ಭಾರತ ಹಾಗೂ ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಟಿ-20 ಪಂದ್ಯಕ್ಕೂ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿರಾಟ್ ಕೊಹ್ಲಿ ಅವರ ಫಾರ್ಮ್ ಬಗ್ಗೆ ಮಾಧ್ಯಮದವರು ಪ್ರಶ್ನೆ ಕೇಳಿದಾಗ ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಕೋಪಗೊಂಡಿದ್ದಾರೆ. ಅಲ್ಲದೆ ನಾಯಕನಾಗಿ, ಮಾಜಿ ನಾಯಕನನ್ನು ಅವರು ಸಮರ್ಥಿಸಿಕೊಂಡರು.
ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಮಾಜಿ ನಾಯಕ ಕೊಹ್ಲಿ ಸಂಪೂರ್ಣ ವಿಫಲರಾಗಿದ್ದಾರೆ, ಈ ಬಗ್ಗೆ ಕೇಳಿದಾಗ, ಈ ಎಲ್ಲಾ ವಿಷಯಗಳು ಮಾಧ್ಯಮದಿಂದ ಪ್ರಾರಂಭವಾಗುತ್ತವೆ. ಮಾಧ್ಯಮದವರು ಸ್ವಲ್ಪ ಹೊತ್ತು ಸುಮ್ಮನಿದ್ದರೆ ಎಲ್ಲವೂ ಸರಿಹೋಗುತ್ತದೆ” ಎಂದಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿ ಫೆಬ್ರವರಿ 16 ರಿಂದ ಕೋಲ್ಕತ್ತಾದಲ್ಲಿ ಆರಂಭವಾಗಲಿದೆ.
“ಇನ್ನು ವಿರಾಟ್ ಬಗ್ಗೆ ಚರ್ಚೆ ನಿಲ್ಲಿಸಿದರೆ ಎಲ್ಲವೂ ಸರಿ ಹೋಗುತ್ತದೆ ಎಂದು ರೋಹಿತ್ ಹೇಳಿದ್ದಾರೆ. ಕೊಹ್ಲಿ ಮೇಲೆ ಯಾವುದೇ ಒತ್ತಡವಿಲ್ಲ ಮತ್ತು ಅವರು ಶೀಘ್ರದಲ್ಲೇ ಉತ್ತಮ ಪ್ರದರ್ಶನ ನೀಡುತ್ತಾರೆ” ಎಂಬ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಟೀಂ ಇಂಡಿಯಾದಿಂದ ಹೊರಗುಳಿದಿರುವ ಬಗ್ಗೆ ಪ್ರಶ್ನೆಗೆ ರೋಹಿತ್ ಶರ್ಮಾ, ‘ನಮಗೆ ಬಿಡುವಿಲ್ಲದ ವೇಳಾಪಟ್ಟಿ ಇದೆ ಮತ್ತು ಆಟಗಾರರು ಗಾಯಗೊಳ್ಳುತ್ತಾರೆ. ಗಾಯಗೊಂಡ ಆಟಗಾರರ ಬದಲಿಗೆ ಉತ್ತಮ ಪ್ರದರ್ಶನ ನೀಡುವ ಆಟಗಾರರಿಗೆ ನಾವು ಅವಕಾಶಗಳನ್ನು ನೀಡುವುದು ಮುಖ್ಯವಾಗಿದೆ. ಹಾರ್ದಿಕ್ ಪಾಂಡ್ಯ ಪ್ರಮುಖ ಆಟಗಾರ, ಅವರು ಅದ್ಭುತ ಆಲ್ ರೌಂಡರ್. ಅವರ ಲಭ್ಯರಾದಾಗ ಅವರ ಬಗ್ಗೆ ಮಾತನಾಡೋಣ ಎಂದಿದ್ದಾರೆ.