ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ 2ನೇ ಏಕದಿನ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಉಭಯ ತಂಡಗಳ ನಡುವಿನ ಈ ಪಂದ್ಯ ಇಂಧೋರ್‌ನ ಹೋಲ್ಕರ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ 5 ವಿಕೆಟ್‌ಗಳ ಗೆಲುವಿನೊಂದಿಗೆ 1-0 ಮುನ್ನಡೆ ಸಾಧಿಸಿದ್ದು, ಇಂದಿನ ಪಂದ್ಯವನ್ನ ಗೆದ್ದು ಸರಣಿ ತನ್ನದಾಗಿಸಿಕೊಳ್ಳುವ ಲೆಕ್ಕಾಚಾರದೊಂದಿಗೆ ಭಾರತ ಕಣಕ್ಕಿಳಿಯಲು ಸಜ್ಜಾಗಿದ್ದರೆ. ಮತ್ತೊಂದೆಡೆ ಸೋಲಿನ ಸುಳಿಯಿಂದ ಹೊರಬರುವ ನಿರೀಕ್ಷೆಯಲ್ಲಿರುವ ಆಸ್ಟ್ರೇಲಿಯಾ ಕೂಡ ಈ ಪಂದ್ಯದಲ್ಲಿ ಗೆಲುವಿನ ಲಯಕ್ಕೆ ಮರಳುವ ತವಕದಲ್ಲಿದೆ.
ಉಭಯ ತಂಡಗಳು ಮಹತ್ವದ ಬದಲಾವಣೆಯೊಂದಿಗೆ 2ನೇ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯುತ್ತಿವೆ. ಭಾರತದ ಪರ ಪ್ರಮುಖ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿಯಲ್ಲಿ ಕರ್ನಾಟಕದ ಆಟಗಾರ ಪ್ರಸಿದ್ಧ ಕೃಷ್ಣ ಪ್ಲೇಯಿಂಗ್ ಇಲವೆನ್‌ನಲ್ಲಿ ಸ್ಥಾನ ಪಡೆದಿದ್ದರೆ. ಬ್ಯಾಟಿಂಗ್‌ನಲ್ಲಿ ಯಾವುದೇ ಬದಲಾವಣೆ ಇಲ್ಲದೆ ಕಣಕ್ಕಿಳಿಯುತ್ತಿದ್ದು, ಮೊದಲ ಪಂದ್ಯದಲ್ಲಿ ಬ್ಯಾಟಿಂಗ್ ವೈಫಲ್ಯ ಕಂಡಿದ್ದ ಶ್ರೇಯಸ್ ಅಯ್ಯರ್‌ಗೆ ಮತ್ತೊಂದು ಅವಕಾಶ ನೀಡಲಾಗಿದೆ.
ಮತ್ತೊಂದೆಡೆ ಆಸ್ಟ್ರೇಲಿಯಾ ತಂಡ ನಾಯಕತ್ವದ ಸೇರಿದಂತೆ ತಂಡದ ಪ್ಲೇಯಿಂಗ್ ಇಲವೆನ್‌ನಲ್ಲಿ ಭಾರೀ ಬದಲಾವಣೆ ಮಾಡಿಕೊಂಡಿದೆ. ನಾಯಕ ಪ್ಯಾಟ್ ಕಮ್ಮಿನ್ಸ್ ಅನುಪಸ್ಥಿತಿಯಲ್ಲಿ ಅನುಭವಿ ಆಟಗಾರ ಸ್ಟೀವ್ ಸ್ಮಿತ್ 2ನೇ ಪಂದ್ಯದಲ್ಲಿ ಆಸೀಸ್ ತಂಡವನ್ನ ಮುನ್ನಡೆಸುತ್ತಿದ್ದಾರೆ. ಇವರೊಂದಿಗೆ ಆಲ್ರೌಂಡರ್‌ಗಳಾದ ಮಿಚೆಲ್ ಮಾರ್ಷ್, ಮಾರ್ಕಸ್ ಸ್ಟಾಯ್ನಿಸ್ ಇಂದಿನ ಪಂದ್ಯದಿಂದ ಹೊರಗುಳಿದಿದ್ದಾರೆ. ಇವರುಗಳ ಬದಲಿಗೆ ಜೋಶ್ ಹೇಜ಼ಲ್ವುಡ್, ಅಲೆಕ್ಸ್ ಕ್ಯಾರಿ ಹಾಗೂ ಸ್ಪೆನ್ಸರ್ ಜಾನ್ಸನ್ ಅವರುಗಳು ಪ್ಲೇಯಿಂಗ್ ಇಲವೆನ್‌ನಲ್ಲಿ ಕಾಣಿಸಿಕೊಂಡಿದ್ದಾರೆ.
ಭಾರತ ತಂಡ: ಶುಭ್ಮನ್ ಗಿಲ್, ಋತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಆರ್. ಅಶ್ವಿನ್, ಶಾರ್ದೂಲ್ ಥಾಕೂರ್, ಮೊಹಮ್ಮದ್ ಶಮಿ, ಪ್ರಸಿದ್ಧ ಕೃಷ್ಣ.
ಆಸ್ಟ್ರೇಲಿಯಾ ತಂಡ: ಡೇವಿಡ್ ವಾರ್ನರ್, ಮ್ಯಾಥ್ಯೂ ಶಾರ್ಟ್, ಸ್ಟೀವ್ ಸ್ಮಿತ್, ಮಾರ್ನಸ್ ಲಬುಶೇನ್, ಜೋಶ್ ಇಂಗ್ಲಿಸ್, ಅಲೆಕ್ಸ್ ಕ್ಯಾರಿ, ಕೆಮರೂನ್ ಗ್ರೀನ್, ಸೆನ್ ಅಬೋಟ್, ಆಡಂ ಜ಼ಂಪ, ಜೋಶ್ ಹೇಜ಼ಲ್ವುಡ್, ಸ್ಪೆನ್ಸರ್ ಜಾನ್ಸನ್.
IND v AUS, Team India, Australia, ODI Series, Sports Karnataka