ಭಾರತೀಯ ಏಕದಿನ ತಂಡದ ನಾಯಕಿ ಮಿಥಾಲಿ ರಾಜ್ ಮತ್ತು ಆಲ್ರೌಂಡರ್ ದೀಪ್ತಿ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಮಹಿಳಾ ಏಕದಿನ ರ್ಯಾಂಕಿಂಗ್ನಲ್ಲಿ ಏರಿಕೆ ಕಂಡಿದ್ದಾರೆ. ಮಂಗಳವಾರ ಐಸಿಸಿ ಬಿಡುಗಡೆ ಮಾಡಿರುವ ಇತ್ತೀಚಿನ ಶ್ರೇಯಾಂಕದಲ್ಲಿ ಮಿಥಾಲಿ ಮತ್ತು ದೀಪ್ತಿ ತಲಾ ಒಂದೊಂದು ಸ್ಥಾನ ಏರಿಕೆ ಕಂಡಿದ್ದಾರೆ.
ಬ್ಯಾಟರ್ ಗಳ ಶ್ರೇಯಾಂಕದಲ್ಲಿ ಮಿಥಾಲಿ ಒಂದು ಸ್ಥಾನ ಮೇಲೇರಿ ಎರಡನೇ ಸ್ಥಾನಕ್ಕೆ ತಲುಪಿದ್ದಾರೆ. ಮಿಥಾಲಿ ದಕ್ಷಿಣ ಆಫ್ರಿಕಾದ ಬ್ಯಾಟ್ಸ್ಮನ್ ಲಿಜೆಲ್ ಲೀ ಅವರನ್ನು ಹಿಂದಿಕ್ಕಿ ಎರಡನೇ ಸ್ಥಾನ ಪಡೆದರು. ಭಾರತದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ 710 ಅಂಕಗಳೊಂದಿಗೆ ಆರನೇ ಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾದ ಅಲಿಸ್ಸಾ ಹೀಲಿ 750 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ.
Hayley Matthews moves closer to teammate Stafanie Taylor in the latest @MRFWorldwide ICC Women's ODI rankings!
All the latest changes 👉 https://t.co/jYpFw1qO5I pic.twitter.com/4wxUAVnX4h
— ICC (@ICC) February 1, 2022
ಭಾರತದ ಆಲ್ ರೌಂಡರ್ ದೀಪ್ತಿ ಶರ್ಮಾ ಇದೀಗ ಆಲ್ ರೌಂಡರ್ ಗಳ ಪಟ್ಟಿಯಲ್ಲಿ ಒಂದು ಸ್ಥಾನ ಮೇಲೇರಿ ನಾಲ್ಕನೇ ಸ್ಥಾನಕ್ಕೆ ತಲುಪಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಿಂದ ಹೊರಗುಳಿದ ನಂತರ ದಕ್ಷಿಣ ಆಫ್ರಿಕಾದ ಮರಿಜಾನೆ ಕಪ್ ಮೂರನೇ ಸ್ಥಾನಕ್ಕೆ ಕುಸಿದಿದ್ದು, ಆಲ್ರೌಂಡರ್ಗಳ ಪಟ್ಟಿಯು ಅಗ್ರಸ್ಥಾನದಲ್ಲಿ ಬದಲಾವಣೆಯನ್ನು ಕಂಡಿದೆ. ಇಂಗ್ಲೆಂಡಿನ ನಟಾಲಿ ಸ್ಕೈವರ್ ಮತ್ತು ಆಸ್ಟ್ರೇಲಿಯಾದ ಎಲ್ಲಿಸ್ ಪೆರ್ರಿ ಮೊದಲ ಮತ್ತು ಎರಡನೇ ಸ್ಥಾನದಲ್ಲಿದ್ದಾರೆ.
ಭಾರತದ ಹಿರಿಯ ಬೌಲರ್ ಜೂಲನ್ ಗೋಸ್ವಾಮಿ ಬೌಲರ್ಗಳ ಅಗ್ರ 10 ಶ್ರೇಯಾಂಕದಲ್ಲಿ ಕಾಣಿಸಿಕೊಂಡಿರುವ ಏಕೈಕ ಆಟಗಾರ್ತಿ ಮತ್ತು ಅವರು ತನ್ನ ಎರಡನೇ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಬೌಲರ್ ಜೆಸ್ ಜೊನಾಸನ್ ಅಗ್ರಸ್ಥಾನದಲ್ಲಿದ್ದಾರೆ.
ವೆಸ್ಟ್ ಇಂಡೀಸ್ ಆಲ್ ರೌಂಡರ್ ಹೇಯ್ಲಿ ಮ್ಯಾಥ್ಯೂಸ್ ಅವರು ದಕ್ಷಿಣ ಆಫ್ರಿಕಾ ವಿರುದ್ಧದ ತನ್ನ ನಾಲ್ಕು ಪಂದ್ಯಗಳ ಮೊದಲ ಎರಡು ಪಂದ್ಯಗಳಲ್ಲಿ ಪ್ರಭಾವಿ ಪ್ರದರ್ಶನ ನೀಡಿದ ನಂತರ ಇತ್ತೀಚಿನ ಬೌಲರ್ ರ್ಯಾಂಕಿಂಗ್ನಲ್ಲಿ ನಾಲ್ಕು ಸ್ಥಾನ ಮೇಲೇರಿ 11ನೇ ಸ್ಥಾನಕ್ಕೆ ತಲುಪಿದ್ದಾರೆ.