ಮಳೆಯ ಕಾರಣದಿಂದ 12 ಓವರ್ಗಳಿಗೆ ಸೀಮಿತಗೊಂಡ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದ ಟೀಂ ಇಂಡಿಯಾ, ಅತಿಥೇಯ ಐರ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 7 ವಿಕೆಟ್ಗಳ ಗೆಲುವು ಸಾಧಿಸಿತು.
ಡುಬ್ಲಿನ್ ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ಕೆ ಮಾಡಿದರು. ಆದರೆ ಪಂದ್ಯದ ಆರಂಭಕ್ಕೆ ಕೆಲವೇ ಹೊತ್ತಿನ ಮುಂಚೆ ಸುರಿದ ಮಳೆಯಿಂದಾಗಿ ಪಂದ್ಯವನ್ನ 12 ಓವರ್ಗಳಿಗೆ ಕಡಿತಗೊಳಿಸಲಾಯಿತು. ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ 12 ಓವರ್ಗಳಲ್ಲಿ 108/4 ಸ್ಪರ್ಧಾತ್ಮಕ ಮೊತ್ತ ಕಲೆಹಾಕಿತು. ಟಾರ್ಗೆಟ್ ಚೇಸ್ ಮಾಡಿದ ಭಾರತ 9.2 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ 111 ರನ್ ಕಲೆಹಾಕುವ ಮೂಲಕ 7 ವಿಕೆಟ್ಗಳ ಗೆಲುವು ಕಂಡಿತು. ಆ ಮೂಲಕ ಎರಡು ಪಂದ್ಯಗಳ ಸರಣಿಯಲ್ಲಿ ಭಾರತ 1-0 ಮುನ್ನಡೆ ಪಡೆಯಿತು.

ಹ್ಯಾರಿ ಟೆಕ್ಟರ್ ಆಸರೆ:
ಮೊದಲು ಬ್ಯಾಟಿಂಗ್ ಆರಂಭಿಸಿದ ಐರ್ಲೆಂಡ್ ಆರಂಭದಲ್ಲಿ ಬ್ಯಾಟಿಂಗ್ ವೈಫಲ್ಯ ಕಂಡಿತು. ಇನ್ನಿಂಗ್ಸ್ ಆರಂಭಿಸಿದ ಸ್ಟಿರ್ಲಿಂಗ್(4) ಹಾಗೂ ಬೆಲ್ಬರ್ನಿ(0) ಬಹುಬೇಗನೆ ವಿಕೆಟ್ ಒಪ್ಪಿಸಿದರು. ನಂತರ ಬಂದ ಡೆಲಾನಿ(8) ಕೂಡ ಬ್ಯಾಟಿಂಗ್ ವೈಫಲ್ಯ ಅನುಭವಿಸಿದರು. ಈ ಹಂತದಲ್ಲಿ ಕಣಕ್ಕಿಳಿದ ಹ್ಯಾರಿ ಟೆಕ್ಟರ್ 64 ರನ್(33 ಬಾಲ್, 6 ಬೌಂಡರಿ, 3 ಸಿಕ್ಸ್) ಸ್ಪೋಟಕ ಬ್ಯಾಟಿಂಗ್ ಮೂಲಕ ತಂಡದ ಮೊತ್ತವನ್ನ 100ರ ಗಡಿದಾಟಿಸಿದರು. ಇವರಿಗೆ ಸಾಥ್ ನೀಡಿದ ಟಕರ್(18) ಅಲ್ಪಮೊತ್ತದ ರನ್ ಗಳಿಸಿದರು. ಅಂತಿಮವಾಗಿ ಐರ್ಲೆಂಡ್ 12 ಓವರ್ಗಳಲ್ಲಿ 108 ರನ್ ಗಳಿಸಿತು. ಭಾರತದ ಪರ ಭುವನೇಶ್ವರ್, ಅವೇಶ್, ಹಾರ್ದಿಕ್ ಮತ್ತು ಚಹಲ್ ತಲಾ 1 ವಿಕೆಟ್ ಪಡೆದರು.
ಹೂಡ ಬಿರುಸಿನ ಆಟ:
ಐರ್ಲೆಂಡ್ ನೀಡಿದ ಸ್ಪರ್ಧಾತ್ಮಕ ಮೊತ್ತ ಎದುರಿಸಿದ ಭಾರತಕ್ಕೆ ದೀಪಕ್ ಹೂಡ 47 ರನ್(29 ಬಾಲ್, 6 ಬೌಂಡರಿ, 2 ಸಿಕ್ಸ್) ಹಾಗೂ ಇಶಾನ್ ಕಿಶನ್ 26(11) ಬಿರುಸಿನ ಆರಂಭ ಒದಗಿಸಿದರು. ಮೊದಲ ಕ್ರಮಾಂಕದಲ್ಲಿ ಬಂದ ಸೂರ್ಯಕುಮಾರ್(0) ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸಿ ನಿರಾಸೆ ಅನುಭವಿಸಿದು. ಬಳಿಕ ನಾಯಕ ಹಾರ್ದಿಕ್ ಪಾಂಡ್ಯ 24(12) ಔಟಾದರು. ಅಂತಿಮವಾಗಿ ದಿನದ ಕಾರ್ತಿಕ್(5*) ತಂಡಕ್ಕೆ ಗೆಲುವು ತಂದುಕೊಟ್ಟರು. ಐರ್ಲೆಂಡ್ ಪರ ಕ್ರೆಗ್ ಯಂಗ್ 2, ಜೊಸುವ ಲಿಟಲ್ 1 ವಿಕೆಟ್ ಪಡೆದರು.