ಪ್ರವಾಸಿ ನ್ಯೂಜಿ಼ಲೆಂಡ್ ವಿರುದ್ಧದ ಏಕದಿನ ಸರಣಿಯ 2ನೇ ಪಂದ್ಯದಲ್ಲಿ ದೊರೆತ ಅದ್ಭುತ ಗೆಲುವಿನೊಂದಿಗೆ 2-0 ಅಂತರದಲ್ಲಿ ಸರಣಿ ಗೆದ್ದಿರುವ ಟೀಂ ಇಂಡಿಯಾ ಕ್ಲೀನ್ ಸ್ವೀಪ್ನತ್ತ ಲೆಕ್ಕಾಚಾರದಲ್ಲಿದ್ದು, ಉಭಯ ತಂಡಗಳ ನಡುವಿನ ಅಂತಿಮ ಏಕದಿನ ಪಂದ್ಯ ಜ.24ರ ಮಂಗಳವಾರ ನಡೆಯಲಿದೆ.
ಮೊದಲ ಪಂದ್ಯದಲ್ಲಿ ಶುಭ್ಮನ್ ಗಿಲ್ ಅವರ ಭರ್ಜರಿ ದ್ವಿಶತಕ ಹಾಗೂ ರಾಯ್ಪುರ್ನಲ್ಲಿ ಬೌಲರ್ಗಳ ಆಕ್ರಮಣಕಾರಿ ಪ್ರದರ್ಶನ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿತ್ತು. ಸರಣಿಯ ಎರಡು ಪಂದ್ಯಗಳಲ್ಲಿ ಭಾರತ ಜಯದ ನಗೆಬೀರಿದ್ದರೂ, ಕಳೆದ ಕೆಲವು ಪಂದ್ಯದಲ್ಲಿ ತಂಡದ ಮಧ್ಯಮ ಕ್ರಮಾಂಕದ ಪ್ರದರ್ಶನ ನಿರೀಕ್ಷಿತ ಮಟ್ಟದಲ್ಲಿಲ್ಲ. ಹೀಗಾಗಿ ODI ಸರಣಿಯ ಅಂತಿಮ ಪಂದ್ಯದಲ್ಲಿ ಮಿಡಲ್ ಆರ್ಡರ್ ಪರಿಣಾಮಕಾರಿ ಪ್ರದರ್ಶನ ನೀಡುವ ತವಕದಲ್ಲಿದೆ.
ತಂಡದ ಆರಂಭಿಕ ಬ್ಯಾಟಿಂಗ್ ಕ್ರಮಾಂಕದಲ್ಲಿ ಶುಭ್ಮನ್ ಗಿಲ್ ಹಾಗೂ ರೋಹಿತ್ ಶರ್ಮ ಉತ್ತಮ ಲಯದಲ್ಲಿದ್ದರೆ. ಮಧ್ಯಮ ಕ್ರಮಾಂಕದಲ್ಲಿ ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ ಹಾಗೂ ಸೂರ್ಯಕುಮಾರ್ ಯಾದವ್ ಅವರುಗಳು ಸಾಮರ್ಥ್ಯಕ್ಕೆ ತಕ್ಕಂತೆ ಆಡಲು ಅವಕಾಶವಿದೆ. ಮೊದಲ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಸಹ ಸ್ಟ್ರಾಂಗ್ ಕಮ್ಬ್ಯಾಕ್ ಮಾಡುವ ವಿಶ್ವಾಸವಿದ್ದು, ಮುಖ್ಯವಾಗಿ ಎಡಗೈ ಸ್ಪಿನರ್ಗಳ ವಿರುದ್ಧದ ತಮ್ಮ ವೈಫಲ್ಯ ಸರಿಪಡಿಸಿಕೊಳ್ಳಬೇಕಿದೆ. ಶ್ರೇಯಸ್ ಅಯ್ಯರ್ ಹಾಗೂ ಕೆಎಲ್ ರಾಹುಲ್ ಅನುಪಸ್ಥಿತಿಯಲ್ಲಿ ತಂಡದಲ್ಲಿ ಸ್ಥಾನ ಪಡೆದಿರುವ ಸೂರ್ಯಕುಮಾರ್ ಹಾಗೂ ಇಶಾನ್ ಕಿಶನ್ ಅವರಿಂದ ನಿರೀಕ್ಷಿತ ಪ್ರದರ್ಶನ ಬಂದಿಲ್ಲ. ಹೀಗಾಗಿ ಇಬ್ಬರು ಆಟಗಾರರಿಂದ ದೊಡ್ಡ ಇನ್ನಿಂಗ್ಸ್ ಮೂಡಿಬರುವ ನಿರೀಕ್ಷೆ ಹೆಚ್ಚಿದೆ.
ಈಗಾಗಲೇ ಸರಣಿ ಗೆದ್ದಿರುವ ಭಾರತ ಕ್ಲೀನ್ ಸ್ಪೀಪ್ ಮಾಡುವ ನಿರೀಕ್ಷೆ ಜೊತೆಗೆ ನಾಳಿನ ಪಂದ್ಯವನ್ನ ಗೆದ್ದು ಐಸಿಸಿ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರುವ ಲೆಕ್ಕಾಚಾರದಲ್ಲಿದೆ. ಹೀಗಾಗಿ ಅಂತಿಮ ಏಕದಿನ ಪಂದ್ಯಕ್ಕೆ ಯಾವುದೇ ಬದಲಾವಣೆ ಇಲ್ಲದೇ ಕಣಕ್ಕಿಳಿಯುವ ಸಾಧ್ಯತೆ ಇದೆ. ಪ್ರಮುಖವಾಗಿ ಬ್ಯಾಟಿಂಗ್ ವಿಭಾಗದಲ್ಲಿ ಬದಲಾವಣೆ ಮಾಡುವ ಸಾಧ್ಯತೆ ಕಡಿಮೆ ಇದ್ದರೂ, ಬೌಲಿಂಗ್ನಲ್ಲಿ ಮೊಹಮ್ಮದ್ ಶಮಿ ಬದಲಿಗೆ ಯುವ ವೇಗಿ ಉಮ್ರಾನ್ ಮಲ್ಲಿಕ್ ಅವರನ್ನ ಆಡಿಸುವ ನಿರೀಕ್ಷೆ ಇದೆ.
Team India, New Zealand, ODI Series, Third ODI, Middle Order, Rohit Sharma, Virat Kohli, Surya Kumar