ಅತಿಥೇಯ ಭಾರತ ಹಾಗೂ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯ ಇಂದು ನಡೆಯಲಿದ್ದು, ಇಂಧೋರ್ನ ಹೋಲ್ಕರ್ ಸ್ಟೇಡಿಯಂನಲ್ಲಿ ಸೋಲನ್ನೇ ಅರಿಯದ ಭಾರತ, ತನ್ನ ಗೆಲುವಿನ ನಾಗಾಲೋಟ ಮುಂದುವರಿಸುವ ನಿರೀಕ್ಷೆಯಲ್ಲಿದೆ.
Indore
ಇಂಧೋರ್ನ ಹೋಲ್ಕರ್ ಸ್ಟೇಡಿಯಂನಲ್ಲಿ ಟೀಂ ಇಂಡಿಯಾ ಏಕದಿನ ಪಂದ್ಯದಲ್ಲಿ ಅದ್ಭುತ ದಾಖಲೆ ಹೊಂದಿದ್ದು, 2006ರಲ್ಲಿ ಭಾರತ ಈ ಮೈದಾನದಲ್ಲಿ ತನ್ನ ಮೊದಲ ಪಂದ್ಯವನ್ನಾಡಿತ್ತು. ಅಂದಿನಿಂದ ಇಂದಿನವರೆಗೂ ಈ ಮೈದಾನದಲ್ಲಿ ಆಡಿರುವ ಎಲ್ಲಾ ಪಂದ್ಯಗಳಲ್ಲೂ ಭಾರತ ಗೆಲುವಿನ ನಗೆಬೀರಿದೆ. ಹೀಗಾಗಿ 17 ವರ್ಷಗಳಿಂದ ಇಂಧೋರ್ ಮೈದಾನದಲ್ಲಿ ಸೋಲನ್ನೇ ಕಾಣದ ಭಾರತ ತಂಡ, ಇಂದು ನಡೆಯುವ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯದಲ್ಲೂ ಗೆಲುವಿನ ಓಟವನ್ನ ಮುಂದುವರಿಸುವ ಲೆಕ್ಕಾಚಾರದಲ್ಲಿದೆ.
ಇಂಧೋರ್ನ ಹೋಲ್ಕರ್ ಸ್ಟೇಡಿಯಂನಲ್ಲಿ ಭಾರತ ತಂಡ ಈವರೆಗೂ 6 ಏಕದಿನ ಪಂದ್ಯಗಳನ್ನಾಡಿದ್ದು, ಈ ಎಲ್ಲಾ ಪಂದ್ಯಗಳಲ್ಲೂ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಪ್ರಸಕ್ತ ವರ್ಷದ ಆರಂಭದಲ್ಲಿ ಇದೇ ಮೈದಾನದಲ್ಲಿ ನ್ಯೂಜಿ಼ಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ 90 ರನ್ಗಳ ಭರ್ಜರಿ ಗೆಲುವು ಸಾಧಿಸಿತ್ತು. ಜೂನ್ 24ರಂದು ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ, 50 ಓವರ್ಗಳಲ್ಲಿ 385/9 ರನ್ಗಳ ಬೃಹತ್ ಮೊತ್ತ ಕಲೆಹಾಕಿತ್ತು. ಅಂದಿನ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ(101) ಹಾಗೂ ಶುಭ್ಮನ್ ಗಿಲ್(112) ಭರ್ಜರಿ ಶತಕ ಬಾರಿಸಿ ಮಿಂಚಿದ್ದರು. ಈ ಟಾರ್ಗೆಟ್ ಚೇಸ್ ಮಾಡಿದ ಕಿವೀಸ್ ಪಡೆ ಡೆವೋನ್ ಕಾನ್ವೆ(138) ಶತಕದ ನಡುವೆಯೂ ಕುಲ್ದೀಪ್ ಯಾದವ್(3/62) ಹಾಗೂ ಶಾರ್ದೂಲ್ ಥಾಕೂರ್(3/45) ಅವರ ಉತ್ತಮ ಬೌಲಿಂಗ್ನಿಂದ 41.2 ಓವರ್ಗಳಿಗೆ 295 ರನ್ಗಳಿಸಿ ಆಲೌಟ್ ಆಗಿತ್ತು.
ಇದೀಗ 3 ಪಂದ್ಯಗಳ ಏಕದಿನ ಸರಣಿಯ 2ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನ ಎದುರಿಸುತ್ತಿರುವ ಭಾರತ, ಮತ್ತೊಂದು ಗೆಲುವು ಸಾಧಿಸುವ ತವಕದಲ್ಲಿದೆ. ಈ ಹಿಂದೆ 2017ರಲ್ಲಿ ಭಾರತದ ವಿರುದ್ಧ ಇಂಧೋರ್ನಲ್ಲಿ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾ 5 ವಿಕೆಟ್ಗಳ ಸೋಲು ಕಂಡಿತ್ತು.
IND v AUS, Team India, Australia, Indore, Sports Karnataka