ಟೀಂ ಇಂಡಿಯಾದ ಆರಂಭಿಕ ಬ್ಯಾಟರ್ ಶುಭ್ಮನ್ ಗಿಲ್, ಆಸ್ಟ್ರೇಲಿಯಾ ವಿರುದ್ಧದ 2ನೇ ಪಂದ್ಯಕ್ಕೆ ಭರ್ಜರಿ ತಯಾರಿ ಮಾಡಿಕೊಂಡಿದ್ದಾರೆ. ಪ್ರಸಕ್ತ ವರ್ಷದಲ್ಲಿ ಅದ್ಭುತ ಬ್ಯಾಟಿಂಗ್ ಲಯದಲ್ಲಿರುವ ಗಿಲ್, ಮತ್ತೊಂದು ಅದ್ಭುತ ಇನ್ನಿಂಗ್ಸ್ ಆಡುವ ನಿರೀಕ್ಷೆ ಮೂಡಿಸಿದ್ದಾರೆ.
ಉಭಯ ತಂಡಗಳ 2ನೇ ಏಕದಿನ ಪಂದ್ಯ ಇಂಧೋರ್ನ ಹೋಲ್ಕರ್ ಸ್ಟೇಡಿಯಂನಲ್ಲಿ ನಡೆಯುತ್ತಿರುವುದು ಶುಭ್ಮನ್ ಗಿಲ್ ಅವರ ನಿರೀಕ್ಷೆ ಹೆಚ್ಚುವಂತೆ ಮಾಡಿದೆ. ಈ ಹಿಂದೆ 2023ರ ಜೂನ್ 24ರಂದು ಇದೇ ಮೈದಾನದಲ್ಲಿ ನ್ಯೂಜಿ಼ಲೆಂಡ್ ವಿರುದ್ಧದ ಪಂದ್ಯದಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದ ಗಿಲ್ (112 ರನ್, 78 ಬಾಲ್, 13 ಬೌಂಡರಿ, 5 ಸಿಕ್ಸ್) ಭರ್ಜರಿ ಶತಕ ಬಾರಿಸಿ ಮಿಂಚಿದ್ದರು. ಅಲ್ಲದೇ ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಮೊದಲ ವಿಕೆಟ್ಗೆ 212 ರನ್ಗಳ ಅದ್ಭುತ ಜೊತೆಯಾಟವಾಡಿ ತಂಡದ ಗೆಲುವಿಗೆ ಕಾರಣವಾಗಿದ್ದರು.
ಇದೇ ನೆನಪಿನೊಂದಿಗೆ ಇಂಧೋರ್ನ ಹೋಲ್ಕರ್ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯಕ್ಕೆ ಶುಭ್ಮನ್ ಗಿಲ್ ತಯಾರಿ ಮಾಡಿಕೊಂಡಿದ್ದಾರೆ. ಮೂರು ಪಂದ್ಯಗಳ ಸರಣಿಯ 1ನೇ ಪಂದ್ಯದಲ್ಲಿ ಮೊಹಾಲಿಯಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದ ಗಿಲ್, 63 ಬಾಲ್ಗಳಲ್ಲಿ 6 ಬೌಂಡರಿ, 2 ಸಿಕ್ಸ್ ನೆರವಿನಿಂದ 74 ರನ್ಗಳಿಸಿ ಮಿಂಚಿದ್ದರು. ಹೀಗಾಗಿ ಅದ್ಭುತ ಬ್ಯಾಟಿಂಗ್ ಲಯದಲ್ಲಿರುವ ಶುಭ್ಮನ್ ಗಿಲ್, 2ನೇ ಏಕದಿನ ಪಂದ್ಯದಲ್ಲೂ ಶ್ರೇಷ್ಠ ಪ್ರದರ್ಶನ ನೀಡುವ ಮೂಲಕ ಭಾರತಕ್ಕೆ ಗೆಲುವು ತಂದುಕೊಂಡುವ ತವಕದಲ್ಲಿದ್ದಾರೆ.
IND v AUS, Team India, Shubman Gill, Australia, Indore