ದುಬೈ: ಶ್ರೀಲಂಕಾ ವಿರುದ್ಧದ ಮೊದಲ ಮತ್ತು ಎರಡನೇ ಪಂದ್ಯಗಳಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ ಆಸ್ಟ್ರೇಲಿಯಾದ ವೇಗದ ಬೌಲರ್ ಜೋಶ್ ಹೇಜಲ್ ವುಡ್, ಐಸಿಸಿ ಇತ್ತೀಚಿಗೆ ಬಿಡುಗಡೆ ಮಾಡಿದ ಟಿ-20 ಶ್ರೇಯಾಂಕದಲ್ಲಿ ಏರಿಕೆ ಕಂಡಿದೆ.
ಜೋಶ್ ಹ್ಯಾಜಲ್ ವುಡ್ 783 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ತಬ್ರೇಜ್ ಶಮ್ಸಿ 784 ಅಂಕಗಳೊಂದಿಗೆ ಬೌಲರ್ಗಳ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ. ಮೊದಲ ಸ್ಥಾನದಲ್ಲಿರುವ ಶಮ್ಸಿ ಹಾಗೂ ಹ್ಯಾಜಲ್ ವುಡ್ ನಡುವೆ ಒಂದು ಅಂಕದ ವ್ಯತ್ಯಾಸ ಇದೆ.
ಟಾಪ್-10ರಲ್ಲಿ ಭಾರತದ ಬೌಲರ್ಗಳು ಇಲ್ಲ. ಬ್ಯಾಟ್ಸ್ಮನ್ಗಳ ಶ್ರೇಯಾಂಕದಲ್ಲಿ ಲೋಕೇಶ್ ರಾಹುಲ್ ನಾಲ್ಕನೇ ಸ್ಥಾನದಲ್ಲಿದ್ದರೆ, ಮಾಜಿ ನಾಯಕ ವಿರಾಟ್ ಕೊಹ್ಲಿ 10ನೇ ಸ್ಥಾನದಲ್ಲಿದ್ದಾರೆ.
ಬೌಲರ್ಗಳು ಮತ್ತು ಆಲ್ರೌಂಡರ್ಗಳ ಪಟ್ಟಿಯಲ್ಲಿ ಯಾವುದೇ ಭಾರತೀಯ ಆಟಗಾರ ಟಾಪ್ 10 ರಲ್ಲಿ ಇಲ್ಲ. ಆಸ್ಟ್ರೇಲಿಯಾದ ವೇಗದ ಬೌಲರ್ ಜೋಶ್ ಹೇಜಲ್ವುಡ್ ಇತ್ತೀಚಿನ ಉತ್ತಮ ಪ್ರದರ್ಶನದಿಂದಾಗಿ ಬೌಲಿಂಗ್ ಶ್ರೇಯಾಂಕದಲ್ಲಿ ಎರಡನೇ ಸ್ಥಾನಕ್ಕೆ ಏರಿದ್ದಾರೆ. ದಕ್ಷಿಣ ಆಫ್ರಿಕಾದ ತಬ್ರೇಜ್ ಶಮ್ಸಿ ಅಗ್ರಸ್ಥಾನದಲ್ಲಿದ್ದಾರೆ.
ಆಸ್ಟ್ರೇಲಿಯ ವಿರುದ್ಧದ ಸರಣಿಯಲ್ಲಿ ವನಿಂದು ಹಸರಂಗ ಮೊದಲೆರಡು ಪಂದ್ಯಗಳಲ್ಲಿ ಐದು ವಿಕೆಟ್ ಕಬಳಿಸಿದ್ದರು. ಆದರೆ ಮೂರನೇ ಪಂದ್ಯದಲ್ಲಿ ಅವರು ಆಡಲು ಸಾಧ್ಯವಾಗಿರಲಿಲ್ಲ, ಇದರಿಂದಾಗಿ ಅವರು ಟಿ-20 ಬೌಲಿಂಗ್ ಶ್ರೇಯಾಂಕದಲ್ಲಿ ಮೂರನೇ ಸ್ಥಾನವನ್ನು ತಲುಪಿದ್ದಾರೆ.
ಅವರ ಸಹ ಆಟಗಾರ ಮಹೇಶ್ ದೀಕ್ಷಾ 16 ಸ್ಥಾನಗಳನ್ನು ಹೆಚ್ಚಿಸಿಕೊಂಡು 29ನೇ ಸ್ಥಾನದಲ್ಲಿದ್ದಾರೆ. ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ಶ್ರೀಲಂಕಾದ ಪಥುಮ್ ನಿಸಂಕಾ ಅವರು ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳಲ್ಲಿ 125 ರನ್ಗಳೊಂದಿಗೆ 42 ಸ್ಥಾನಗಳ ಜಿಗಿತದೊಂದಿಗೆ ಜಂಟಿ 31 ನೇ ಸ್ಥಾನಕ್ಕೆ ತಲುಪಿದ್ದಾರೆ..