ಆಸ್ಟ್ರೇಲಿಯಾ ಸ್ಪಿನ್ನರ್ಗಳ ದಾಳಿಗೆ ತತ್ತರಿಸಿದ ಭಾರತ ಇಂಧೋರ್ನಲ್ಲಿ ಬುಧವಾರ ಆರಂಭಗೊಂಡ 3ನೇ ಟೆಸ್ಟ್ನ ಮೊದಲ ಇನ್ನಿಂಗ್ಸ್ನಲ್ಲಿ ಅಲ್ಪ ಮೊತ್ತಕ್ಕೆ ಆಲೌಟ್ ಆಗುವ ಮೂಲಕ ನಿರಾಸೆ ಅನುಭವಿಸಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ, ಬ್ಯಾಟಿಂಗ್ ವೈಫಲ್ಯಕ್ಕೆ ಸಿಲುಕಿತು. ಆಸೀಸ್ ಸ್ಪಿನ್ನರ್ಗಳ ಪರಿಣಾಮಕಾರಿ ಬೌಲಿಂಗ್ ದಾಳಿಗೆ ತತ್ತರಿಸಿದ ಟೀಂ ಇಂಡಿಯಾ, ತನ್ನ ಮೊದಲ ಇನ್ನಿಂಗ್ಸ್ನಲ್ಲಿ 109 ರನ್ಗಳಿಗೆ ಆಲೌಟ್ ಆಯಿತು. ಇದು ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ನಲ್ಲಿ ಭಾರತ ತನ್ನ ತವರಿನಲ್ಲಿ ಕಲೆಹಾಕಿದ 4ನೇ ಅತಿ ಕಡಿಮೆ ಮೊತ್ತವಾಗಿದೆ.
ಈ ಹಿಂದೆ ಆಸ್ಟ್ರೇಲಿಯಾ ವಿರುದ್ಧ 2004ರಲ್ಲಿ ನಡೆದ ಮುಂಬೈ ಟೆಸ್ಟ್ನಲ್ಲಿ ಭಾರತ 104 ರನ್ಗಳಿಗೆ ಆಲೌಟ್ ಆಗಿತ್ತು. ಇದಾದ ನಂತರ 2017ರಲ್ಲಿ ಪುಣೆಯಲ್ಲಿ ನಡೆದ ಟೆಸ್ಟ್ನಲ್ಲಿ 105 ಮತ್ತು 107 ರನ್ಗಳಿಗೆ ಆಲೌಟ್ ಆಗಿತ್ತು. ಇದೀಗ ಇಂಧೋರ್ನಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ನ ಮೊದಲ ದಿನದಾಟದಲ್ಲೇ ಆಸೀಸ್ ಸ್ಪಿನ್ ದಾಳಿಗೆ ತತ್ತರಿಸಿದ ಭಾರತ, 109 ರನ್ಗಳಿಗೆ ಆಲೌಟ್ ಆಗಿ ನಿರಾಸೆ ಮೂಡಿಸಿದೆ.
ಆಸ್ಟ್ರೇಲಿಯಾ ಪರ ಆಕ್ರಮಣಕಾರಿ ದಾಳಿ ನಡೆಸಿದ ಕೊನೆಮನ್(5/16) ಟೀಂ ಇಂಡಿಯಾ ಬ್ಯಾಟ್ಸ್ಮನ್ಗಳಿಗೆ ಕಡಿವಾಣ ಹಾಕಿದರೆ. ಇವರಿಗೆ ಉತ್ತಮ ಸಾಥ್ ನೀಡಿದ ಲಿಯೋನ್(3/35) ಹಾಗೂ ಮರ್ಫಿ(1/23) ಯಶಸ್ವಿ ಬೌಲಿಂಗ್ ದಾಳಿ ನಡೆಸಿದರು. ಇನ್ನು ಭಾರತದ ಪರವಾಗಿ ವಿರಾಟ್ ಕೊಹ್ಲಿ(22) ಹಾಗೂ ಶುಭ್ಮನ್ ಗಿಲ್(21) ರನ್ಗಳಿಸಿದ್ದು ಬಿಟ್ಟರೆ ಉಳಿದವರಿಂದ ಉತ್ತಮ ಇನ್ನಿಂಗ್ಸ್ ಬರಲಿಲ್ಲ.
IND v AUS, Team India, Australia, Rohit Sharma, Sports Karnataka