ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ 3ನೇ ಸ್ಥಾನಕ್ಕೆ ಟೀಂ ಇಂಡಿಯಾ ಕುಸಿತ
ದುಬೈ: ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಟೀಂ ಇಂಡಿಯಾ ಮೂರನೇ ಸ್ಥಾನಕ್ಕೆ ಕುಸಿತ ಕಂಡಿದೆ.
ಐಸಿಸಿ ಟೆಸ್ಟ್ ರ್ಯಾಂಕಿಂಗ್ ಪಟ್ಟಿ ಇಂದು ಬಿಡುಗಡೆಯಾಗಿದ್ದು, ಆ್ಯಶಸ್‌ನಲ್ಲಿ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಆಸ್ಟ್ರೇಲಿಯಾ ತಂಡ ಮೊದಲ ಸ್ಥಾನದಲ್ಲಿದೆ.
ದಕ್ಷಿಣ ಆಫ್ರಿಕಾ ನೆಲದಲ್ಲಿ ಟೆಸ್ಟ್ ಸರಣಿ ಸೋತಿರುವ ಭಾರತ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಮೂರನೇ ಸ್ಥಾನಕ್ಕೆ ಕುಸಿದಿದೆ. ಎರಡನೇ ಸ್ಥಾನದಲ್ಲಿ ನ್ಯೂಜಿಲೆಂಡ್ ತಂಡವಿದೆ.
ಆಸ್ಟ್ರೇಲಿಯಾ ವಿರುದ್ಧ ಹೀನಾಯವಾಗಿ ಸೋತಿರುವ ಇಂಗ್ಲೆಂಡ್ ನಾಲ್ಕನೇ ಸ್ಥಾನದಲ್ಲಿದೆ.
ಟೀಂ ಇಂಡಿಯಾ ವಿರುದ್ಧ ಟೆಸ್ಟ್ ಸರಣಿ ಗೆದ್ದಿರುವ ದಕ್ಷಿಣ ಆಫ್ರಿಕಾ ತಂಡ ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಐದನೇ ಸ್ಥಾನಕ್ಕೆ ಜಿಗಿದಿದೆ.