಸ್ಥಾನ ಕಳೆದುಕೊಂಡಿದ್ದಾರೆ. ರೋಹಿತ್ ಶರ್ಮಾ ಇದೀಗ ಐದನೇ ಸ್ಥಾನಕ್ಕೆ ತಲುಪಿದ್ದಾರೆ.

ಹಾರ್ದಿಕ್ ಪಾಂಡ್ಯ ಮತ್ತು ರಿಷಬ್ ಪಂತ್ ಇಬ್ಬರೂ ಐಸಿಸಿ ರ್ಯಾಂಕಿಂಗ್‌ನಲ್ಲಿ ಲಾಭ ಪಡೆದಿದ್ದಾರೆ. ಹಾರ್ದಿಕ್ ಪಾಂಡ್ಯ 42ನೇ ಸ್ಥಾನಕ್ಕೆ ತಲುಪಿದ್ದಾರೆ. ರಿಷಬ್ ಪಂತ್ ಇದೀಗ 25 ಸ್ಥಾನ ಜಿಗಿದು 52ನೇ ಸ್ಥಾನಕ್ಕೆ ಏರಿದ್ದಾರೆ. ಆಲ್‌ರೌಂಡರ್‌ಗಳ ಶ್ರೇಯಾಂಕದಲ್ಲಿ ಹಾರ್ದಿಕ್ ಪಾಂಡ್ಯ ಕೂಡ ಲಾಭ ಗಳಿಸಿದ್ದಾರೆ. ಇದೀಗ ಆಲ್ ರೌಂಡರ್ ಗಳ ಯಾಂಕಿಂಗ್ ನಲ್ಲಿ ಹಾರ್ದಿಕ್ ಪಾಂಡ್ಯ 8ನೇ ಸ್ಥಾನಕ್ಕೆ ತಲುಪಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಅದ್ಭುತ ಶತಕ ಸಿಡಿಸಿದ್ದ ವ್ಯಾನ್ ಡೆರ್ ಡಸ್ಸೆನ್ ಇತ್ತೀಚಿನ ಐಸಿಸಿ ರ್ಯಾಂಕಿಂಗ್‌ನಲ್ಲಿ ಏರಿಕೆ ಕಂಡಿದ್ದಾರೆ. ಡಸ್ಸೆನ್ ಮೊದಲ ಬಾರಿಗೆ ಅಗ್ರ ಮೂರು ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿi ಸೇರಿಕೊಂಡಿದ್ದಾರೆ. ಪಾಕ್ ನಾಯಕ ಬಾಬರ್ ಅಜಮ್ ರ್ಯಾಂಕಿಂಗ್ ನಲ್ಲಿ ಮೊದಲ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಇಮಾಮ್-ಉಲ್-ಹಕ್ ಕೂಡ ಶ್ರೇಯಾಂಕದಲ್ಲಿ ಎರಡನೇ ಸ್ಥಾನದಲ್ಲಿ ದೃಢವಾಗಿ ಉಳಿದಿದ್ದಾರೆ.
ICC, ODI, Rank, Jasprit Bumrah, Virat kohli, Rishab pant