ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ನಾಲ್ಕು ಪಂದ್ಯಗಳು ಮುಕ್ತಾಯಗೊಂಡ ಬೆನ್ನಲ್ಲೇ ಪ್ರವಾಸಿ ಆಸ್ಟ್ರೇಲಿಯಾ ಹಾಗೂ ಅತಿಥೇಯ ಭಾರತ ತಂಡಗಳು ODI ಸರಣಿಯಲ್ಲಿ ಹಣಾಹಣಿ ನಡೆಸಲು ಸಜ್ಜಾಗಿದ್ದು, ಏಕದಿನ ಸರಣಿಯ ಮೊದಲ ಪಂದ್ಯ ಮಾ.17ರಂದು ನಡೆಯಲಿದೆ.
ಆಸೀಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ತಂಡದ ಬ್ಯಾಟಿಂಗ್ ದಿಗ್ಗಜ ವಿರಾಟ್ ಕೊಹ್ಲಿ ಮಹತ್ವದ ಮೈಲುಗಲ್ಲು ತಲುಪುವತ್ತ ಕಣ್ಣಿಟ್ಟಿದ್ದಾರೆ. ವಿಶ್ವ ಕ್ರಿಕೆಟ್‌ನ ಬ್ಯಾಟಿಂಗ್ ಸೂಪರ್ ಸ್ಟಾರ್ ಆಗಿರುವ ಕಿಂಗ್ ಕೊಹ್ಲಿ, ಏಕದಿನ ಕ್ರಿಕೆಟ್‌ನಲ್ಲಿ 13 ಸಾವಿರ ರನ್‌ಗಳ ಗಡಿ ದಾಟಲು ಸಜ್ಜಾಗಿದ್ದಾರೆ.
ಆಸೀಸ್ ವಿರುದ್ಧದ ಸರಣಿಯಲ್ಲಿ ಈ ಸಾಧನೆ ಮಾಡುವ ಮೂಲಕ ODIನಲ್ಲಿ 13 ಸಾವಿರ ರನ್‌ಗಳಿಸಿದ 5ನೇ ಆಟಗಾರ ಎಂಬ ಹೆಗ್ಗಳಿಕೆ ಪಡೆಯುವ ತವಕದಲ್ಲಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಸದ್ಯ, 12809 ರನ್‌ಗಳಿಸಿದ್ದು, 13 ಸಾವಿರ ರನ್‌ಗಳನ್ನ ಪೂರೈಸಲು 191 ರನ್‌ಗಳ ಅಗತ್ಯವಿದೆ.
ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್‌ನಲ್ಲಿ ಭರ್ಜರಿ ಶತಕ ಬಾರಿಸಿದ್ದ ವಿರಾಟ್ ಕೊಹ್ಲಿ, ODI ಸರಣಿಯಲ್ಲೂ ಇದೇ ಫಾರ್ಮ್ ಮುಂದುವರಿಸುವ ನಿರೀಕ್ಷೆಯಲ್ಲಿದ್ದಾರೆ. ಮೂರು ಪಂದ್ಯಗಳ ಸರಣಿಯಲ್ಲಿ 191 ರನ್‌ಗಳನ್ನ ಪೂರೈಸಿದ್ದೇ ಆದಲ್ಲಿ, ದಾಖಲೆಗಳ ಸರದಾರ ಎನಿಸಿರುವ ವಿರಾಟ್ ಕೊಹ್ಲಿ ಮುಡಿಗೆ ಮತ್ತೊಂದು ಗರಿ ಸೇರಿದಂತಾಗಲಿದೆ.
IND v AUS, Team India, Australia, Virat Kohli, Sports Karnataka