ICC U19 World Cup- ಪಾಕ್ ಮಣಿಸಿದ ಆಸ್ಟ್ರೇಲಿಯಾ ಸೆಮೀಸ್ ಗೆ ಎಂಟ್ರಿ..!
19 ವಯೋಮಿತಿ ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ಮೂರನೇ ತಂಡವಾಗಿ ಸೂಪರ್ ಲೀಗ್ ಸೆಮಿಫೈನಲ್ ಪ್ರವೇಶಿಸಿದೆ.
ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 119 ರನ್ ಗಳಿಂದ ಪಾಕಿಸ್ತಾನ ತಂಡವನ್ನು ಪರಾಭಗೊಳಿಸಿದೆ.
ಈಗಾಗಲೇ ಇಂಗ್ಲೆಂಡ್, ಅಫಘಾನಿಸ್ತಾನ ಮತ್ತು ಆಸ್ಟ್ರೇಲಿಯಾ ತಂಡಗಳು ಸೆಮಿಫೈನಲ್ ಸ್ಥಾನವನ್ನು ಖಚಿತಪಡಿಸಿಕೊಂಡಿವೆ. ಇನ್ನೊಂದು ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಬಾಂಗ್ಲಾ ದೇಶ ತಂಡಗಳು ಶನಿವಾರ ಕಾದಾಟ ನಡೆಸಲಿವೆ.
ICC U19 World Cup – Australia Outclass Pakistan To Reach Super League Semi-Final
ಮೊದಲು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ ತಂಡ ನಿಗದಿತ 50 ಓವರ್ ಗಳಲ್ಲಿ ಏಳು ವಿಕೆಟ್ ಗೆ 276 ರನ್ ದಾಖಲಿಸಿತ್ತು. ಆಸ್ಟ್ರೇಲಿಯಾ ಪರ ಟಿಯಾಗ್ಯು ವೈಲ್, ಕಾರೇಯ್ ಮಿಲ್ಲರ್ ಅವರು ಆಕರ್ಷಕ ಅರ್ಧಶತಕ ದಾಖಲಿಸಿದ್ರು.
ಸವಾಲನ್ನು ಬೆನ್ನಟ್ಟಿದ್ದ ಪಾಕಿಸ್ತಾನ ತಂಡ ಆಸ್ಟ್ರೇಲಿಯಾದ ಮಾರಕ ಬೌಲಿಂಗ್ ದಾಳಿಗೆ ನಲುಗಿದ 157 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡು ಹೀನಾಯವಾಗಿ ಸೋಲು ಅನುಭವಿಸಿತ್ತು.
ಮೊದಲ ಸೆಮಿಫೈನಲ್ ನಲ್ಲಿ ಇಂಗ್ಲೆಂಡ್ ಮತ್ತು ಅಫಘಾನಿಸ್ತಾನ ತಂಡಗಳು ಕಾದಾಟ ನಡೆಸಲಿವೆ . ಮತ್ತೊಂದು ಸೆಮಿಫೈನಲ್ ನಲ್ಲಿ ಆಸ್ಟ್ರೇಲಿಯಾ ತಂಡವು ಬಾಂಗ್ಲಾ ದೇಶ ಅಥವಾ ಭಾರತ ತಂಡವನ್ನು ಎದುರಿಸಲಿದೆ.