ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಅದ್ಭುತ ವೇಗದ ಜೊತೆಗೆ ಪರಿಣಾಮಕಾರಿ ಬೌಲಿಂಗ್‌ನಿಂದ ಗಮನ ಸೆಳೆದಿದ್ದ ಉಮ್ರಾನ್ ಮಲ್ಲಿಕ್, ನಿರೀಕ್ಷೆಯಂತೆ ಕಡೆಗೂ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದಾರೆ.
ಈ ಬಾರಿಯ ಐಪಿಎಲ್‌ನಲ್ಲಿ ಸನ್‌ರೈಸರ್ಸ್ ಹೈದ್ರಾಬಾದ್ ಪರ ಅದ್ಭುತ ವೇಗದ ಬೌಲಿಂಗ್ ದಾಳಿಯಿಂದ ಎದುರಾಳಿಗಳ ನಿದ್ದೆಗೆಡಿಸಿದ್ದ ಜಮ್ಮು-ಕಾಶ್ಮೀರದ ʼಸ್ಪೀಡ್ ಸ್ಟಾರ್ʼ ಉಮ್ರಾನ್ ಮಲ್ಲಿಕ್, ಕೋಟ್ಯಾಂತರ ಕ್ರಿಕೆಟ್ ಅಭಿಮಾನಿಗಳ ಜೊತೆಗೆ ಹಲವು ಮಾಜಿ ಕ್ರಿಕೆಟಿಗರ ಮನಗೆದ್ದಿದ್ದರು. ಉಮ್ರಾನ್ ಮಲ್ಲಿಕ್ ಅವರ ಬೌಲಿಂಗ್ ಗಮನಿಸಿದ್ದ ಮಾಜಿ ಕ್ರಿಕೆಟಿಗರು ಯುವ ವೇಗಿ ಭಾರತ ತಂಡದಲ್ಲಿ ಸ್ಥಾನ ಪಡೆಯುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದರು.
ಎಲ್ಲಾ ನಿರೀಕ್ಷೆಗೆ ತಕ್ಕಂತೆ ಐರ್ಲೆಂಡ್ ಪ್ರವಾಸಕ್ಕೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದ ಉಮ್ರಾನ್ ಮಲ್ಲಿಕ್, ಐರ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದಾರೆ. ಪಂದ್ಯದ ಆರಂಭಕ್ಕೂ ಮುನ್ನ ನಡೆದ ಟೀಂ ಹರ್ಡಲ್‌ನಲ್ಲಿ ಭಾರತ ತಂಡದ ಉಪ ನಾಯಕ ಹಾಗೂ ಅನುಭವಿ ವೇಗದ ಬೌಲರ್ ಭುವನೇಶ್ವರ್ ಕುಮಾರ್ ಅವರಿಂದ ಕ್ಯಾಪ್ ಸ್ವೀಕರಿಸುವ ಮೂಲಕ ಉಮ್ರಾನ್ ಮಲ್ಲಿಕ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಎಂಟ್ರಿಕೊಟ್ಟಿದ್ದಾರೆ.

ಭಾರತ ಬೌಲಿಂಗ್ ಆಯ್ಕೆ:
ಐರ್ಲೆಂಡ್ ವಿರುದ್ಧ ಡುಬ್ಲಿನ್‌ನಲ್ಲಿ ಇಂದು ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಇದೇ ಮೊದಲ ಬಾರಿಗೆ ಟೀಂ ಇಂಡಿಯಾದ ನಾಯಕತ್ವವಹಿಸಿರುವ ಹಾರ್ದಿಕ್ ಪಾಂಡ್ಯ ಮೊದಲ ಪಂದ್ಯದಲ್ಲೇ ಟಾಸ್ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಇತ್ತೀಚೆಗೆ ತವರಿನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತದ ಕ್ಯಾಪ್ಟನ್ ಆಗಿದ್ದ ರಿಷಬ್ ಪಂತ್ ಸತತ ಐದು ಪಂದ್ಯಗಳಲ್ಲಿ ಟಾಸ್ ಸೋತಿದ್ದರು.
ಭಾರತ ತಂಡ: ಋತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ(ನಾಯಕ), ದಿನೇಶ್ ಕಾರ್ತಿಕ್, ಅಕ್ಸರ್ ಪಟೇಲ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಯುಜು಼ವೇಂದ್ರ ಚಹಲ್, ಉಮ್ರಾನ್ ಮಲ್ಲಿಕ್.
ಐರ್ಲೆಂಡ್ ತಂಡ: ಪೌಲ್ ಸ್ಟಿರ್ಲಿಂಗ್, ಆಂಡ್ರೋ ಬಾಲ್ಬರ್ನಿ(ನಾಯಕ), ಗರೆಥ್ ಡೆಲಾನಿ, ಹ್ಯಾರಿ ಟೆಕ್ಟರ್, ಲೋರ್ಕನ್ ಟಕರ್, ಜಾರ್ಜ್ ಡಾಕ್ರೆಲ್, ಮಾರ್ಕ್ ಅಡೇರ್, ಆಂಡಿ ಮ್ಯಾಕ್‌ಬ್ರೈನ್, ಕ್ರೇಗ್ ಯಂಗ್, ಜೋಶುವಾ ಲಿಟಲ್, ಕಾನರ್ ಓಲ್ಫರ್ಟ್.
======================